ಅಕ್ರಮ ಅಕ್ಕಿ ದಂಧೆ ಕೇಂದ್ರವಾಗುತ್ತಿದೆ ಮಂಡ್ಯ
Team Udayavani, Dec 20, 2021, 12:38 PM IST
ಮಂಡ್ಯ: ಸಕ್ಕರೆ ನಾಡು ಎಂಬ ಹೆಸರು ಪಡೆದಿರುವಮಂಡ್ಯ ಜಿಲ್ಲೆ ಪಡಿತರ ಅಕ್ಕಿಯ ಅಕ್ರಮ ದಂಧೆಯ ಕೇಂದ್ರವಾಗುತ್ತಿದೆ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಮೂಡಿದೆ.
ಹೊರ ರಾಜ್ಯ, ಜಿಲ್ಲೆಗಳಿಂದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಂಡ್ಯಕ್ಕೆ ತಂದು ವಿವಿಧ ರೈಸ್‌ಮಿಲ್ ಗಳಲ್ಲಿ ಪಾಲಿಶ್ ಮಾಡಿ ಹೊರ ರಾಜ್ಯ, ಜಿಲ್ಲೆ, ದೇಶಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಹೆಚ್ಚು ಬೆಲೆಗೆ ಮಾರಾಟ: ಜಿಲ್ಲೆಯಲ್ಲಿ ನಿರಂತರವಾಗಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಪ್ರಕರಣಗಳು ನಡೆಯುತ್ತಿವೆ. ಬೇರೆ ರಾಜ್ಯಗಳಿಂದ ಪಡಿತರ ಚೀಟಿದಾರರಿಗೆ ವಿತರಿಸಬೇಕಾದ ಅಕ್ಕಿಯನ್ನು ಅಕ್ರಮವಾಗಿ ಜಿಲ್ಲೆಗೆ ತಂದು ಇಲ್ಲಿ ಪಾಲಿಶ್ ಮಾಡಿ,ವಿವಿಧ ಬ್ರಾಂಡ್‌ಗಳ ಮೂಲಕ ಹೆಚ್ಚು ಹಣಕ್ಕೆ ಮಾರಾಟ ಮಾಡಲಾಗುತ್ತಿದೆ.
ಹಲವು ವರ್ಷಗಳಿಂದ ದಂಧೆ: ಅಕ್ರಮ ಪಡಿತರ ಅಕ್ಕಿಯ ದಂಧೆ ಸುಮಾರು ವರ್ಷಗಳಿಂದ ಸದ್ದಿಲ್ಲದೆ ನಡೆಯುತ್ತಾ ಬಂದಿದೆ. ಆದರೆ, ಇದುವರೆಗೂ ಬೆಳಕಿಗೆ ಬಾರದೆ ಎಷ್ಟೋ ಪ್ರಕರಣಗಳು ಗೌಪ್ಯವಾಗಿಯೇ ಉಳಿದು ಬಿಟ್ಟಿವೆ. ಲಾಕ್‌ಡೌನ್‌ನಲ್ಲಿ ಉಚಿತ ಅಕ್ಕಿ ವಿತರಣೆಗೆ ಕೊರತೆ ಉಂಟಾದಾಗ ದಂಧೆಗೆ ಕಡಿವಾಣ ಹಾಕಲು ಆಹಾರ ಇಲಾಖೆಯ ಟಾಸ್ಕ್ಪೋರ್ಸ್ ಸಮಿತಿ ಕ್ರಿಯಾಶೀಲವಾಗಿರುವುದರಿಂದ ಒಂದೊಂದೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಅಕ್ಕಿ ತುಂಬಿದ ಕ್ಯಾಂಟರ್ ನಿಲ್ಲಿಸಿ ಪರಾರಿ: ಇತ್ತೀಚೆಗೆ ಕಳೆದ ಕೆಲವು ದಿನಗಳಿಂದ ಮಂಡ್ಯ ಹೊರವಲಯದಬ್ಯಾಂಕ್ ಕಾಲೋನಿ ಸಮೀಪದಲ್ಲಿ ಅಕ್ಕಿ ತುಂಬಿದ ಕ್ಯಾಂಟರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದನು. ಇದುರಾಜ್ಯಾದ್ಯಂತ ಸುದ್ದಿಯಾಗಿತ್ತು. ಅಲ್ಲಿಂದಇಲ್ಲಿಯವರೆಗೂ ನಾಲ್ಕೈದು ಪ್ರಕರಣಗಳು ಮಂಡ್ಯದಲ್ಲಿ ಪತ್ತೆಯಾಗಿದೆ. ಕ್ಯಾಂಟರ್ ಬೆಂಗಳೂರಿನ ಮಾಲೀಕರೊಬ್ಬರಿಗೆ ಸೇರಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ತನಿಖೆಯ ಜಾಡುಹಿಡಿದ ಪೊಲೀಸರಿಗೆ ಮಂಡ್ಯದಲ್ಲಿ ಅಕ್ರಮ ಪಡಿತರ ಅಕ್ಕಿ ದಂಧೆಯ ವಾಸನೆ ಬಡಿದಿತ್ತು.
