ಕ್ರೀಡೆಯಿಂದ ಆರೋಗ್ಯ ಬಲವರ್ಧನೆ

Team Udayavani, Dec 20, 2021, 12:45 PM IST

ಕ್ರೀಡೆಯಿಂದ ಆರೋಗ್ಯ ಬಲವರ್ಧನೆ

ಭಾರತೀನಗರ: ನಿತ್ಯ ಕ್ರೀಡಾ ಚಟುವಟಿಕೆಯಲ್ಲಿ ಸಕ್ರಿಯರಾಗಬೇಕು. ನಿರಂತರ ಕ್ರೀಡಾಭ್ಯಾಸದಿಂದ ಮಾನವನ ಬೌದ್ಧಿಕ ವಿಕಾಸದ ಜೊತೆ ಸಾಮಾಜಿಕ, ಆಧ್ಯಾತ್ಮಿಕ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ಇಲ್ಲಿನ ಭಾರತೀಕಾಲೇಜಿನ ಭಾರತೀ ಕ್ರೀಡಾಂಗಣದಲ್ಲಿ ಡಾ.ಜಿಮಾದೇಗೌಡ ಪ್ರೀಮಿಯರ್‌ ಲೀಗ್‌ 2021ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಕ್ರಿಕೆಟ್‌ನಲ್ಲಿ ಸೋಲು-ಗೆಲುವು ಇರುತ್ತದೆ. ಅದನ್ನೂ ಯಾರೂ ವೈಯುಕ್ತಿಕವಾಗಿತೆಗೆದುಕೊಳ್ಳಬಾರದು. ಮಂಡ್ಯ ಜಿಲ್ಲೆಯಲ್ಲಿ ಮೊದಲ ಭಾರಿಗೆ ಯೂಟ್ಯೂಬ್‌ನಲ್ಲಿ ಪಂದ್ಯಗಳ ನೇರ ಪ್ರಸಾರ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಕ್ರೀಡಾ ಚಟುವಟಿಕೆಯಿಂದ ಮಾನವನ ಆರೋಗ್ಯ ಬಲವರ್ಧನೆಗೊಳ್ಳಲಿದೆ. ಬದುಕುವ ಆಯಸ್ಸಿನ ಪ್ರಮಾಣ ಹೆಚ್ಚಾಗಲಿದೆ. ಶಿಕ್ಷಣ ಮತ್ತು ಕ್ರೀಡೆ ಎನ್ನುವುದು ಎರಡುಕಣ್ಣುಗಳಿದ್ದಂತೆ. ಇವುಗಳನ್ನು ಸಮಪಾಲಿನಲ್ಲಿ ತೆಗೆದುಕೊಂಡುಹೋದಲ್ಲಿ ಉತ್ತಮ ವ್ಯಕ್ತಿತ್ವ, ಜೀವನ, ಹೊಸ ಉಲ್ಲಾಸದ ಬದುಕನ್ನು ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಒತ್ತಡದ ಜೀವನಕ್ಕೆ ಕ್ರೀಡೆ ಅವಶ್ಯ: ವಿಧಾನ ಪರಿಷತ್‌ ಮಾಜಿ ಸದಸ್ಯ ಮಧು.ಜಿ ಮಾದೇಗೌಡ ಮಾತನಾಡಿ, ಒತ್ತಡದ ಜೀವನಕ್ಕೆಕ್ರೀಡೆ ಅತ್ಯವಶ್ಯಕ. ಪ್ರಸ್ತುತ ಸ್ವಲ್ಪ ವಿರಾಮವಾಗಿ ಇದ್ದಾರೆ ಎಂದರೆ, ಅದು ಕ್ರೀಡೆಯಿಂದ. ವಿದ್ಯಾರ್ಥಿಗಳು ಓದಿನ ಜತೆಗೆ ಯಾವ ಕ್ರೀಡೆಯಲ್ಲಿ ಆಸಕ್ತಿ ಇರುತ್ತದೆ ಎಂಬುದನ್ನು ತಿಳಿದುಕೊಂಡು ಕ್ರೀಡೆಗೆ ಹೆಚ್ಚು ಆದ್ಯತೆ ನೀಡಿದರೆ, ನಮ್ಮಲ್ಲಿ ಸಾಧಕರು ಬೆಳೆಯುತ್ತಾರೆ ಎಂದರು.

ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ರಾಮಕೃಷ್ಣ, ಕೆಪಿಸಿಸಿ ಸದಸ್ಯ ಎಸ್‌. ಗುರುಚರಣ್‌, ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿ.ಸಂದರ್ಶ, ಬಿ.ಎಂ.ನಂಜೇಗೌಡ, ಸಿದ್ದೇಗೌಡ, ಬಿ.ಬಸವರಾಜು, ಎ.ಎಸ್‌. ರಾಜೀವ್‌, ಭಾರತೀನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುಟ್ಟನಹಳ್ಳಿಶಿವಲಿಂಗೇಗೌಡ, ಗ್ರಾಪಂ ಅಧ್ಯಕ್ಷ ರವಿಚಂದ್ರ, ಉಪನ್ಯಾಸಕ ಕೆ.ಎಚ್‌ .ಪ್ರಸನ್ನಕುಮಾರ್‌, ಡಿ.ಪಿ.ಪ್ರಮೋದ್‌ ಕುಮಾರ್‌ ಹಾಜರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.