ಶ್ರೀ ಶಂಕರನಾರಾಯಣ ದೇಗುಲದಲ್ಲಿ ಸಂಭ್ರಮದಿಂದ ನಡೆದ ಕಾರ್ತೀಕ ದೀಪೋತ್ಸವ
Team Udayavani, Dec 21, 2021, 4:04 PM IST
ಶಿರಸಿ: ತಾಲೂಕಿನ ಸುಧಾಪುರ ಕ್ಷೇತ್ರದ ಐತಿಹಾಸಿಕ ಸೋದೆ ಅರಸರ ಕಾಲದಲ್ಲಿ ಕರಿ ಕಲ್ಲಿನಿಂದ ಕಟ್ಟಿದ ಅಪರೂಪದ ಶಿಲಾ ಕೆತ್ತನೆಗಳಿಂದ ಕಂಗೊಳಿಸುತ್ತಿರುವ ಮಠದೇವಳ ಗ್ರಾಮದ ಹಳೇಯೂರು ಮಜರೆಯಲ್ಲಿರುವ ದೇಗುಲವೇ ಶ್ರೀ ಶಂಕರನಾರಾಯಣ. ಈ ಬೃಹತ್ ಶಿಲಾ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ ಸಂಭ್ರಮದಲ್ಲಿ ನಡೆಯಿತು.
ಮಾರ್ಗಶಿರ ಶುಕ್ಲ ಪಕ್ಷದ ಹುಣ್ಣಿಮೆಯಂದು ಸೋಂದಾ ಜಾಗೃತ ವೇದಿಕೆ ಯು ಈ ಭಾಗದ ನಾಗರೀಕರೊಂದಿಗೆ ಸೇರಿ ವಿದ್ವಾನ್ ನಾರಾಯಣ ಶಾಸ್ತ್ರಿಗಳ ಆಚಾರ್ಯತ್ವದಲ್ಲಿ ಗೋಪಾಲ ಹೆಗಡೆ ಹಳೇಯೂರು ಇವರ ಯಜಮಾನಿಕೆಯಲ್ಲಿ ದೇವರುಗಳಿಗೆ ದೀಪೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಪೂಜಾ ಕೈಂಕರ್ಯದಲ್ಲಿಸುಬ್ರಾಯ ಜೋಶಿ ಸಂಪೇಸರ ಸಹಕರಿಸಿದರು.
ಈ ವೇಳೆ ಜಾಗೃತ ವೇದಿಕೆಯ ಕಾರ್ಯಧ್ಯಕ್ಷ ರತ್ನಾಕರ ಹೆಗಡೆ ಬಾಡಲಕೊಪ್ಪ ಕಾರ್ಯದರ್ಶಿ ಶ್ರೀಧರ ಹೆಗಡೆ ಗುಡ್ಡೇಮನೆ ಸದಸ್ಯರಾದ ಸತ್ಯನಾರಾಯಣ ಹೆಗಡೆ ಹಳೇಯೂರು ಮಾಬ್ಲೇಶ್ವರ ಹೆಗಡೆ, ಬಂಧೀಸರ ಸೋಂದಾ ಕಸಬಾ ಮಾತೃ ಮಂಡಳದ ಅಧ್ಯಕ್ಷೆ ಸ್ವಾತಿ ಪರಾಂಜಪೆ ತೇರಬೀದಿ, ಹಳೇಯೂರು – ತೇರಬೀದಿ- ವಾಜಗದ್ದೆ -ದೂಪದಹೊಂಡ ಭಾಗದ ನಾಗರೀಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.