ಸರ್ವೆಗಾಗಿ ರೈತರ ಅರ್ಜಿ: ಶೀಘ್ರ ವಿಲೇವಾರಿ ಮಾಡಿ

Team Udayavani, Dec 19, 2021, 1:52 PM IST

ಸರ್ವೆಗಾಗಿ ರೈತರ ಅರ್ಜಿ: ಶೀಘ್ರ ವಿಲೇವಾರಿ ಮಾಡಿ

ಬಂಗಾರಪೇಟೆ: ಸರ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ, ಟೇಬಲ್‌ ಮೇಲೆ ದೂಳು ಹಿಡಿಯುತ್ತಿರುವ ರೈತರ ಕಡತಗಳಿಗೆ ಮುಕ್ತಿ ಕೊಡುವ ಜೊತೆಗೆ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತ ಸಂಘದಿಂದ ಸರ್ವೆ ಸೂಪರ್‌ವೈಸರ್‌ ರೋಹಿಣಿಗೆ ಮನವಿ ನೀಡಲಾಯಿತು.

ಈ ವೇಳೆ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಆರ್‌ಟಿಸಿ ದುರಸ್ತಿಗೂ ಅರ್ಜಿ ಹಾಕಿ ಕೆಲಸಕಾರ್ಯ ಬಿಟ್ಟು ತಹಶೀಲ್ದಾರ್‌ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ರೈತರನ್ನು ಕಸದಂತೆ ಕಾಣುವ ಜೊತೆಗೆ ಇಲಾಖೆಯಲ್ಲಿ ರಿಯಲ್‌ ಎಸ್ಟೇಟ್‌ ಉದ್ದಿಮೆಗೆ ಇರುವ ಗೌರವ ಅನ್ನದಾತನಿಗೆ ಇಲ್ಲದಂತಾಗಿದೆ. ಅಷ್ಟರ ಮಟ್ಟಿಗೆ ಇಲಾಖೆ ಹದಗೆಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಜೊತೆ ಚೆಲ್ಲಾಟ: ಸರ್ವೆ ಇಲಾಖೆ ಕಾನೂನು ಪ್ರಕಾರ ಅರ್ಜಿ ಸಲ್ಲಿಸಿದ 30 ದಿನದ ಒಳಗೆ ಅದು ವಿಲೇವಾರಿ ಆಗಬೇಕೆಂಬ ನಿಯಮವಿದೆ. ಆದರೆ, ಸಲ್ಲಿಸಿದ ಅರ್ಜಿ 300 ದಿನವಾದರೂಇಲಾಖೆಯ ಗಣಕಯಂತ್ರದಲ್ಲಿ ಭದ್ರವಾಗಿದೆಯೇ ಹೊರತು,ರೈತರ ಅರ್ಜಿಗೆ ಮುಕ್ತಿ ಸಿಗುತ್ತಿಲ್ಲ. ಸಿಬ್ಬಂದಿ ಕೊರತೆ, ಸರ್ವೆಯರ್‌ಸಮಸ್ಯೆ ಮತ್ತಿತರ ನೂರೊಂದು ನೆಪ ಹೇಳಿ ರೈತರ ಜೀವನದ ಜೊತೆಚೆಲ್ಲಾಟ ಆಡುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ: ಒಂದು ವಾರದೊಳಗೆ ಸಹಾಯಕ ನಿರ್ದೇಶಕರು ಸರ್ಕಾರಕ್ಕೆ ಪತ್ರ ಬರೆದು ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನಿವಾರಿಸಿ ಟೇಬಲ್‌ ಮೇಲೆ ದೂಳು ಹಿಡಿಯುತ್ತಿರುವ ರೈತರ ಕಡತಗಳಿಗೆ ಮುಕ್ತಿ ನೀಡಿ, ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕು, ಇಲ್ಲವಾದರೆಆಹೋರಾತ್ರಿ ಧರಣಿ ಮಾಡುವ ಎಚ್ಚರಿಕೆ ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌ ಮಾತನಾಡಿದರು. ಮನವಿ ಸ್ವೀಕರಿಸಿದ ಭೂ ದಾಖಲೆಗಳ ಸಹಾಯಕ ನಿರ್ದೇಶಕಿ ರೋಹಿಣಿ ಮಾತನಾಡಿ, ಸರ್ವೆಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಜೊತೆಗೆ ದಲ್ಲಾಳಿಗಳ ಹಾವಳಿ ಬಗ್ಗೆನಮ್ಮ ಗಮನಕ್ಕೆ ಸಾರ್ವಜನಿಕರು ತಂದಿದ್ದಾರೆ. ಕ್ರಮಕೈಗೊಂಡು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಹಸಿರುಸೇನೆ ಜಿಲ್ಲಾಧ್ಯಕ್ಷ ಕಿರಣ್‌, ತಾಲೂಕು ಅಧ್ಯಕ್ಷ ಚಲಪತಿ, ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮುನ್ನ, ಗೌರವಾಧ್ಯಕ್ಷ ಮರಗಲ್‌ ಮುನಿಯಪ್ಪ, ಬೂದಿಕೋಟೆ ನಾಗಯ್ಯ, ಜಿಲ್ಲಾ ಉಪಾಧ್ಯಕ್ಷಚಾಂದ್‌ಪಾಷ, ಆರೀಪ್‌, ನವಾಜ್‌, ಗೌಸ್‌, ಶ್ರೀನಿವಾಸ್‌,ಜಾವೀದ್‌, ಬೀಮಗಾನಹಳ್ಳಿ ನಾಗಯ್ಯ, ಪಾರಂಡಹಳ್ಳಿಮಂಜುನಾಥ, ನಾಗಭೂಷಣ್‌, ರಾಮಸಾಗರ ಸುರೇಶ್‌ಬಾಬು ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.