ಪಕ್ಷಕ್ಕಿಂತ ದೇಶವೇ ಮೊದಲು ಬಿಜೆಪಿ ಸಿದ್ದಾಂತ: ಪಟ್ಟಣಶೆಟ್ಟಿ
Team Udayavani, Dec 22, 2021, 5:31 PM IST
ವಿಜಯಪುರ: ದೇಶದ ಸಮಗ್ರತೆಗೆ ಬಗ್ಗೆ ಚಿಂತನೆ ನಡೆಸುವ ಏಕೈಕ ಪಕ್ಷ ಬಿಜೆಪಿ ಮಾತ್ರ ಭಾರತೀಯರಿಗೆ ಆಡಳಿತ ನೀಡಲು ಸೂಕ್ತ. ಕಾರ್ಯಕರ್ತರ ಆಧಾರಿತ ರಾಷ್ಟ್ರೀಯ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿ ಮಾತ್ರವೇ ದೇಶಕ್ಕೆ ಸುಭದ್ರ ಸರ್ಕಾರ ನೀಡಲು ಸಾಧ್ಯ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದರು.
ನಗರದ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ವಿಜಯಪುರ ನಗರ ಮಂಡಳದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರಿಗೆ ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಹಾಗೂ ದೇಶವೇ ಮೊದಲು ಎಂಬ ಸಿದ್ಧಾಂತವೇ ಪಕ್ಷದ ಜೀವಾಳ ಎಂದರು.
ದೇಶ ಮೊದಲು ನಂತರ ನಾವು ಎಂಬ ಸಿದ್ಧಾಂತದ ಕಾರಣದಿಂದಲೇ ದೇಶದ ಎಲ್ಲೆಡೆ ಜನರು ಬಿಜೆಪಿ ಹಾಗೂ ಕಾಯಕರ್ತರ ಮೇಲೆ ವಿಶ್ವಾಸ ಇರಿಸಿ, ಪ್ರೀತಿ ತೋರುತ್ತಿದ್ದಾರೆ. ಹೀಗಾಗಿ ದೇಶದ ಜನರ ಆಶಯದಂತೆ ಪಕ್ಷದ ಕಾರ್ಯಕರ್ತರು ನಿರಂತರ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ನಗರ ಮಂಡಳ ಅಧ್ಯಕ್ಷ ಮಳುಗೌಡ, ಬಿಜೆಪಿ ಬೆಳಗಾವಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸಂಘಟನಾತ್ಮಕ ವಿಷಯಗಳ ಕುರಿತು ಮಾತನಾಡಿದರು.
ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಘಟಕಾಂಬಳೆ, ಭೀಮಾಶಂಕರ ಹದನೂರ, ಪಾಪುಸಿಂಗ್ ರಜಪೂತ, ಉಮೇಶ ವಂದಾಲ, ಭಾರತಿ ಭುಂಯ್ನಾರ, ಲಕ್ಷ್ಮೀ ಕನ್ನೊಳ್ಳಿ, ವಿಜಯ ಜೋಶಿ, ರಾಕೇಶ ಕುಲಕರ್ಣಿ, ರಾಜೇಂದ್ರ ವಾಲಿ, ವಿನಾಯಕ ದಹಿಂಡೆ, ಗುರು ಗಚ್ಚಿನಮಠ, ರಾಜೇಶ ತವಸೆ, ಸೋಮು ಮಠ, ಕಾಂತು ಸಿಂಧೆ, ಅಲ್ತಾಫ್ ಇಟಗಿ, ಸತೀಶ ಪಾಟೀಲ, ಸಂದೀಪ ಪಾಟೀಲ, ರಾಜಶೇಖರ ತಾಳಿಕೋಟಿ, ಶಬೀನಾ ಚಬನೂರ, ಸತೀಶ ಡೋಬಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.