ಸರಕಾರ ನಿರ್ಲಕ್ಷಿಸಿದರೆ ಸ್ವಯಂಸೇವಕರಿಂದಲೇ ಕ್ರಮ
ಕಾರಿಂಜ ಕ್ಷೇತ್ರದಲ್ಲಿ ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆಯಲ್ಲಿ ವಜ್ರದೇಹಿ ಶ್ರೀ
Team Udayavani, Dec 22, 2021, 5:10 AM IST
ಮಂಗಳೂರು: ಬಂಟ್ವಾಳದ ಕಾರಿಂಜೇಶ್ವರ ಕ್ಷೇತ್ರದ ಪರಿಸರದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು ಮತ್ತು ಇತರ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ಮಂಗಳೂರು ವಿಭಾಗದ ನೇತೃತ್ವದಲ್ಲಿ ನಗರದ ಕ್ಲಾಕ್‌ಟವರ್ ಬಳಿ ಪ್ರತಿಭಟನೆ ಜರಗಿತು.
ಪ್ರತಿಭಟನೆ ನಿರತರನ್ನುದ್ದೇಶಿಸಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಅವರು ಮಾತನಾಡಿ, ಗಣಿಗಾರಿಕೆಯಿಂದಾಗಿ ದೇವಸ್ಥಾನ ಬಿರುಕುಬಿಟ್ಟಿದೆ. ಈ ಕ್ಷೇತ್ರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಘಟನೆಯ ಸ್ವಯಸೇವಕರೇ ಕ್ಷೇತ್ರದ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.
ಚಿಲಿಂಬಿಯ ಓಂ ಶ್ರೀ ಮಠದ ಶ್ರೀ ವಿದ್ಯಾನಂದ ಸ್ವಾಮೀಜಿ ಮಾತನಾಡಿ, ದೇವಸ್ಥಾನದ ಸುತ್ತಲಿನ 25 ಕಿ.ಮೀ. ವ್ಯಾಪ್ತಿಯ ಶಿಲೆಗಳಿಗೂ ದೇವಸ್ಥಾನದ ಅಡಿಯಲ್ಲಿರುವ ಶಿಲೆಗಳಿಗೂ ಸಂಬಂಧವಿದೆ. ಹಾಗಾಗಿ ಇಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ದೇವಸ್ಥಾನಕ್ಕೆ ಅಪಾಯ ಎದುರಾಗಿದೆ ಎಂದರು.
ನಾಗಸಾಧು ಬಾಬಾ ಶ್ರೀ ವಿಠಲಗಿರಿ ಮಹಾರಾಜ್ ಮಾತನಾಡಿ, ಕಾರಿಂಜೇಶ್ವರ ಕ್ಷೇತ್ರದ ರಕ್ಷಣೆಗಾಗಿ ಪ್ರಾಣ ಕೊಡುವುದಕ್ಕೂ ಹಿಂಜರಿಯುವುದಿಲ್ಲ ಎಂದರು.
ಹಿಂದುತ್ವಕ್ಕಾಗಿ ಮತ
ವಿಶ್ವಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಾತನಾಡಿ, ಕರಾವಳಿಗರು ಹಿಂದುತ್ವಕ್ಕಾಗಿ ಮತ ಹಾಕುತ್ತಾರೆ. ಮುಂದಿನ ದಿನಗಳಲ್ಲಿ ಇಲ್ಲಿನವರ ಮತ ಬೇಕಿದ್ದರೆ ಹಿಂದುತ್ವದ ಮೇಲೆ ನಡೆಯುತ್ತಿರುವ ಅನ್ಯಾಯಗಳಿಗೆ ಸರಕಾರ ಪರಿಹಾರ ಒದಗಿಸಬೇಕು ಎಂದು ಹೇಳಿದರು.
ಇದನ್ನೂ ಓದಿ:“ಭಾರತ ವಿರೋಧಿ ಕೃತ್ಯ’: 20 ಯೂಟ್ಯೂಬ್ ಚಾನೆಲ್, 2 ವೆಬ್‌ಸೈಟ್ ಬ್ಲಾಕ್
ವೇದಿಕೆಯ ಪ್ರಾಂತ ಕಾರ್ಯ
ಕಾರಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಮಾತನಾಡಿ, ನಮ್ಮ ಹೋರಾಟ ಗಣಿಗಾರಿಕೆ ವಿರುದ್ಧವಲ್ಲ, ಕಾರಿಂಜೇಶ್ವರ ಕ್ಷೇತ್ರದ ರಕ್ಷಣೆಯ ಪರ. ಇಲ್ಲಿ ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು. ಕ್ಷೇತ್ರದ ಪಾವಿತ್ರ್ಯ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಪ್ರವಾಸೋದ್ಯಮದ ಹೆಸರಿನಲ್ಲಿ ಅನ್ಯಮತೀಯರ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದರು.
ಮನವಿ ಸ್ವೀಕಾರ
ಪ್ರತಿಭಟನಕಾರರು ಡಿಸಿ ಕಚೇರಿ ಕಡೆ ತೆರಳಲು ಮುಂದಾದರೂ ಪೊಲೀಸರು ಅವಕಾಶ ನೀಡಲಿಲ್ಲ. ಹಾಗಾಗಿ ಕ್ಲಾಕ್‌ಟವರ್ ಬಳಿ ಸ್ವಾಮೀಜಿಗಳ ಸಹಿತ ಪ್ರತಿಭಟನಕಾರರು ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದರಲ್ಲದೇ ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಬೇಕೆಂದು ಆಗ್ರಹಿಸಿದರು. ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ ಮನವಿ ಸ್ವೀಕರಿಸಿದರು.
ಬೇಡಿಕೆಗಳು
– ಕಾರಿಂಜೇಶ್ವರ ಕ್ಷೇತ್ರದ ಪರಿಸರದಲ್ಲಿ ಗಣಿಗಾರಿಕೆಗೆ ಶಾಶ್ವತ ನಿಷೇಧ
-ಕ್ಷೇತ್ರದ 10 ಕಿ.ಮೀ. ವ್ಯಾಪ್ತಿಯನ್ನು ಧಾರ್ಮಿಕ ಸೂಕ್ಷ್ಮ ವಲಯವೆಂದು ಘೋಷಿಸಬೇಕು
-ಅಕ್ರಮ ಗಣಿಗಾರಿಕೆ, ಗೋಮಾಳ ಅತಿಕ್ರಮಣ, ಅರಣ್ಯ ಲೂಟಿ ಮಾಡಿದವರನ್ನು, ಬೆಂಬಲಿಸಿದವರನ್ನು ಬಂಧಿಸಬೇಕು.
ಗಣಿಗಾರಿಕೆ ತಾತ್ಕಾಲಿಕ ಸ್ಥಗಿತ
ಕ್ಷೇತ್ರ ಪರಿಸರದ 3 ಕಡೆ ನಡೆಯುತ್ತಿದ್ದ ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕ್ಷೇತ್ರವನ್ನು ಧಾರ್ಮಿಕ ಸೂಕ್ಷ್ಮ ವಲಯವನ್ನಾಗಿ ಘೋಷಿಸಬೇಕೆಂಬ ಪ್ರತಿಭಟನಕಾರರ ಬೇಡಿಕೆಯನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.