ರೈಸ್‌ಮಿಲ್ ಮೇಲೆ ದಾಳಿ: ನಗರದ ರೈಸ್‌ಮಿಲ್‌ವೊಂದರಲ್ಲಿ ಪಡಿತರ ಅಕ್ಕಿಯನ್ನು ತಂದು ಪಾಲಿಶ್ ಮಾಡಿ ವಿವಿಧ ಬ್ರಾಂಡ್‌ಗಳ ಮೂಲಕ ಹೊರ ರಾಜ್ಯ ಹಾಗೂ ದೇಶಗಳಿಗೆ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿತ್ತು. ಅದನ್ನು ಬೇ ಸಿದ ಪೊಲೀಸ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದ್ದರೂ, ಇದುವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಪ್ರಕರಣ ಯಾವ ಮಟ್ಟದಲ್ಲಿದೆ ಎಂಬುದು ಸಾರ್ವಜನಿಕರಿಗೆ ತಿಳಿದಿಲ್ಲ.
ಕ್ಯಾಂಟರ್ ವಶಪಡಿಸಿಕೊಂಡಿದ್ದ ಪೊಲೀಸರು:
ಇತ್ತೀಚೆಗೆ ಕ್ಯಾಂಟರ್‌ನಲ್ಲಿ ಅಕ್ಕಿ ಸಾಗಾಣೆ ಮಾಡಲಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಕ್ಯಾಂಟರ್‌ನ್ನು ವಶಕ್ಕೆ ಪಡೆದುಕೊಂಡಿದ್ದರು. ಇದರ ಬಗ್ಗೆ ಯಾವುದೇ ಮಾಹಿತಿ ನೀಡಲು ಪೊಲೀಸರು ಹಿಂದೇಟು ಹಾಕಿದ್ದರು. ಪ್ರಕರಣ ದಾಖಲಾಗಿದ್ದರೂ, ಇದುವರೆಗೂ ತನಿಖೆ ಯಾವ ಹಂತದಲ್ಲಿದೆ ಎಂಬುದು ತಿಳಿದು ಬಂದಿಲ್ಲ.
ರಾತ್ರೋ ರಾತ್ರಿ ದಾಸ್ತಾನು ಮಾಯ: ಕಳೆದ ಡಿ.8ರಂದು ಮಂಡ್ಯ ನಗರದ ಹೊರವಲಯದ ಸ್ವರ್ಣಸಂದ್ರ ಇಂಡಸ್ಟ್ರೀಯಲ್‌ನ ಲಕ್ಷ್ಮೀದೇವಿ ರೈಸ್ ಮಿಲ್ ಮೇಲೆ ಅಕ್ರಮ ಅಕ್ಕಿ ಸಾಗಾಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ
ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆಗ 525ಕ್ಕೂ ಹೆಚ್ಚು ಅಕ್ಕಿ ತುಂಬಿದ ಕ್ಯಾಂಟರ್‌ನ್ನು ವಶಪಡಿಸಿಕೊಳ್ಳಲಾಗಿತ್ತು. ಅಕ್ಕಿಯನ್ನು ರೈಸ್‌ಮಿಲ್‌ನ ದಾಸ್ತಾನಿಡಲಾಗಿತ್ತು. ಕ್ಯಾಂಟರ್ ಹಾಗೂ ದಾಸ್ತಾನಿಕ ಬೀಗದ ಕೀಯನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು. ಆದರೆ, ರಾತ್ರೋ ರಾತ್ರಿ ಅಕ್ಕಿ ದಾಸ್ತಾನು ಮಾಯವಾಗಿತ್ತು.
