ಗಡಿಕೇಶ್ವಾರದಲ್ಲಿ ತಾತ್ಕಾಲಿಕ ಶೆಡ್‌ ನಿರ್ಮಾಣಕ್ಕೆ ಸರ್ಕಾರ ಅಸ್ತು


Team Udayavani, Dec 20, 2021, 9:48 AM IST

1shed

ಚಿಂಚೋಳಿ: ತಾಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಕಳೆದ ಐದಾರು ವರ್ಷದಿಂದ ಮೇಲಿಂದ ಮೇಲೆ ಸಂಭವಿಸುತ್ತಿರುವ ಭೂಕಂಪದಿಂದ ಗ್ರಾಮಸ್ಥರು ಭಯಭೀತರಾಗಿ ಮನೆ ಎದುರು ತಾತ್ಕಾಲಿಕ ಟಿನ್‌ ಶೆಡ್‌ ನಿರ್ಮಿಸಿಕೊಡಲು ಸರ್ಕಾರಕ್ಕೆ ಕೋರಿದ್ದ ಬೇಡಿಕೆ ಈಗ ಈಡೇರಿದೆ.

ಭೂಕಂಪದ ಭಯದೊಂದಿಗೆ ಆಯಾ ಕಾಲಕ್ಕೆ ತಕ್ಕಂತೆ ಮಳೆ, ಚಳಿ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮನೆ ಎದುರಲ್ಲೇ ಶೆಡ್‌ ನಿರ್ಮಿಸಿಕೊಡಿ ಎಂದು ಗಡಿಕೇಶ್ವಾರ ಮತ್ತು ಸುತ್ತಲಿನ ಗ್ರಾಮಗಳ ಜನರು ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವರಲ್ಲಿ, ವಿರೋಧ ಪಕ್ಷದ ನಾಯಕರಲ್ಲಿ, ಸಂಸದರಲ್ಲಿ, ಅಧಿಕಾರಿಗಳಲ್ಲಿ, ವಿವಿಧ ಪಕ್ಷಗಳ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮೂರು ಕೋಟಿ ರೂ.ಗಳನ್ನು ಮಂಜೂರಿಗೊಳಿಸಿದೆ.

ಇದರಿಂದ ಗಡಿಕೇಶ್ವಾರ ಹಾಗೂ ಸುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಆಗಿದೆ. ಗಡಿಕೇಶ್ವಾರ ಗ್ರಾಮದಲ್ಲಿ ಪರಸಿಕಲ್ಲು ಹಾಗೂ ಮಣ್ಣಿನಿಂದ ನಿರ್ಮಿಸಿದ ಮನೆಗಳು ಇರುವುದರಿಂದ ಮೇಲಿಂದ ಮೇಲೆ ಸಂಭವಿಸಿದ ಲಘು ಭೂಕಂಪ ದಿಂದಾಗಿ ಬಿರುಕು ಬಿಟ್ಟಿವೆ. ಹೀಗಾಗಿ ಮನೆಯಲ್ಲಿ ವಾಸವಾಗಿರಲು ಜನತೆ ಭಯಭೀತರಾಗಿದ್ದರು. ಅಲ್ಲದೇ ರಾತ್ರಿ ಮನೆಯಲ್ಲೇ ಮಲಗಲು ಆತಂಕ ಪಡುವಂತೆ ಆಗಿತ್ತು.

ಹೊಡೇಬೀರನಳ್ಳಿ ಕ್ರಾಸ್‌ ಹತ್ತಿರದ ಗಡಿಕೇಶ್ವಾರ, ಹೊಸಳ್ಳಿ, ಹಲಚೇರಾ, ತೇಗಲತಿಪ್ಪಿ, ಕೊರವಿ, ಕುಡಹಳ್ಳಿ, ಭಂಟನಳ್ಳಿ, ಬೆನಕನಳ್ಳಿ, ಕುಪನೂರ, ರಾಯಕೋಡ, ಚಿಂತಪಳ್ಳಿ, ರುದನೂರ, ಹೊಡೆಬೀರನಳ್ಳಿ ಗ್ರಾಮಸ್ಥರು ಕಳೆದ ಅಕ್ಟೋಬರ್‌ 11ರಂದು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದ್ದರು.

ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಡಿಕೇಶ್ವಾರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸುವಂತೆ ಸರ್ಕಾರಕ್ಕೆ ಕೋರಿದ್ದರು. ಅಲ್ಲದೇ ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಕಂದಾಯ ಸಚಿವ ಆರ್‌. ಅಶೋಕ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಗ್ರಾಮಸ್ಥರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು.

