ನಾಳೆ “ಬೆಲ್ಲದ ಹಬ್ಬ’; ಆಹಾರ ಪದಾರ್ಥಗಳ ಪ್ರದರ್ಶನ
ಆನ್‌ಲೈನ್ ಮೂಲಕ 22 ಜನ ನೋಂದಣಿ ಮಾಡಿಕೊಂಡಿದ್ದಾರೆ.
Team Udayavani, Dec 22, 2021, 6:39 PM IST
ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರದ ಬೆಲ್ಲ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಜಿಲ್ಲೆಯಲ್ಲಿ ಬೆಲ್ಲ ತಯಾರಿಕೆಗೆ ಪ್ರೋತ್ಸಾಹ ನೀಡುವ ಜತೆಗೆ ಬೆಲ್ಲದ ಉಪ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಡಿ.23ರಂದು ವಿದ್ಯಾಗಿರಿಯಲ್ಲಿರುವ ಬ.ವಿ.ವ ಸಂಘದ ಎಂ.ಎಬಿ.ಎ ಕಾಲೇಜಿನ ಆವರಣದಲ್ಲಿ “ಬೆಲ್ಲದ ಹಬ್ಬ’ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ದಿನಾಚರಣೆ ಅಂಗವಾಗಿ ಬೆಲ್ಲದ ಹಬ್ಬ, ಬೆಲ್ಲದ ಮೌಲ್ಯವ ರ್ಧಿತ ಆಹಾರ ಪದಾರ್ಥಗಳ ಪ್ರದರ್ಶನ ಹಾಗೂ ಜಿಲ್ಲಾಮಟ್ಟದ ಪ್ರಶಸ್ತಿ ಪಡೆದ ರೈತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಹಬ್ಬದಲ್ಲಿ ಬೆಲ್ಲವನ್ನು ಉಪಯೋಗಿಸಿ ಸಿರಿಧಾನ್ಯಗಳು ಹಾಗೂ ಇತರೆ ಆಹಾರ ಪದಾರ್ಥಗಳನ್ನು ಬಳಸಿ ತಯಾರಿಸಿದ ಪದಾರ್ಥಗಳ ಪ್ರದರ್ಶನ ಕೂಡ ನಡೆಸಲಾಗುತ್ತಿದೆ ಎಂದರು.
ಜಿಲ್ಲೆಯ ವ್ಯಾಪ್ತಿಯಲ್ಲಿ 1ಲಕ್ಷ ಎಕರೆದಷ್ಟು ಕಬ್ಬು ಬೆಳೆಯಲಾಗುತ್ತಿದೆ. ಬೆಲ್ಲ ಉತ್ಪಾದನೆಯಲ್ಲಿ ಮಹಾಲಿಂಗಪುರ ದೇಶಕ್ಕೆ ಮಾದರಿಯಾಗಿದೆ. ಬೆಲ್ಲದಿಂದ ವಿವಿಧ ಆಹಾರ ಪದಾರ್ಥಗಳ ತಯಾರಿಕೆ, ಉತ್ಪನ್ನಗಳನ್ನು ಪ್ಯಾಕ್ ಮಾಡಿ ಬ್ರ್ಯಾಂಡ್ ರೂಪದಲ್ಲಿ ಮಾರುಕಟ್ಟೆಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಬೆಲ್ಲದ ಹಬ್ಬವನ್ನು ಆಯೋಜಿಸಿರುವುದಾಗಿ ತಿಳಿಸಿದರು.
ಕೇಂದ್ರ ಸರಕಾರದ ಆತ್ಮ ನಿರ್ಭರ ಭಾರತ ಅಭಿಯಾನ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವ ಯೋಜನೆಯಡಿ ಒಂದು ಜಿಲ್ಲೆ ಒಂದು ಉತ್ಪನ್ನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದು ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ಅಭಿವೃದ್ಧಿಗೆ ಅನು ಕೂಲವಾಗಲಿದೆ. ಈ ಯೋಜನೆಯಡಿ ಈಗಾಗಲೇ ಆನ್‌ಲೈನ್ ಮೂಲಕ 22 ಜನ ನೋಂದಣಿ ಮಾಡಿಕೊಂಡಿದ್ದಾರೆ. ಬೆಳೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ನೇರ ಮಾರಾಟ ವ್ಯವಸ್ಥೆ ಬಗ್ಗೆ ರೈತರಲ್ಲಿ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು.
