ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಕ್ಷಣಗಣನೆ
Team Udayavani, Dec 21, 2021, 2:38 PM IST
ಬೆಳಗಾವಿ : ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ “ಮತಾಂತರ ನಿಷೇಧ ವಿಧೇಯಕ” ಮಂಡನೆಗೆ ವಿಧಾನ ಮಂಡಲದ ಉಭಯ ಸದನದಲ್ಲಿ ಈಗ ಕ್ಷಣಗಣನೆ ಆರಂಭವಾಗಿದೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕ ಮಂಡನೆಗೆ ಒಪ್ಪಿಗೆ ಲಭಿಸಿದೆ. ಮಂಗಳವಾರ ಬೆಳಗ್ಗೆಯೇ ಮಂಡನೆ ಸಾಧ್ಯತೆ ಇತ್ತು. ಆದರೆ ಪ್ರಶ್ನೋತ್ತರ ಸೇರಿದಂತೆ ಇತರೆ ಕಲಾಪಗಳನ್ನು ಪೂರ್ಣಗೊಳಿಸುವುದಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದ್ಯತೆ ನೀಡಿದರು. ಹೀಗಾಗಿ ಮಧ್ಯಾಹ್ನದ ಕಲಾಪ ಸೇರಿದಾಗ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ.
ನಾವೆಲ್ಲರೂ ಸೇರಿ ಮತಾಂತರ ನಿಷೇಧ ವಿಧೇಯಕಕ್ಕೆ ಅನುಮತಿ ದೊರೆಯುವಂತೆ ನೋಡಿಕೊಳ್ಳೋಣ ಎಂದು ಕಾಗೇರಿ ಕಲಾಪ ಸಂದರ್ಭದಲ್ಲಿ ಹೇಳಿಕೆ ನೀಡಿರುವುದರಿಂದ ಇಂದೇ ಮಂಡನೆಯಾಗುವ ಸಾಧ್ಯತೆ ನಿಚ್ಚಳವಾಗಿದೆ. ವಿಧೇಯಕ ಕ್ಕೆ ವಿರೋಧ ಬೇಡ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದಾರೆ.
ಆದರೆ ಕಾಂಗ್ರೆಸ್ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ಭಾರಿ ವಾಗ್ವಾದದ ಮಧ್ಯೆ ವಿಧೇಯಕಕ್ಕೆ ಉಭಯ ಸದನಗಳಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಹೆಚ್ಚಿದೆ. ಇತ್ತೀಚೆಗಷ್ಟೇ ನಡೆದ ಪರಿಷತ್ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಒಟ್ಟು 36 ಸ್ಥಾನಬಲ ಹೊಂದಿದೆ. ಒಂದೊಮ್ಮೆ ಪರಿಷತ್ ನಲ್ಲಿ ವಿಧೇಯಕವನ್ನು ಮತಕ್ಕೆ ಹಾಕಿದರೆ ಜೆಡಿಎಸ್ ಸಭಾತ್ಯಾಗ ಮಾಡುವ ಸಾಧ್ಯತೆ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.