ಪಾಲಿಕೆ ಆಯುಕ್ತರ ಮೇಲೆ ಹಲ್ಲೆಗೆ ಖಂಡನೆ
Team Udayavani, Dec 21, 2021, 2:06 PM IST
ವಿಜಯಪುರ: ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮೇಲೆ ದುಷ್ಕರ್ಮಿಗಳುನಡೆಸಿರುವ ಮಾರಣಾಂತಿಕ ಹಲ್ಲೆ ಖಂಡಿಸಿಪಾಲಿಕೆ-ಸರ್ಕಾರಿ ನೌಕರರು ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ,ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ನೌಕರರಸಂಘದ ಜಿಲ್ಲಾ ಘಟಕಗಳು ಸೋಮವಾರ ನಗರ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ ಕೂಡಲೇ ಎಲ್ಲ ಆರೋಪಿತರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದವು.
ಈ ವೇಳೆ ಮಾತನಾಡಿದ ನೌಕರರ ಸಂಘದಪ್ರಮುಖರು, ಮಹಾನಗರ ಪಾಲಿಕೆ ಆಯುಕ್ತವಿಜಯಕುಮಾರ ಮೆಕ್ಕಳಕಿ ಅವರು ನಗರದ ಸುಕೂನ ಕಾಲೋನಿ ಪ್ರದೇಶದಲ್ಲಿ ಒಳಚರಂಡಿ ಕಾಮಗಾರಿಪರಿಶೀಲನೆಗೆ ತೆರಳಿದಾಗ ಕೆಲವರು ಅನಗತ್ಯವಾಗಿಕರ್ತವ್ಯಕ್ಕೆ ಅಡ್ಡಿ ಮಾಡಿ ಹಲ್ಲೆ ನಡೆಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ವಿಜಯ ಮೆಕ್ಕಳಕಿ ಅವರು ಜಿಲ್ಲೆಯಲ್ಲಿಪ್ರಾಮಾಣಿಕ ಕರ್ತವ್ಯದ ಮೂಲಕವೇ ತಮ್ಮನ್ನು ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ. ಇಂಥಅಧಿಕಾರಿ ಮೇಲೆ ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿ ಅಧಿಕಾರಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆಂದು ದೂರಿದರು.
ಸರ್ಕಾರಕೂಡಲೇಹಲ್ಲೆನಡೆಸಿದದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಜಿಲ್ಲೆ ಸರ್ಕಾರಿ ನೌಕರರು, ಪೌರ ಕಾರ್ಮಿಕರು ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಚ್ಚರಿಸಿದರು.
ಭವಿಷ್ಯದಲ್ಲಿ ಇಂಥ ಘಟನೆಗಳು ನಡೆಯದಂತೆ ಸರಕಾರಿ ನೌಕರರಿಗೆ ಸೇವಾ ಭದ್ರತೆ ನೀಡಬೇಕು.ಕರ್ತವ್ಯ ನಿರ್ವಹಣೆಯಲ್ಲಿ ನೌಕರರಿಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರಬೋರಣ್ಣವರ ಮಾತನಾಡಿ, ಮಹಾನಗರ ಪಾಲಿಕೆ ಸಾರ್ವಜನಿಕರೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ನಗರದ ಜನರ ಸೇವೆಗಾಗಿ ಅಧಿಕಾರಿಗಳು-ಸಿಬ್ಬಂದಿ ನಿರಂತರ ಸೇವೆ ನೀಡುತ್ತಾರೆ. ಪೌರ ನೌಕರರು ದೈನಂದಿನ ಜೀವನದಲ್ಲಿ ನಗರ ಸ್ವಚ್ಛತೆಗಾಗಿ, ಕಾನೂನು ಪರಿಪಾಲನೆ ಸಂದರ್ಭದಲ್ಲಿ ಇಂಥಕೃತ್ಯಗಳು ನಡೆಸುವ ಪ್ರವೃತ್ತಿ ವಿರುದ್ಧಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ ಎಂದರು.
ಏಕಾಏಕಿಯಾಗಿ ಗುಂಪು-ಗುಂಪಾಗಿ ಬಂದು ಹೆದರಿಸುವ, ಹಲ್ಲೆ ಮಾಡುವ, ಅರಾಜಕತೆ ನಡೆಸುವಕೃತ್ಯಕ್ಕೆ ಕಡಿವಾಣ ಹಾಕಬೇಕು. ಸದರಿ ಘಟನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಮಹಾನಗರ ಪಾಲಿಕೆಯ ಪೌರಕಾರ್ಮಿಕ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮಣ ಹಂದ್ರಾಳ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶಾಳ, ಆರ್ .ಪಿ.ಚಲವಾದಿ, ಆರ್.ಬಿ.ಶಿರಶಾಡ, ಎಲ್.ಎಂ.ಮೋರೆ ಹಾಗೂ ವಿಠ್ಠಲ ಹೊನ್ನಳ್ಳಿ ಮಾತನಾಡಿದರು.
ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಜುಬೇರ ಕೆರೂರ, ಕಾರ್ಯದರ್ಶಿ ರಾಜಶೇಖರ ಧೈವಾಡಿ, ವಿಜಯಕುಮಾರ ಹತ್ತಿ, ಗಂಗಾಧರ ಜೇವೂರ, ಜಗದೀಶ ಬೋಳಸೂರ, ಶಿವಾನಂದ ಮಂಗನ್ನವರ, ಉಮೇಶ ಕೌಲಗಿ, ನಿಜುಮೇಲಿನಕೇರಿ, ಬಸೀರ್ ನದಾಫ್, ಶರಣಬಸುಬೇನೂರ, ಎಚ್.ಕೆ. ಬೂದಿಹಾಳ, ಶಿವಲಿಂಗ ಪಟ್ಟಣಶೆಟ್ಟಿ, ವಿ.ಬಿ. ಕಂಪ್ಲಿ, ಅಜೀತ ಭುಸೇರಿಸೇರಿದಂತೆ ಸರ್ಕಾರಿ ನೌಕರರು ಹಾಗೂ ಪಾಲಿಕೆನೌಕರರು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.