ಮತಾಂತರ ಮಸೂದೆಗೆ ಕ್ಯಾಬಿನೆಟ್ ಅನುಮೋದನೆ : ನಾಳೆ ಮಂಡನೆ ಸಾಧ್ಯತೆ
Team Udayavani, Dec 20, 2021, 5:19 PM IST
ಬೆಳಗಾವಿ : ಮತಾಂತರ ನಿಷೇಧ ಮಸೂದೆಗೆ ಕರ್ನಾಟಕ ಸರಕಾರದ ಕ್ಯಾಬಿನೆಟ್ ಸೋಮವಾರ ಅನುಮೋದನೆ ನೀಡಿದ್ದು, ಡಿಸೆಂಬರ್ 21 ರಂದು ವಿಧಾನಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವಿತ ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ್ದು, ನಾಳೆ ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಸಂಪುಟ ಸಭೆಯ ನಿರ್ಧಾರಗಳ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ವಿರೋಧ ಪಕ್ಷಗಳು ಮತ್ತು ಕ್ರಿಶ್ಚಿಯನ್ ಸಮುದಾಯದ ಮುಖಂಡರು ತೀವ್ರವಾಗಿ ವಿರೋಧಿಸುತ್ತಿರುವ ಪ್ರಸ್ತಾವಿತ ಮಸೂದೆಯು ದಂಡದ ನಿಬಂಧನೆಗಳನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳಲು ಬಯಸುವ ವ್ಯಕ್ತಿಗಳು ಎರಡು ತಿಂಗಳ ಮೊದಲು ಡೆಪ್ಯೂಟಿ ಕಮಿಷನರ್ ಮುಂದೆ ಅರ್ಜಿಯನ್ನು ಸಲ್ಲಿಸಬೇಕೆಂದು ಷರತ್ತು ವಿಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.