ದಾಂಡೇಲಿ-ಅಳ್ನಾವರ ಕುಡಿಯುವ ನೀರು ಪೊರೈಕೆಯ ಕಾಮಗಾರಿ ನಿಲ್ಲಿಸುವಂತೆ ಅಗ್ರಹ
Team Udayavani, Dec 20, 2021, 2:54 PM IST
ದಾಂಡೇಲಿ : ದಾಂಡೇಲಿಯಿಂದ ಅಳ್ವಾವರಕ್ಕೆ ಕುಡಿಯುವ ನೀರು ಪೊರೈಕೆಯ ಪೈಪ್ಲೈನ್ ಕಾಮಗಾರಿಯನ್ನು ಯಾವುದೇ ಮುನ್ಸೂಚನೆ ನೀಡದೆ ಮತ್ತೆ ಪುನರಾರಂಭಿಸಲಾಗಿದೆ.
ಈ ಹಿಂದೆ ದಾಂಡೇಲಿಯಿಂದ ನೀರು ಕೊಂಡೊಯ್ಯವುದನ್ನು ವಿರೋಧಿಸಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ 53 ದಿನಗಳ ಕಾಲ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಕೊರೊನಾ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಲಿಕವಾಗಿ ಮುಂದೂಡಲಾಗಿತ್ತು.
ಆ ಸಮಯದಲ್ಲಿ ನೀರಿನ ಯೋಜನೆಯ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಯಾವುದೇ ಸೂಚನೆ ನೀಡದೆ ಮತ್ತೇ ನೀರು ಪೊರೈಕೆಯ ಕಾಮಗಾರಿ ಆರಂಭಿಸಲಾಗಿದೆ. ಕೂಡಲೇ ಕಾಮಗಾರಿಯನ್ನು ನಿಲ್ಲಿಸಬೇಕೆಂದು ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ನಿಯೋಗ ತಹಶೀಲ್ದಾರ್ ಕಾರ್ಯಾಲಯಕ್ಕೆ ಭೇಟಿ ನೀಡಿ ತಹಶೀಲ್ದಾರ್ ಶೈಲೇಶ ಪರಮಾನಂದ ಮತ್ತು ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರಿಗೆ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅಕ್ರಂ ಖಾನ್, ಸಮಿತಿಯ ಪದಾಧಿಕಾರಿಗಳಾದ ರಾಮಲಿಂಗ ಜಾಧವ್, ರಮೇಶ ನಾಯ್ಕ, ಶಿವಪ್ಪ ನಾಯ್ಕ, ಗೌರೀಶ ನಾಯ್ಕ, ತುಕರಾಮ ಪರಸೋಜಿ, ಲೀಲಾವತಿ ಕೊಳಚೆ, ಲೀಲಾ ಮಾದರ, ಶಹಜಾದಿ, ಸಾಧಿಕದ ಮುಲ್ಲಾ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.