ಹೈಸ್ಕೂಲ್ ಹೆಮ್ಮಕ್ಕಳಿಗೂ ಸಿಗಲಿದೆ ವಿದ್ಯಾನಿಧಿ; ಶೀಘ್ರವೇ ಬರಲಿದೆ ಆದೇಶ
8, 9, 10ನೇ ತರಗತಿಗೂ ವಿಸ್ತರಣೆ
Team Udayavani, Dec 23, 2021, 6:10 AM IST
ಬೆಳಗಾವಿ: ರೈತರ ಮಕ್ಕಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜಾರಿಗೊಳಿಸಿರುವ ವಿದ್ಯಾನಿಧಿ ಯೋಜನೆಯ ವಾರ್ಷಿಕ ಶಿಷ್ಯವೇತನ ಇನ್ನು ಹೈಸ್ಕೂಲ್ ವಿದ್ಯಾರ್ಥಿನಿಯರಿಗೂ ದೊರೆಯಲಿದೆ.
ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿಯುವ ಪ್ರಮಾಣವನ್ನು ತಪ್ಪಿಸಲು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೃಷಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯುವಂತಾಗಲು “ವಿದ್ಯಾನಿಧಿ’ ಭಾಗ್ಯ 8, 9 ಮತ್ತು 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ನಿಯರಿಗೂ ಲಭಿಸಲಿದೆ.
ಏನಿದು ಯೋಜನೆ: ಯೋಜನೆಯನ್ನು 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಈಗಾಗಲೇ ಜಾರಿಗೊಳಿಸಿದ್ದು, ಈವರೆಗೆ 2,03,438 ವಿದ್ಯಾರ್ಥಿಗಳಿಗೆ 55.80 ಕೋಟಿ ರೂ.ಗಳನ್ನು ನೇರ ನಗದು ವರ್ಗಾವಣೆ ವ್ಯವಸ್ಥೆಯಡಿ ವರ್ಗಾಯಿಸಲಾಗಿದೆ.
ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2,500 ರೂ., ವಿದ್ಯಾರ್ಥಿನಿಯರಿಗೆ 3 ಸಾವಿರ ರೂ., ಬಿಎ, ಬಿಎಸ್ಸಿ, ಬಿಕಾಂ ಇತರ ಪದವಿ ಕೋರ್ಸ್‌ಗೆ 5,000 ರೂ, ವಿದ್ಯಾರ್ಥಿನಿಯರಿಗೆ 5,500 ರೂ., ಎಲ್‌ಎಲ್‌ಬಿ, ಪ್ಯಾರಾಮೆಡಿಕಲ್, ಬಿ.ಫಾರ್ಮ್, ನರ್ಸಿಂಗ್ ಇತರ ವೃತ್ತಿ ಪರ ಕೋರ್ಸ್ ವಿದ್ಯಾರ್ಥಿಗಳಿಗೆ 10 ಸಾವಿರ ರೂ., ವಿದ್ಯಾರ್ಥಿನಿಯರಿಗೆ 11,000 ರೂ. ನಿಗದಿಪಡಿಸಲಾಗಿದೆ.
ಇದನ್ನೂ ಓದಿ:“ಪ್ರಳಯ್’ ಪರೀಕ್ಷೆ ಯಶಸ್ವಿ : ಪಯಣದ ಮಧ್ಯೆಯೇ ಪಥ ಬದಲಿಸುವ ಹೊಸ ತಲೆಮಾರಿನ ಕ್ಷಿಪಣಿ
ಹೈಸ್ಕೂಲ್ ಹಂತಕ್ಕೆ ವಿಸ್ತರಿಸುವ ಪ್ರಸ್ತಾವನೆಯನ್ನು ಕೃಷಿ ಇಲಾಖೆ ಸಿದ್ಧಪಡಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆ ಮಾಡಲಾಗಿದೆ. ಒಂದೆರಡು ದಿನದಲ್ಲೇ ಈ ಕುರಿತು ಆದೇಶ ಹೊರಬೀಳಲಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿಗಳ ಸೂಚನೆ ಹಾಗೂ ಒಪ್ಪಿಗೆ ಹಿನ್ನೆಲೆಯಲ್ಲಿ ವಿದ್ಯಾನಿಧಿ ಸೌಲಭ್ಯವನ್ನು 8, 9 ಮತ್ತು 10ನೇ ತರಗತಿ ವಿದ್ಯಾರ್ಥಿನಿಯರಿಗೆ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ. ಸದ್ಯದಲ್ಲೇ ಆದೇಶ ಹೊರಬೀಳಲಿದೆ.
– ಬಿ.ಸಿ. ಪಾಟೀಲ್, ಕೃಷಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.