‘ಮಹಾ’ ಕಿರಿಕ್: ವಿಜಯಪುರ ಜಿಲ್ಲೆಯ 111 ಬಸ್ ಸಂಚಾರ ಸ್ಥಗಿತ
Team Udayavani, Dec 23, 2021, 12:29 PM IST
ವಿಜಯಪುರ: ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಕರ್ನಾಟಕದ ಆಸ್ಮಿತೆಗಳಿಗೆ ಹಾಗೂ ಕನ್ನಡಿಗರ ಮೇಲೆ ಎಂಇಎಸ್- ಶಿವಸೇನೆ ದೌರ್ಜನ್ಯದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಿಂದ 111 ಬಸ್ ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ ಕರ್ನಾಟಕ ವಾಹನಗಳಿಗೆ ಕಲ್ಲು ತೂರುವುದು, ಕಟ್ಟಿಗೆ, ಕಬ್ಬಿಣದಿಂದ ದಾಳಿ ನಡೆಸಿ ವಾಹನಗಳನ್ನು ಹಾನಿ ಮಾಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಿಂದ ಮಹಾರಾಷ್ಟ್ರ ರಾಜ್ಯದ ವಿವಿಧ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗದಿಂದ ಓಡಿಸುತ್ತಿದ್ದ 111 ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಮುಂಜಾಗೃತಾ ಕ್ರಮವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಜಿಲ್ಲೆಯ ವಿವಿಧ ನಿಲ್ದಾಣಗಳಿಂದ ಸಂಚರಿಸುತ್ತಿದ್ದ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.