ಪೊಲೀಸರು ಶಾಮೀಲು: ದಾಸ್ತಾನಿನಲ್ಲಿದ್ದ ಅಕ್ಕಿಯು ಬೆಳಗ್ಗೆ ಬಂದು ನೋಡುವಷ್ಟರಲ್ಲಿ ಮಾಯವಾಗಿತ್ತು. ತಹಶೀಲ್ದಾರ್ ಚಂದ್ರಶೇಖರ್ ಶಂ.ಗಾಳಿ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವಂತೆ ರಾತ್ರಿ ದಾಳಿ ಮಾಡಿ ವಶಪಡಿಸಿಕೊಂಡಿದ್ದ ಅಕ್ಕಿಯು ಬೆಳಗ್ಗೆ ನೋಡುವಷ್ಟರಲ್ಲಿ ಇಲ್ಲವಾಗಿದೆ. ದಾಸ್ತಾನಿನ ಬೀಗದಕೀಯನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು. ಆದ್ದರಿಂದ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು. ಅಲ್ಲದೆ, ಪೊಲೀಸರ ವಿರುದ್ಧವೇ ದೂರು ನೀಡಿದ್ದರು. ಆದರೆ, ತಹಶೀಲ್ದಾರ್ ದೂರು ಪರಿಗಣಿಸದೆ ಪೊಲೀಸರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರ ದೂರು ಪಡೆದಿರುತ್ತಾರೆ. ಇದರಿಂದಅಕ್ಕಿಯ ದಂಧೆಯಲ್ಲಿ ಪೊಲೀಸ್ ಇಲಾಖೆಯ ಕೆಲವು ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಮೀಲಾಗಿದ್ದು, ಪೊಲೀಸರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬಂದಿತ್ತು.
ವಿವಿಧ ಬ್ರಾಂಡ್‌ಗಳ ಮೂಲಕ ಮಾರಾಟ :
ಹೊರ ರಾಜ್ಯ, ಜಿಲ್ಲೆಗಳಿಂದ ಬರುವ ಪಡಿತರ ಅಕ್ಕಿಯನ್ನು ಪಾಲಿಶ್ ಮಾಡಿ ವಿವಿಧ ಬ್ರಾಂಡ್‌ಗಳ ಮೂಲಕ ಹೊರ ಜಿಲ್ಲೆ, ದೇಶಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಸತ್ಯ ಹೊರಬಂದಿದೆ. ಅಧಿಕಾರಿಗಳು ದಾಳಿ ನಡೆಸಿದಾಗ, ವಿವಿಧ ನಕಲಿ ಬ್ರಾಂಡ್‌ಗಳ ಚಿಹ್ನೆ ಇರುವ ಚೀಲಗಳು ಪತ್ತೆಯಾಗಿವೆ. ನಕಲಿ ಬ್ರಾಂಡ್‌ನಲ್ಲಿ ಗ್ರಾಹಕರಿಗೆ ಅಕ್ಕಿ ಸರಬರಾಜು ಮಾಡುತ್ತಿರುವ ದಂಧೆ ಹೆಚ್ಚಾಗಿ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದೆ.
ಮಂಡ್ಯದಲ್ಲಿ ಪದೇ ಪದೆ ಅಕ್ರಮ ಪಡಿತರ ಅಕ್ಕಿ ದಂಧೆ ಪ್ರಕರಣಗಳುಹೆಚ್ಚಾಗುತ್ತಿದ್ದು, ಮೊನ್ನೆ ನಡೆದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ದಾಖಲಾಗಿದೆ. ಮುಂದೆ ಇದೇ ರೀತಿ ಆಗದಂತೆ ಕ್ರಮ ಕೈಗೊಳ್ಳುವಂತೆ ಆಹಾರಇಲಾಖೆ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ಅದರಂತೆ ಪೊಲೀಸ್ ಇಲಾಖೆಗೂ ತಿಳಿಸಲಾಗಿದೆ.–ಎಸ್.ಅಶ್ವತಿ, ಜಿಲ್ಲಾಧಿಕಾರಿ, ಮಂಡ್ಯ
ಅನರ್ಹರಿಗೂ ಪಡಿತರ ಕಾರ್ಡ್ ವಿತರಣೆ ಮಾಡಿರುವುದರಿಂದ ಪಡಿತರ ಅಕ್ಕಿ ಈ ರೀತಿ ದುರುಪಯೋಗವಾಗುತ್ತಿದೆ. ಇದರ ಬಗ್ಗೆ ಪೊಲೀಸರು ನಿರ್ಲಕ್ಷ್ಯ ತೋರದೆಕ್ರಮ ಕೈಗೊಳ್ಳಬೇಕು. ಪಡಿತರ ಅಕ್ಕಿ ಬಡವರಿಗೆ ವಿತರಣೆ ಮಾಡಬೇಕು. ಆದರೆ, ಇದು ಕಾಳಸಂತೆಯಲ್ಲಿ ಪಾಲಿಶ್ ಮಾಡಿಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.ಇದನ್ನು ತಪ್ಪಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮುಂದಾಗಬೇಕು. –ಎ.ಎಲ್.ಕೆಂಪೂಗೌಡ, ಜಿಲ್ಲಾಧ್ಯಕ್ಷ, ರೈತಸಂಘ
–ಎಚ್.ಶಿವರಾಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.