ವಿವಾಹ ವಯೋಮಿತಿ ಏರಿಕೆ ಕೆಲವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ: ಪ್ರಧಾನಿ ಮೋದಿ
Team Udayavani, Dec 21, 2021, 10:30 PM IST
ಪ್ರಯಾಗ್‌ರಾಜ್: “ಹೆಣ್ಣುಮಕ್ಕಳಿಗೆ ವ್ಯಾಸಂಗ ಮಾಡಲು ಮತ್ತು ಪ್ರಗತಿ ಸಾಧಿಸಲು ಸಮಯ ಸಿಗಲಿ ಎಂಬ ಕಾರಣಕ್ಕೆ ಸರ್ಕಾರವು ಅವರ ವಿವಾಹದ ವಯಸ್ಸನ್ನು ಈಗಿರುವ 18ರಿಂದ 21ಕ್ಕೆ ಏರಿಸಲು ಪ್ರಯತ್ನಿಸುತ್ತಿದೆ. ಆದರೆ, ಇದು ಕೆಲವರಿಗೆ ರುಚಿಸುತ್ತಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಂಗಳವಾರ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ದೇಶದ ಹೆಣ್ಣುಮಕ್ಕಳಿಗಾಗಿ ಸರ್ಕಾರ ಮದುವೆ ವಯಸ್ಸಿನ ಮಿತಿ ಏರಿಸಲು ಮುಂದಾಗಿದೆ. ಆದರೆ, ಇದರಿಂದ ಸಮಸ್ಯೆ ಆಗುತ್ತಿರುವುದು ಯಾರಿಗೆ ಎಂಬುದು ಎಲ್ಲರಿಗೂ ಈಗ ಗೊತ್ತಾಗುತ್ತಿದೆ’ ಎಂದು ಹೇಳುವ ಮೂಲಕ ಸರ್ಕಾರದ ಪ್ರಸ್ತಾಪವನ್ನು ವಿರೋಧಿಸಿರುವ ಸಮಾಜವಾದಿ ಪಕ್ಷದ ಮುಖಂಡರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.
ಇದೇ ವೇಳೆ, “ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ನಿರ್ಮಿಸಲಾದ 30 ಲಕ್ಷ ಮನೆಗಳ ಪೈಕಿ 25 ಲಕ್ಷ ಮನೆಗಳು ಮಹಿಳೆಯರ ಹೆಸರಲ್ಲಿ ನೋಂದಣಿಯಾಗಿವೆ. ಉ.ಪ್ರದೇಶದಲ್ಲಿ ಈಗ ಮಹಿಳೆಯರಿಗೆ ಭದ್ರತೆ, ಹಕ್ಕುಗಳು ಹಾಗೂ ಅವಕಾಶಗಳಿವೆ. ನಮ್ಮೆಲ್ಲ ತಾಯಂದಿರು ಮತ್ತು ಸಹೋದರಿಯರು ರಾಜ್ಯವನ್ನು ಮತ್ತೆ ಕರಾಳತೆಗೆ ನೂಕುವುದಿಲ್ಲ ಎಂಬ ವಿಶ್ವಾಸ ನನಗಿದೆ’ ಎಂದೂ ಮೋದಿ ಹೇಳಿದ್ದಾರೆ.
ಇದನ್ನೂ ಓದಿ:ಎಂಇಎಸ್ ಪುಂಡಾಟಿಕೆ ವಿರುದ್ದ ಡಿ.24 ರಂದು ಬೃಹತ್ ಪ್ರತಿಭಟನೆ : ಸುಬ್ರಹ್ಮಣ್ಯ
ವೈರಲ್ ಆಯ್ತು ಫೋಟೋ
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ನವದೆಹಲಿಯಲ್ಲಿ ಭೇಟಿಯಾದ ಫೋಟೋ ಈಗ ವೈರಲ್ ಆಗಿದೆ. ಸೋಮವಾರ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಮೊಮ್ಮಗಳ ವಿವಾಹ ಆರತಕ್ಷತೆಯಲ್ಲಿ ಅವರಿಬ್ಬರು ಭೇಟಿಯಾಗಿದ್ದರು. ಉ.ಪ್ರ.ಪ್ರದೇಶ ಕಾಂಗ್ರೆಸ್ ಸಮಿತಿ ಈ ಫೋಟೋ ಟ್ವೀಟ್ ಮಾಡಿ, “ಸಮಾಜವಾದಿ ಪಕ್ಷದ ಮೊದಲ ಪದ “ಎಸ್’ ಎಂದರೆ ಸಂಘವಾದವೇ’ ಎಂದು ಪ್ರಶ್ನಿಸಿದೆ. ಅದಕ್ಕೆ ತಿರುಗೇಟು ನೀಡಿದ ಉ.ಪ್ರ.ಬಿಜೆಪಿ ಘಟಕ “ಫೋಟೋವೇ ಎಲ್ಲವನ್ನೂ ಹೇಳುತ್ತದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿ ತಿರುಗೇಟು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.