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ ಹಿರಿಯ ವಿಜ್ಞಾನಿ ಡಾ|ಬಾಬಾಸಾಹೇಬ ಬೋರಸೆ ಬೆಲ್ಲ ಮತ್ತು ಬೆಲ್ಲದ ಉತ್ಪನ್ನ ಕುರಿತು, ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿ ಡಾ|ಹೇಮಲತಾ ಪೋದ್ದಾರ ಬೆಳೆಗಳ ಮೌಲ್ಯವರ್ಧಿತ ಸಂಸ್ಕರಣೆ ಕುರಿತು, ಬಾಗಲಕೋಟೆ ಬವಿವ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಹಾಗೂ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಡಾ|ಭಾರತಿ ಮೇಟಿ ಮೌಲ್ಯವರ್ಧಿತ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸುವಲ್ಲಿ ರೈತರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದರು.
ಬವಿವ ಸಂಘದ ಎಂ.ಬಿ.ಎ ಕಾಲೇಜಿನ ಪ್ರಾಚಾರ್ಯ ಡಾ|ಆರ್.ಜಿ.ಅಳ್ಳಗಿ ಮಾತನಾಡಿ, ಎಂಬಿಎ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಬೆಲ್ಲದಿಂದ ವಿವಿಧ ಆಹಾರ ಉತ್ಪಾದನೆಗಳನ್ನು ತಯಾರಿಸಿ ಪ್ರದರ್ಶನ ಮಾಡಲಿದ್ದಾರೆ. ಇದಕ್ಕಾಗಿ 40 ತಂಡಗಳನ್ನು ರಚಿಸಲಾಗಿದ್ದು, ಆಹಾರ ಉತ್ಪಾದನೆ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆಯಲಿದ್ದಾರೆ. ಕೋವಿಡ್-19 ಜಾಗೃತಿಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ರೈತರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ರೈತರಲ್ಲಿ ಆತ್ಮವಿಶ್ವಾಸ ಬೆಳೆಸಲು ಸಾಧ್ಯವಾಗುತ್ತಿದೆ ಎಂದರು.
ಜಿಲ್ಲಾಡಳಿತ, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ಬಿವಿವ ಸಂಘದ ಎಂ.ಬಿ.ಎ ಕಾಲೇಜು, ಮುಧೋಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೃಷಿ ತಂತ್ರಜ್ಞರ ಸಂಸ್ಥೆ ಹಾಗೂ ಕೃಷಿಕ ಸಮಾಜದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ| ಮೌನೇಶ್ವರಿ ಕಮ್ಮಾರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್.ಬಿ.ಹಳ್ಳೊಳ್ಳಿ, ಗೀತಾ ಹಿರೇಮಠ, ಎಂ.ಬಿ.ಎ ಕಾಲೇಜಿನ ಅಶೋಕ ಉಟಗಿ, ವಿಜಯಲಕ್ಷ್ಮೀ ಪಾಟೀಲ ಉಪಸ್ಥಿತರಿದ್ದರು.
ಎಂಬಿಎ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಬೆಲ್ಲದಿಂದ ವಿವಿಧ ಆಹಾರ ಉತ್ಪಾದನೆಗಳನ್ನು ತಯಾರಿಸಿ ಪ್ರದರ್ಶನ ಮಾಡಲಿದ್ದಾರೆ. ಇದಕ್ಕಾಗಿ 40 ತಂಡಗಳನ್ನು ರಚಿಸಲಾಗಿದ್ದು, ಆಹಾರ ಉತ್ಪಾದನೆ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆಯಲಿದ್ದಾರೆ.
ಡಾ|ಆರ್.ಜಿ. ಅಳ್ಳಗಿ,
ನಿರ್ದೇಶಕ, ಬಿಮ್ಸ್ ಎಂಬಿಎ ಕಾಲೇಜ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.