ಕುಂದಾಪುರ: ಕ್ರಿಸ್ಮಸ್ ಪ್ರಾರ್ಥನೆಗೆ ಶರತ್ತುಬದ್ಧ ಅನುಮತಿ
Team Udayavani, Dec 22, 2021, 11:00 PM IST
ಬೆಂಗಳೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಣಪತಿಕಟ್ಟೆ ರಸ್ತೆಯ ಎಸ್ತೆಲ ಲೂಯಿಸ್ ಅವರ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.
ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸ ಲಾಗುತ್ತಿದೆ ಎಂದು ಆಕ್ಷೇಪಿಸಿ ಕುಂದಾ ಪುರ ಗ್ರಾಮಾಂತರ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಎಸ್ತೆಲ ಲೂಯಿಸ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಈ ಆದೇಶ ನೀಡಿದೆ.
ಅರ್ಜಿದಾರರು ತಮ್ಮ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ಮಾಡಬಹುದು. ಈ ಸಂದರ್ಭ ಶಬ್ದ ಮಾಲಿನ್ಯ ಮಾಡಬಾರದು ಹಾಗೂ ಸಾರ್ವಜನಿಕರಿಗೆ ತೊಂದರೆ ಆಗಬಾರದು. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಬಾರದು ಎಂದು ಅರ್ಜಿದಾರರಿಗೆ ಷರತ್ತು ವಿಧಿಸಿದೆ. ಪ್ರಾರ್ಥನೆ ಸಂದರ್ಭ ಪೊಲೀಸರು ನಿಗಾ ವಹಿಸಬಹುದು ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ:“ಪ್ರಳಯ್’ ಪರೀಕ್ಷೆ ಯಶಸ್ವಿ : ಪಯಣದ ಮಧ್ಯೆಯೇ ಪಥ ಬದಲಿಸುವ ಹೊಸ ತಲೆಮಾರಿನ ಕ್ಷಿಪಣಿ
ಅರ್ಜಿಯನ್ನು ಆಕ್ಷೇಪಿಸಿದ ಸರಕಾರಿ ವಕೀಲ ವಿನೋದ್, ಅರ್ಜಿದಾರರು ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಅನ್ಯ ಧರ್ಮದವರನ್ನು ಕ್ರೈಸ್ತ ಮತಕ್ಕೆ ಮತಾಂತರಿಸಲು ಪ್ರಯತ್ನಿಸುತ್ತಿದ್ದಾರೆ. ಇದರಿಂದಲೇ ಪೊಲೀಸರು ನೋಟಿಸ್ ನೀಡಿದ್ದಾರೆ. ಹಾಗಾಗಿ, ಅರ್ಜಿದಾರರ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ನಡೆಸಲು ಅನು ಮತಿ ನೀಡಬಾರದು ಎಂದು ಕೋರಿದರು.
ಅರ್ಜಿದಾರ ಪರ ವಕೀಲರು, ಮತಾಂತರ ಚಟುವಟಿಕೆ ನಡೆಸುತ್ತಿಲ್ಲ. ಕೇವಲ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಮಾಡಲಾಗುತ್ತಿದೆ. ಮತಾಂತರ ಚಟುವಟಿಕೆಗೆ ಮುಂದಾಗುವುದೂ ಇಲ್ಲ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.