ತಮಿಳುನಾಡು ಪೊಲೀಸರಿಗೆ ನಕ್ಸಲ್‌ನಾಯಕಿ ಹೊಸಗದ್ದೆ ಪ್ರಭಾ ಶರಣಾಗತಿ

ಪತಿ ಬಂಧನದ ನಂತರ ಮಾನಸಿಕವಾಗಿ ಕುಗ್ಗಿದ್ದ ಪ್ರಭಾ; ರಾಜ್ಯದಲ್ಲಿ ಈಕೆಯ ವಿರುದ್ಧ 40 ಕ್ಕೂ ಅಧಿಕ ಪ್ರಕರಣ

Team Udayavani, Dec 20, 2021, 10:24 AM IST

ತ.ನಾಡು ಪೊಲೀಸರಿಗೆ ನಕ್ಸಲ್‌ನಾಯಕಿ ಹೊಸಗದ್ದೆ ಪ್ರಭಾ ಶರಣಾಗತಿ

ಶಿವಮೊಗ್ಗ: ನಕ್ಸಲ್‌ ಮುಖಂಡ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬಂಧನದ ಬೆನ್ನಲ್ಲೇ ನೆರೆ ರಾಜ್ಯದ ಪೊಲೀಸರಿಗೆ ಮತ್ತೂಂದು ಬೇಟೆ ಸಿಕ್ಕಿದೆ. 2010ರಲ್ಲಿ ಮೃತಪಟ್ಟಿದ್ದಾಳೆ ಎನ್ನಲಾದ ಹೊಸಗದ್ದೆ ಪ್ರಭಾ ಸಾರ್ವಜನಿಕರ ಎದುರು ಕಾಣಿಸಿಕೊಂಡಿದ್ದಾಳಲ್ಲದೆ ಪೊಲೀಸರಿಗೆ ಶರಣಾಗಿದ್ದಾಳೆ.

ಈಚೆಗೆ ನಕ್ಸಲ್‌ ಮುಖಂಡ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬಂಧನದ ಬೆನ್ನಲ್ಲೇ ತಮಿಳುನಾಡಿನ ತಿರಪತ್ತೂರು ಪೊಲೀಸ್‌ ಠಾಣೆಯಲ್ಲಿ ಹೊಸಗದ್ದೆ ಪ್ರಭಾ ಶರಣಾಗಿದ್ದಾಳೆ. ಪತಿ ನಕ್ಸಲ್‌ ಮುಖಂಡ ಬಿ.ಜಿ.ಕೃಷ್ಣಮೂರ್ತಿ ಬಂಧನದ ಬೆನ್ನಲ್ಲೇ ಪತ್ನಿ ಹೊಸಗದ್ದೆ ಪ್ರಭಾ ತಮಿಳುನಾಡು ವೆಲ್ಲೂರು ಪೊಲೀಸರಿಗೆ ಶರಣಾಗತಿಯಾಗಿದ್ದಾಳೆ. ಪತಿ ಬಂಧನದ ನಂತರ ಮಾನಸಿಕ ಖಿನ್ನತೆಗೊಳಗಾಗಿದ್ದ ಪ್ರಭಾ ಅನಾರೋಗ್ಯದಿಂದ ಬಳಲುತ್ತಿದ್ದಳು. ಪತಿ ಕೃಷ್ಣಮೂರ್ತಿ ಬಂಧನದ ಬಳಿಕ ತಾನೂ ಪೊಲೀಸರಿಗೆ ಶರಣಾಗಿದ್ದಾಳೆ.

ಹೊಸಗದ್ದೆ ಪ್ರಭಾ ಮೂಲತಃ ಆಗುಂಬೆ ಸನಿಹದ ಹೊಸಗದ್ದೆ ಗ್ರಾಮದವಳಾಗಿದ್ದು, ನಕ್ಸಲ್‌ ಸಂಘಟನೆಯಲ್ಲಿ ಮಂಚೂಣಿಯಲ್ಲಿದ್ದಳು. ಮಲೆನಾಡಿನಲ್ಲಿ ನಕ್ಸಲ್‌ ಸಂಘಟನೆ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಸಂಘಟನೆ ಮುನ್ನಡೆಸುತ್ತಿದ್ದಳು. ಮಲೆನಾಡಿನಲ್ಲಿ ನಕ್ಸಲ್‌ ಸಂಘಟನೆಗೆ ಹಿನ್ನಡೆಯಾದ ಹಿನ್ನೆಲೆಯಲ್ಲಿ ಹಲವು ಮಂದಿ ಪೊಲೀಸ್‌ ಎನ್‌ಕೌಂಟರ್‌ಗೆ ಬಲಿಯಾದರು. ಮತ್ತೆ ಕೆಲವರು ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಸಂಘಟನೆಯಿಂದ ವಿಮುಖರಾದರೆ, ಮತ್ತೆ ಕೆಲವರು ಪೊಲೀಸರಿಗೆ ಶರಣಾದರು.

