ಪಾದೂರು ಐ.ಎಸ್.ಪಿ.ಆರ್.ಎಲ್ 2ನೇ ಹಂತದ ಯೋಜನೆಯ ಜೆಎಂಸಿ ಸರ್ವೇಗೆ ಸ್ಥಳೀಯರಿಂದ ತಡೆ

Team Udayavani, Dec 21, 2021, 7:48 PM IST

ಪಾದೂರು ಐ.ಎಸ್.ಪಿ.ಆರ್.ಎಲ್ 2ನೇ ಹಂತದ ಯೋಜನೆಯ ಜೆಎಂಸಿ ಸರ್ವೇಗೆ ಸ್ಥಳೀಯರಿಂದ ತಡೆ

ಕಾಪು‌ : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದ ಐ.ಎಸ್.ಪಿ.ಆರ್.ಎಲ್ ಯೋಜನೆಯ 2 ನೇ ಹಂತದ ಯೋಜನೆಯ 210 ಎಕ್ರೆ ಭೂಸ್ವಾಧೀನ ಪ್ರಕ್ರಿಯೆಗೆ ಹಲವು ತಿಂಗಳ ಹಿಂದೆ ಚಾಲನೆ ದೊರಕಿದ್ದು, ಯಾರಿಗೂ ಮಾಹಿತಿ‌ ನೀಡದೇ ಏಕಾಏಕಿಯಾಗಿ ಸರ್ವೆ ಗೆ ಮುಂದಾದ ಕೆಎಐಡಿಬಿ ಅಧಿಕಾರಿಗಳಿಗೆ ಸ್ಥಳೀಯರು ತಡೆಯೊಡ್ಡಿದ್ದಾರೆ.

ಪಾದೂರು ಯೋಜನೆಯ ಎರಡನೇ ಹಂತದ ವಿಸ್ತರಣೆಗಾಗಿ ಭೂಮಿ ಕಳೆದುಕೊಳ್ಳುವ ಭೂಸಂತ್ರಸ್ತರು ಪಾದೂರು ಗ್ರಾಮದ  ಭೂಮಿಯ ಮೌಲ್ಯ ಕಡಿಮೆ ಇರುವುದರಿಂದ ಪಕ್ಕದ ಗ್ರಾಮದ ಭೂಮಿಯ ಮೌಲ್ಯವನ್ನು ಪರಿಗಣಿಸಿ, ಬಳಿಕಷ್ಟೇ ಜೆಎಂಸಿ ಸರ್ವೇ  ನಡೆಸಬೇಕೆಂದು ಆಗ್ರಹಿಸಿದ್ದರು.

ಈ ಬಗ್ಗೆ ಶಾಸಕ ಲಾಲಾಜಿ ಆರ್. ಮೆಂಡನ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ , ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಶಿಲ್ಪಾ ಜಿ. ಸುವರ್ಣ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಜನಜಾಗೃತಿ ಮತ್ತು ಜನಹಿತ  ಸಮಿತಿ ಹಲವಾರು ಬಾರಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ ವಿಶೇಷ ಸಭೆ ನಡೆಸುವ ಬಗ್ಗೆ ಭರವಸೆ ನೀಡಿದ್ದರು.

ಆದರೆ ಮಂಗಳವಾರ ಕೆಎಐಡಿಬಿ ಅಧಿಕಾರಿಗಳು ಏಕಾಏಕಿ ಗ್ರಾಮ ಪಂಚಾಯತ್ ಗೂ ಹಾಗೂ ಪೋಲಿಸ್ ಠಾಣೆಗೂ ಯಾವುದೇ ಮಾಹಿತಿಯನ್ನು ನೀಡದೆ ಸರ್ವೇ ಕಾರ್ಯ ಆರಂಭಿಸಿದ್ದನ್ನು ಕಂಡ ಸಿಟ್ಟಾದ ಗ್ರಾಮಸ್ಥರು ಸರ್ವೆ ಕಾರ್ಯಕ್ಕೆ ತಡೆಯೊಡ್ಡಿ ಕೆಐಎಡಿಬಿ ಅಧಿಕಾರಿಗಳನ್ನು ವಾಪಾಸು ಕಳಿಸಿರುವ ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ಮಜೂರು ಗ್ರಾ.ಪಂ ಉಪಾಧ್ಯಕ್ಷರಾದ ಮಧುಸೂಧನ್ ಸಾಲ್ಯಾನ್ , ಮಜೂರು ಗ್ರಾ.ಪಂ ಸದಸ್ಯರಾದ ಸಂದೀಪ್ ರಾವ್ ,  ಪ್ರಸಾದ್ ಶೆಟ್ಟಿ ವಳದೂರು, ಜನಹಿತ ಸಮಿತಿ ಅಧ್ಯಕ್ಷ ಸುರೇಂದ್ರ ಜೈನ್ , ಸದಸ್ಯರಾದ ಮೇವಿಸ್ ಕೋರ್ಡ , ಮೇಬುಲ್ ಕೋರ್ಡ, ಪ್ರಶಾಂತ್ ರಾವ್, ರಾಘವೇಂದ್ರ ಆಚಾರ್ಯ , ರಿಚ್ಚರ್ಡ್ ಕೋರ್ಡ ಮುಂತಾದ ಸ್ಥಳೀಯರು ಹಾಗೂ ಭೂ ಸಂತ್ರಸ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

Kaup: ಪಾಂಗಾಳ: ಕರು ಅಕ್ರಮ ಸಾಗಾಟ ಪತ್ತೆ

Kaup: ಪಾಂಗಾಳ: ಕರು ಅಕ್ರಮ ಸಾಗಾಟ ಪತ್ತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.