ಆರೋಗ್ಯ ವಿವಿ ಕಾಯ್ದೆ ತಿದ್ದುಪಡಿಗೆ ಎಬಿವಿಪಿ ಆಕ್ರೋಶ

ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿವಿಯ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ.

Team Udayavani, Dec 18, 2021, 5:45 PM IST

ಆರೋಗ್ಯ ವಿವಿ ಕಾಯ್ದೆ ತಿದ್ದುಪಡಿಗೆ ಎಬಿವಿಪಿ ಆಕ್ರೋಶ

ಬಾಗಲಕೋಟೆ: ರಾಜೀವ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಕಾಯ್ದೆ ತಿದ್ದುಪಡಿ ವಿರೋಧಿಸಿ ಎಬಿವಿಪಿ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ವಿವಿಧಕಾಲೇಜುಗಳ ವಿದ್ಯಾರ್ಥಿಗಳು ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಯ್ದೆ ತಿದ್ದುಪಡಿಗೆ ಆಕ್ರೋಶ ವ್ಯಕ್ತಪಡಿಸಿದರು.

ಎಬಿವಿಪಿ ಕರ್ನಾಟಕ ರಾಜ್ಯ ಹಾಸ್ಟೆಲ್‌ ಪ್ರಮುಖರಾದ ಪ್ರಕಾಶ ಪೂಜಾರ, ರಾಜ್ಯದ ಏಕೈಕ ಹಾಗೂ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾಲಯವಾದ ರಾಜೀವ್‌ ಗಾಂಧಿ ವಿಶ್ವವಿದ್ಯಾಲಯವು ದೇಶದ ವೈದ್ಯಕೀಯ ಶಿಕ್ಷಣದಲ್ಲಿ ಅಗ್ರಸ್ಥಾನದಲ್ಲಿದೆ. ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶಗಳಿಂದ ಬಂದು ವೈದ್ಯಕೀಯ ಶಿಕ್ಷಣ ಪಡೆಯಲು ವಿವಿಯ ಮೇಲೆ ಅವಲಂಬಿತರಾಗಿದ್ದಾರೆ.

ವಿವಿಗೆ ಸಂಬಂಧಿಸಿದ ಆಡಳಿತಾತ್ಮಕ ಹಾಗೂ ಹಣಕಾಸಿನ ವಿಷಯಗಳ ಬಗ್ಗೆ ಈಗಿರುವ ರಚನೆಯಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಲ್ಲಿ ಅಗತ್ಯ ತೀರ್ಮಾನ ತೆಗೆದುಕೊಳ್ಳುವ ವಿಶ್ವವಿದ್ಯಾಲಯಕ್ಕೆ ಸ್ವಾಯತ್ತತೆ ರಚನೆ ರಚನೆಯು ಈ ವರೆಗೆ ಸರಿಯಾಗಿ ನಡೆದು ಬಂದಿದೆ. ಸರ್ಕಾರವು, ವಿವಿಯ ಹಣಕಾಸಿನ ವಿಷಯಗಳನ್ನು ಇನ್ನು ಮುಂದೆ ಸರ್ಕಾರದ ಅಧೀನದಲ್ಲಿ ಇರಿಸಿಕೊಳ್ಳುವ ನಿಟ್ಟಿನಲ್ಲಿ ಈಗಿರುವ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತಿದೆ. ಆ ಮೂಲಕ ವಿವಿಯ ಹಣಕಾಸು ವಿಷಯದಲ್ಲಿ ನೇರವಾಗಿ ಭಾಗಿಯಾಗಲು ಮುಂದಾಗುತ್ತಿದೆ ಎಂದು ಆರೋಪಿಸಿದರು.

