ಸುವರ್ಣಸೌಧ: ಮತ್ತೆ ಸದ್ದು ಮಾಡಿದ ಮಾಧ್ಯಮ ನಿರ್ಬಂಧ
ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ.
Team Udayavani, Dec 22, 2021, 12:35 PM IST
ಬೆಳಗಾವಿ:ಮತಾಂತರ ನಿಷೇಧ ವಿಧೇಯಕದ ಚರ್ಚೆಯ ದಿನ ಕಲಾಪಕ್ಕೆ ಮಾಧ್ಯಮ ಪ್ರವೇಶ ತಡೆ ಹಾಕಿದ ವಿಚಾರ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ. ಸ್ಪೀಕರ್ ಆದೇಶ ಇಲ್ಲದೇ ಇದ್ದರೂ ಮಾರ್ಷಲ್ ಗಳು ಈ ರೀತಿ ನಡೆದುಕೊಂಡರೆ ಅಥವಾ ಮೌಖಿಕ ಆದೇಶದ ಅನುಸಾರ ಮಾಧ್ಯಮಗಳನ್ನು ತಡೆದರೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವಿಚಾರ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮಾಧ್ಯಮಗಳಿಗೆ ಎಂದಿನಂತೆ ಅವಕಾಶ ನೀಡಲಾಗಿದೆ.
ಮಾಧ್ಯಮ ನಿರ್ಬಂಧದ ಬಗ್ಗೆ ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎನ್ನುತ್ತಿರುವವರು ಸಂವಿಧಾನದ ಒಂದು ಕಾಲನ್ನೇ ಮುರಿಯುತ್ತಿದ್ದಾರೆಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರಕಾರ ನಾಡಿನ ಸಮಸ್ಯೆಗಳನ್ನು ʼವಿಷಯಾಂತರʼ ಮಾಡಲು ʼಮತಾಂತರʼ ಗುಮ್ಮವನ್ನು ತಂದು ನಿಲ್ಲಿಸಿದೆ.
ನಾಡಿನ ಜನರು ಮತ್ತು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜಕೀಯದ ಲಾಭದ ದುರಾಸೆಗೆ ರಾಜ್ಯದ ಸಾಮರಸ್ಯಕ್ಕೆ ಬೆಂಕಿ ಇಡುವ ಮತಾಂತರ ನಿಷೇಧ ಮಸೂದೆಯ ನಿಜಬಣ್ಣ ಎಲ್ಲಿ ಬಯಲಾಗುತ್ತದೋ ಎಂದು ಅಂಜಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ ಎಂಬ ಸಂಶಯ ಇದೆ.
ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮ ರಂಗವು ಸಂವಿಧಾನದ ಒಂದು ಅಂಗ. ಈಗ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ʼಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನʼ ಮಾಡಲಾಗುತ್ತಿದೆ.ಇದು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುವವರ ದರ್ಪದ ಹೆಜ್ಜೆಯಷ್ಟೇ. ಅವರ ದುರುದ್ದೇಶ ಸ್ಪಷ್ಟ.
ಈ ಮಧ್ಯೆ ಮಾನ್ಯ ಸ್ಪೀಕರ್ ಅವರು ಮಾಧ್ಯಮ ನಿರ್ಬಂಧದ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಹಾಗಾದರೆ, ನಿರ್ಬಂಧ ಹೇರಿದವರು ಯಾರು? ಸ್ಪೀಕರ್ ಅವರಿಗೆ ಗೊತ್ತಿಲ್ಲದೆ ನಿರ್ಬಂಧದ ಸಂದೇಶ ಮಾಧ್ಯಮಗಳಿಗೆ ಕೊಟ್ಟವರು ಯಾರು? ಈ ಬಗ್ಗೆ ಜನರಿಗೆ ಸತ್ಯಾಂಶ ಗೊತ್ತಾಗಬೇಕಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.