2010ರಲ್ಲಿ ನಕ್ಸಲ್‌ ಪ್ರಭಾ ಮೃತಪಟ್ಟಿದ್ದಾಳೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಗ್ರಾಮದ ಮುಖಂಡರೊಬ್ಬರಿಗೆ ಪ್ರಭಾ ಮೃತಪಟ್ಟಿದ್ದು, ಆಕೆಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ದೂರವಾಣಿ ಕರೆಯೊಂದು ಬಂದಿತ್ತು. ಹೀಗಾಗಿ ಪೊಲೀಸರು ಕೂಡ ಪ್ರಭಾ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಆಕೆಯ ಶವ ಸಿಗದೆ ಮೃತ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಅಂದಿನ ಎಸ್ಪಿ ಮುರುಗನ್‌ ಹೇಳಿದ್ದರು.

ಆದರೆ ರಾಜ್ಯದ ಮಲೆನಾಡಿನಿಂದ ಕಣ್ಮರೆಯಾಗಿದ್ದ ಪ್ರಭಾ ಕೇರಳದ ನಕ್ಸಲ್‌ ಸಂಘಟನೆಯಲ್ಲಿ ಸಕ್ರಿಯಳಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದಟ್ಟವಾಗಿ ಸಿಕ್ಕಿತ್ತು. ಪತಿ ಬಿ.ಜಿ. ಕೃಷ್ಣಮೂರ್ತಿ, ಪ್ರಭಾ, ಸಾವಿತ್ರಿ, ವಿಕ್ರಂ ಗೌಡ ಸೇರಿ ಮಲೆನಾಡಿನ ನಕ್ಸಲರೆಲ್ಲರೂ ಕೇರಳದಲ್ಲಿ ಆಶ್ರಯ ಪಡೆದಿದ್ದರು.

ಇದನ್ನೂ ಓದಿ:ಫಿಲಿಪೈನ್ಸ್​ನಲ್ಲಿ ರೈ ಚಂಡಮಾರುತದ ಅಟ್ಟಹಾಸ; 112 ಸಾವು

ಆದರೆ ದಕ್ಷಿಣ ಭಾರತದಲ್ಲಿ ನಕ್ಸಲ್‌ ಸಂಘಟನೆಗೆ ಹಿನ್ನಡೆಯಾಗುತ್ತಿದ್ದಂತೆ, ನಕ್ಸಲರ ಜಾಡಿನ ಮಾಹಿತಿ ಪೊಲೀಸರಿಗೆ ಲಭಿಸತೊಡಗಿತ್ತು. ಕಳೆದ ತಿಂಗಳಷ್ಟೆ ಬಿ.ಜಿ. ಕೃಷ್ಣಮೂರ್ತಿ, ಸಾವಿತ್ರಿ ಕೇರಳ ಪೊಲೀಸರಿಂದ ಬಂಧನಕ್ಕೊಳಗಾದರು. ಇದಾದ ಒಂದು ತಿಂಗಳಲ್ಲಿ ಪ್ರಭಾ ತಮಿಳುನಾಡು ಪೊಲೀಸರಿಗೆ ಶರಣಾಗಿದ್ದಾಳೆ. ಮಲೆನಾಡಿನ ಹಲವು ನಕ್ಸಲರು ಈಗ ಶರಣಾಗತಿಯಾಗಲು ನಿರ್ಧರಿಸಿದ್ದು, ಅವರ ಶರಣಾಗತಿಗೆ ಪೂರಕ ವೇದಿಕೆಯನ್ನು ಕರ್ನಾಟಕ ಪೊಲೀಸರು ಕಲ್ಪಿಸಬೇಕಿದೆ.

ಹೊಸಗದ್ದೆ ಪ್ರಭಾ ವಿರುದ್ಧ ರಾಜ್ಯದಲ್ಲಿ 40ಕ್ಕೂ ಅಧಿಕ ಕೇಸ್‌ಗಳಿವೆ. ಶಿವಮೊಗ್ಗದಲ್ಲಿ ತಲ್ಲೂರು ಅಂಗಡಿ, ಬಸ್‌ ಸುಟ್ಟ ಪ್ರಕರಣ ಸೇರಿದಂತೆ ಶಿವಮೊಗ್ಗದಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದೆ. ಆಕೆಯನ್ನು ಹುಡುಕಿಕೊಟ್ಟವರಿಗೆ ಐದು ಲಕ್ಷ ಬಹುಮಾನ ಘೋಷಿಸಲಾಗಿತ್ತು. ಹೊಸಗದ್ದೆ ಪ್ರಭಾ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಕೊನೆಗೂ ಪೊಲೀಸರಿಗೆ ಶರಣಾಗಿದ್ದಾಳೆ.

ಟಾಪ್ ನ್ಯೂಸ್

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.