ವಿಶ್ವವಿದ್ಯಾಲಯದ ಅನುದಾನ ಉಪಯೋಗಕ್ಕೆ ವಿಶ್ವವಿದ್ಯಾಲಯದ ಒಪ್ಪಿಗೆ ಇಲ್ಲದೆ ಸರಕಾರವೇ ಏಕಪಕ್ಷೀಯವಾಗಿ ಖರ್ಚು ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿವಿಯ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ. ಯೂನಿವರ್ಸಿಟಿಯ ಅನುದಾನ ಕುರಿತು ಎಲ್ಲ ನಿರ್ಣಯವನ್ನು ಯುನಿವರ್ಸಿಟಿಯ ಆಡಳಿತ ಮಂಡಳಿಗೆ ಬಿಡುವುದೇ ಸೂಕ್ತ. ಒಂದು ವೇಳೆ ರಾಜ್ಯ ಸರ್ಕಾರ ಯುನಿವರ್ಸಿಟಿಯ ಫಂಡ್‌ ನಿರ್ವಹಣೆ ಮಾಡುವ ಅವಕಾಶ ಪಡೆದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುವ ಸಂದರ್ಭವಿರುತ್ತದೆ. ಈ ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿ ಯುನಿವರ್ಸಿಟಿಯ ಫಂಡ್‌ ಕುರಿತು
ಕಾನೂನು ತಿದ್ದುಪಡಿ ಮಾಡಬಾರದು ಎಂದು ಒತ್ತಾಯಿಸಿದರು.

ಶಿಕ್ಷಣ ಸಂಸ್ಥೆಗಳ ಒಟ್ಟು ಹಣಕಾಸಿನ ವಿಚಾರಗಳು ಸರಕಾರದ ಅಧೀನಕ್ಕೆ ಬಂದರೆ ವಿವಿಯ ಹಣವು ಸರಿಯಾಗಿ ವಿದ್ಯಾರ್ಥಿಗಳ ಅಗತ್ಯಗಳಿಗೆ ತಕ್ಕಂತೆ ಉಪಯೋಗವಾಗದೇ ಸರ್ಕಾರಗಳ ಹಿತಾಸಕ್ತಿಯ ಆಧಾರದ ಮೇಲೆ ನಡೆಯುತ್ತದೆ ಎಂಬ ಆತಂಕ ಶಿಕ್ಷಣ ತಜ್ಞರದ್ದು. ಅದರಲ್ಲೂ ಅತಿ ಹೆಚ್ಚು ಹಣಕಾಸಿನ ಠೇವಣಿ ಹೊಂದಿರುವ ವಿವಿಯಲ್ಲಿ ಭ್ರಷ್ಟಾಚಾರ ರಹಿತವಾದ, ವಿದ್ಯಾರ್ಥಿಗಳಿಗೆ ಅನುಕೂಲಕರ ರೀತಿಯಲ್ಲಿ ಹಣಕಾಸಿನ ನಿರ್ವಹಣೆ ಅವಶ್ಯಕತೆಯಿದೆ. ಸರಕಾರಗಳ
ಅàನದಲ್ಲಿ ಈ ಹಣಕಾಸಿನ ನಿರ್ವಹಣೆ ಬರದೇ ಸ್ವಾಯತ್ತತೆ ದೃಷ್ಟಿಯಿಂದ ಸರ್ಕಾರ ತನ್ನ ಪ್ರಸ್ತಾವನೆ ಹಿಂಪಡೆಯುವಂತೆ ಆಗ್ರಹಿಸಿದರು.

ಎಬಿವಿಪಿ ಜಿಲ್ಲಾ ಸಹ ಸಂಚಾಲಕರಾದ ಉನ್ನತ ಬೇವಿನಕಟ್ಟಿ, ನಗರ ಸಹ ಕಾರ್ಯದರ್ಶಿ ನಿಖಿಲ್‌ ಹೆಬ್ಟಾಳ, ಶ್ರೇಯಸ್‌ ಶೆಟ್ಟಿ, ಧೀರಜ್‌ ವರ್ಣೆಕರ, ಅಭಿಷೇಕ ಗೌಡರ, ಸ್ವಸ್ತಿಕ್‌ ಶೆಟ್ಟಿ, ಹರ್ಷ ಚಂಡಕ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.