ಇದಕ್ಕೂ ಮುನ್ನ ಭೂಕಂಪದ ಭಯದಿಂದ ಗ್ರಾಮಸ್ಥರು ಊರನ್ನೇ ತೊರೆದು ನೆಂಟರ ಮನೆಗಳಿಗೆ ಹೋಗಿದ್ದರು. ಆನಂತರ ಸರ್ಕಾರ ಗಡಿಕೇಶ್ವಾರ, ಹೊಸಳ್ಳಿ(ಎಚ್‌), ರಾಮನಗರ (ಕೊರವಿ) ತಾಂಡಾದಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿ ಗ್ರಾಮಸ್ಥರಿಗೆ ಉಪಹಾರ, ಊಟದ ವ್ಯವಸ್ಥೆ ಮಾಡಿತ್ತು. ಆ ನಂತರ ಈ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿತ್ತು.

ಗ್ರಾಮಸ್ಥರ ಹರ್ಷ

ಗಡಿಕೇಶ್ವಾರ ಗ್ರಾಮದಲ್ಲಿ ಭೂಕಂಪದ ಹೆದರಿಕೆಯಲ್ಲಿಯೇ ಬದುಕುತ್ತಿದ್ದ ಜನರ ಬಗ್ಗೆ ಸರ್ಕಾರಕ್ಕೆ ಮನವರಿಕೆ ಆಗಿದ್ದರಿಂದ ಶೆಡ್‌ ನಿರ್ಮಿಸಲು 3ಕೋಟಿ ರೂ. ಪರಿಹಾರ ನಿಧಿ ಮಂಜೂರಿ ಮಾಡಿರುವುದು ಸಂತಸವಾಗಿದೆ ಎಂದು ಗ್ರಾಮಸ್ಥರಾದ ರೇವಣಸಿದ್ಧಪ್ಪ ಅಣಕಲ್‌, ಸಂತೋಷ ಬಳಿ, ಸುರೇಶ ಪಾಟೀಲ ರಾಯಕೋಡ ಮತ್ತಿತರರು ಹರ್ಷ ವ್ಯಕ್ತಪಡಿಸಿದ್ದಾರೆ.

ಚಿಂಚೋಳಿ ತಾಲೂಕಿನ ಭೂಕಂಪ ಪೀಡಿತ ಗಡಿಕೇಶ್ವಾರ ಗ್ರಾಮಸ್ಥರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಅವರ ಮನೆಯ ಅಂಗಳದ ಎದುರು ತಾತ್ಕಾಲಿಕ ಟಿನ್‌ ಶೆಡ್‌ ನಿರ್ಮಿಸಲು ಸರ್ಕಾರದಿಂದ ಮೂರು ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್‌.ಅಶೋಕ ಬಿಡುಗಡೆ ಮಾಡಿದ್ದಾರೆ. ಭೂಕಂಪ ಸಂದರ್ಭದಲ್ಲಿ ಗಡಿಕೇಶ್ವಾರ ಸೇರಿದಂತೆ ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಿ ಸರ್ಕಾರಕ್ಕೆ ಇಲ್ಲಿನ ಸಂಕಷ್ಟ ಮನವರಿಕೆ ಮಾಡಿದ್ದೆ. ಸರ್ಕಾರ ಮನವಿಗೆ ಸ್ಪಂದಿಸಿದ್ದು ಸಂತಸ ತಂದಿದೆ. -ಡಾ| ಉಮೇಶ ಜಾಧವ, ಸಂಸದ, ಕಲಬುರಗಿ

ಗಡಿಕೇಶ್ವರ ಗ್ರಾಮಸ್ಥರು ಚಳಿ, ಮಳೆ, ಬಿಸಿಲು ಎನ್ನದೇ ಯಾವಾಗ ಭೂಮಿ ಕಂಪಿಸುತ್ತದೆಯೋ ಎಂದು ಹೆದರಿ ತಮ್ಮ ಮನೆ ಎದುರು ತಾಡಪತ್ರಿ ಹಾಕಿಕೊಂಡು ಜೀವನ ಸಾಗಿಸುತ್ತಿದ್ದರು. ಈಗ ಸರ್ಕಾರವೇ ಮನೆ ಎದುರು ಶೆಡ್‌ ನಿರ್ಮಿಸುತ್ತಿರುವುದು ಹರ್ಷದ ಸಂಗತಿಯಾಗಿದೆ. -ಅಶೋಕ ರಂಗನೂರ, ಹೋರಾಟಗಾರ

-ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.