ಸಂಪೂರ್ಣ ಹದಗೆಟ್ಟ ವಂಡ್ಸೆ-ಇಡೂರು ರಸ್ತೆ

ಹೊಂಡ ಮಯ ರಸ್ತೆ ; ಸಂಚಾರದ ಅನಿವಾರ್ಯದಲ್ಲಿ ಸವಾರರು

Team Udayavani, Dec 22, 2021, 6:51 PM IST

ಸಂಪೂರ್ಣ ಹದಗೆಟ್ಟ ವಂಡ್ಸೆ-ಇಡೂರು ರಸ್ತೆ

ವಂಡ್ಸೆ: ರಾ.ಹೆದ್ದಾರಿಯ ಹೆಮ್ಮಾಡಿ ಮಾರ್ಗವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಸಾಗುವ ಮುಖ್ಯ ರಸ್ತೆಯ ವಂಡ್ಸೆಯಿಂದ ಚಿತ್ತೂರು ಮಾರ್ಗವಾಗಿ ಇಡೂರು ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ.

ರಾಜ್ಯಪಾಲರ ಕೊಲ್ಲೂರು ಭೇಟಿ ಸಂದರ್ಭದಲ್ಲಿ ಚೆಲ್ಲಿದ ಜಲ್ಲಿ ದಿಕ್ಕುಪಾಲು ಎರಡು ವಾರಗಳ ಹಿಂದೆ ಕೊಲ್ಲೂರು ಶ್ರೀ ದೇವಿಯ ದರ್ಶನಕ್ಕೆ ಇದೇ ಮಾರ್ಗವಾಗಿ ಆಗಮಿಸಿದ್ದ ಕರ್ನಾಟಕ ರಾಜ್ಯಪಾಲರ ಆಗಮನದ ಸಂದರ್ಭದಲ್ಲಿ ರಸ್ತೆಯ ಹೊಂಡಕ್ಕೆ ಚೆಲ್ಲಿದ್ದ ಜಲ್ಲಿ ದಿಕ್ಕುಪಾಲಾಗಿದ್ದು ಧೂಳುಮಯವಾದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರವು ಕೂಡ ಕಷ್ಟಸಾಧ್ಯವಾಗಿದೆ. ರಸ್ತೆ ದುರಸ್ತಿಯಾಗದೆ ಪಾದಚಾರಿಗಳು ಆತಂಕದಲ್ಲೇ ಸಾಗಬೇಕಾಗಿದೆ.

ನೂರಾರು ವಾಹನ ಸಂಚಾರ
ವಿವಿಧ ರಾಜ್ಯಗಳು ಸಹಿತ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ ಹಾಗೂ ಸಿಗಂಧೂರು ದೇಗುಲಕ್ಕೆ ನೂರಾರು ಸಂಖ್ಯೆಯಲ್ಲಿ ವಿವಿಧ ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತದೆ. ಯಾತ್ರಾರ್ಥಿಗಳ ಪ್ರಯಾಣದ ಪಾಡು ಹೇಳತೀರದು. ರಾತ್ರಿ ಸಂಚಾರವಂತೂ ಇನ್ನೂ ಕಷ್ಟಸಾಧ್ಯ. ಹೊಂಡಮಯ ರಸ್ತೆಯಲ್ಲಿ ಅನೇಕ ದ್ವಿಚಕ್ರ ವಾಹನಗಳು ಸ್ಕಿಡ್‌ ಆಗಿ ಬಿದ್ದು ಸವಾರರು ಗಾಯಗೊಂಡ ಅನೇಕ ನಿದರ್ಶನಗಳಿವೆ.

ಆರಂಭಗೊಳ್ಳದ ಕಾಮಗಾರಿ
ತೀರಾ ಹದಗೆಟ್ಟ ಈ ಡಾಮರು ರಸ್ತೆಯ ಮರು ನಿರ್ಮಾಣಕ್ಕೆ ಟೆಂಡರ್‌ ಆಗಿದ್ದರೂ ಕಾಮಗಾರಿ ಆರಂಭ ಗೊಳ್ಳದಿರುವುದು ನಿತ್ಯ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದೆ. ಅಗಲ ಕಿರಿದಾದ ಈ ರಸ್ತೆಯಲ್ಲಿ ಆಯತಪ್ಪಿದಲ್ಲಿ ಅಪಘಾತ ಖಂಡಿತ. ಅಷ್ಟರ ಮಟ್ಟಿಗೆ ರಸ್ತೆ ಹದಗೆಟ್ಟಿದೆ.

ಸಂಚಾರ ಕಷ್ಟ
ವಂಡ್ಸೆ- ಇಡೂರು ನಡುವಿನ ಮುಖ್ಯ ರಸ್ತೆಯಲ್ಲಿ ವಾಹನದಲ್ಲಿ ಪ್ರಯಾಣಿಸುವುದು ಕಷ್ಟಸಾಧ್ಯವಾಗಿದೆ. ಇಲಾಖೆ
ಸೂಕ್ತ ಕ್ರಮ ಕೈಗೊಳ್ಳಬೇಕು.
-ಗೋವರ್ಧನ ಜೋಗಿ,
ವಂಡ್ಸೆ, ಗ್ರಾ.ಪಂ. ಸದಸ್ಯರು

ಸದ್ಯದಲ್ಲೇ ಕಾಮಗಾರಿ
ಚಿತ್ತೂರು ಇಡೂರು ನಡುವಿನ ಹದಗಟ್ಟೆ ರಸ್ತೆಯ ಸಂಪೂರ್ಣ ಡಾಮರು ಕಾಮಗಾರಿಗೆ ಟೆಂಡರ್‌ ಕರೆಯಲಾಗಿದೆ. ಸದ್ಯದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ. ನಿರಂತರ ಮಳೆಯಿಂದಾಗಿ ಕಾಮಗಾರಿ ವಿಳಂಬವಾಗಿದೆ. ಅತೀ ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು.
-ದುರ್ಗಾದಾಸ್‌, ಸಹಾಯಕ ಕಾರ್ಯಪಾಲಕ ಅಭಿಯಂತ, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.