ಬೆಳಗಾವಿ:ಗೃಹ ಸಚಿವರಿಂದ ಶಿವಾಜಿ,ಬಸವೇಶ್ವರ ಮತ್ತು ರಾಯಣ್ಣರ ಪ್ರತಿಮೆಗೆ ಮಾಲಾರ್ಪಣೆ
Team Udayavani, Dec 21, 2021, 10:54 AM IST
ಬೆಳಗಾವಿ : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಮಂಗಳವಾರ ಮುಂಜಾನೆ, ಬೆಳಗಾವಿ ನಗರ ಅನಾಗೊಳ ದಲ್ಲಿ ಪುನರ್ ಪ್ರತಿಷ್ಠಾಪನೆ ಗೊಂಡ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆ ಮತ್ತು ನಗರದಲ್ಲಿ, ಸ್ಥಾಪಿಸಲಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಬೆಳಗಾವಿ ನಗರದಲ್ಲಿ ಸ್ಥಾಪಿಸಲಾಗಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ರಾಯಣ್ಣ ರವರ ಪ್ರತಿಮೆಗೆ ಅವಮಾನ ಮಾಡಿದ ದುಷ್ಕರ್ಮಿಗಳು ದೇಶ ದ್ರೋಹಿಗಳು, ಅವರಿಗೆ ತಕ್ಕ ಶಾಸ್ತಿ ವಿಧಿಸುತ್ತೇವೆ. ಇದರ ಹಿಂದಿನ ಇರಬಹುದಾದ ಸಂಚನ್ನು, ಪೊಲೀಸರು ಬಯಲುಗೊಳಿಸುತ್ತಾರೆ ಎಂದರು.
ಬೆಳಗಾವಿಯ ಅನಾಗೊಳದಲ್ಲಿ ದುಷ್ಕರ್ಮಿಗಳಿಂದ ಧ್ವಂಸಗೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆಯನ್ನು ಪುನರ್ ಸ್ಥಾಪಿಸಲಾಗಿದ್ದು, ಇಂದು ಮುಂಜಾನೆ ಇಲ್ಲಿಗೆ ತೆರಳಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು. ರಾಯಣ್ಣರವರ ಪ್ರತಿಮೆಗೆ ಅವಮಾನ ಮಾಡಿದ 38 ದೇಶದ್ರೋಹಿಗಳನ್ನು ಬಂಧಿಸಲಾಗಿದ್ದು ಉಳಿದವರನ್ನು ವಶಕ್ಕೆ ಪಡೆಯಲಾಗುವುದು. pic.twitter.com/hvrTRdN0Wz
— Araga Jnanendra (@JnanendraAraga) December 21, 2021
ಗೃಹ ಸಚಿವರ ಜೊತೆಯಲ್ಲಿ ಶಾಸಕ ಶ್ರೀ ಅಭಯ್ ಪಾಟೀಲ್ ಆವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.