ಸರ್ಕಾರಿ ಕೆಲಸಕ್ಕೆ ಅಡ್ಡಿ ಆರ್ಟಿಐ ಕಾರ್ಯಕರ್ತ ಬಂಧನ
Team Udayavani, Dec 21, 2021, 11:29 AM IST
ಬೆಂಗಳೂರು: ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದಲ್ಲದೆ, ಧಮ್ಕಿ ಹಾಕಿದ ಆರೋಪದ ಮೇಲೆ ಆರ್ಟಿಐ ಕಾರ್ಯಕರ್ತನನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಉಪವಿಭಾಗದ ವಾರ್ಡ್ನ ಸಹಾಯಕ ಎಂಜಿನಿಯರ್ 39 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಆರ್ಟಿಐ ಕಾರ್ಯಕರ್ತ ಕೃಷ್ಣಮೂರ್ತಿಗೌಡನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಬಿಬಿಎಂಪಿ ಸಹಾಯಕ ಎಂಜಿನಿಯರ್ ಆಗಿರುವ ದೂರುದಾರ ಮಹಿಳೆ, ಕಳೆದ ಒಂದೂವರೆ ವರ್ಷಗಳಿಂದ ಗಿರಿನಗರ ಉಪ ವಿಭಾಗದ ವಾರ್ಡ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಆರ್ ಟಿಐ ಕಾರ್ಯಕರ್ತ ಹಾಗೂ ಪತ್ರಿಕೆ ಯೊಂದರ ವರದಿ ಗಾರ ಎಂದು ಹೇಳಿಕೊಂಡು ನಿತ್ಯ ಕಚೇರಿಗೆ ಬರುತ್ತಿದ್ದ ಕೃಷ್ಣಮೂರ್ತಿ ಸಂಬಂಧವಿಲ್ಲದ ಮಾಹಿತಿಗಳನ್ನು ಕೇಳುತ್ತಿದ್ದ. ಆರ್.ಟಿ.ಐ ಕಾರ್ಯಕರ್ತ ಎಂದು ಗೌರವ ನೀಡಿ ಆತ ಕೇಳುತ್ತಿದ್ದ ಎಲ್ಲ ವಿಚಾರಗಳ ಬಗ್ಗೆಯೂ ಮಾಹಿತಿ ನೀಡುತ್ತಿದ್ದಾರೆ. ಆದರೂ ಕೃಷ್ಣಮೂರ್ತಿ ಆಗಾಗ ಕಚೇರಿಗೆ ಯಾವುದಾದರೂ ವಿಷಯ ತೆಗೆದು ತೊಂದರೆ ಕೊಡುತ್ತಿದ್ದ. ಕಚೇರಿ ಕೆಲಸದ ಮೇಲೆ ಹೊರಗೆ ಹೋದಾಗ ನನ್ನನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ಕೊಡುತ್ತಿದ್ದ. ಡಿ.18ರಂದು ಸಂಜೆ ಕನ್ಸಲ್ಟೆಂಟ್ ರುದ್ರೇಶ್ ನನ್ನ ಕ್ಯಾಬಿನ್ ಗೆ ಬಂದು ಕೆಲಸದ ಬಗ್ಗೆ ಮಾಹಿತಿ ನೀಡುತ್ತಿದ್ದರು. ಆ ವೇಳೆ ಆರೋಪಿ ಕೃಷ್ಣಮೂರ್ತಿ ಏಕಾಏಕಿ ನನ್ನ ಕ್ಯಾಬಿನ್ ಗೆ ನುಗ್ಗಿ ಇಬ್ಬರಿಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ. ಹಾಗೂ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಮಹಿಳಾ ಅಧಿಕಾರಿ ದೂರಿನಲ್ಲಿ ಉಲ್ಲೇಖೀಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿ ಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.