ಚನ್ನಬಸವ ಪಟ್ಟದೇವರು ಕನ್ನಡಿಗರ ದೇವರು
Team Udayavani, Dec 23, 2021, 12:40 PM IST
ಕಲಬುರಗಿ: ನಿಜಾಮರ ಆಳ್ವಿಕೆಯಲ್ಲಿ ಅನೇಕ ತರಹದ ದಬ್ಟಾಳಿಕೆ-ವಿರೋಧದ ನಡುವೆಯೂ ಹೊರಗಡೆ ಉರ್ದು ನಾಮಫಲಕ ಹಾಕಿ ಒಳಗಡೆ ಕನ್ನಡ ಭಾಷೆ ಕಲಿಸುವುದರ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿ ಜೀವಂತವಾಗಿರಿಸಿ, ಹನ್ನೇರಡನೆ ಶತಮಾನದ ಬಸವಾದಿ ಶರಣರ ತತ್ವಗಳನ್ನು ಅನುಸರಿಸಿಕೊಂಡು ಬಂದಿರುವ ಲಿಂ. ಡಾ| ಚನ್ನಬಸವ ಪಟ್ಟದ್ದೇವರು ಕನ್ನಡಿಗರ ಮನೆ ದೇವರಾಗಿದ್ದಾರೆ ಎಂದು ನಾಡಿನ ಹಿರಿಯ ಸಾಹಿತಿ ಡಾ| ಮ.ಗು. ಬಿರಾದಾರ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಗರದ ಅಕ್ಕಮಹಾದೇವಿ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಲಿಂ. ಡಾ| ಚನ್ನಬಸವ ಪಟ್ಟದ್ದೇವರ ಜಯಂತಿ, ಭಾವೈಕ್ಯತೆಯ ಚಿಂತನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂದಿನ ಸಮಾಜದಲ್ಲಿ ಬೇರೂರಿದ್ದ ಜಾತೀಯತೆ, ಮೂಢನಂಬಿಕೆ, ಮೇಲು-ಕೀಳು ಎಂಬ ಬೇಧ ಭಾವ ತೊಡೆದು ಹಾಕಿ ಕಲ್ಯಾಣ ರಾಜ್ಯದ ನಿರ್ಮಾಣ ಮಾಡಲು ಹನ್ನೇರಡನೆ ಶತಮಾನದಲ್ಲಿ ಬಸವಾದಿ ಶರಣರು ಶ್ರಮಿಸಿದ ಹಾಗೆಯೇ. 20ನೇ ಶತಮಾನದಲ್ಲಿ ಭಾಲ್ಕಿಯ ಚನ್ನಬಸವ ಪಟ್ಟದ್ದೇವರು ಅವಿರತವಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮುಂದಿನ ದಿನಗಳಲ್ಲಿ ಈ ಭಾಗದ ವಿದ್ಯಾರ್ಥಿಗಳು, ಯುವ ಜನತೆಗಾಗಿ ಕಾವ್ಯ ಕಮ್ಮಟ, ವಿವಿಧ ಸ್ಪರ್ಧೆಗಳು, ಚಿಗುರು ಕವಿಗೋಷ್ಠಿ, ಮಕ್ಕಳ ಕಾವ್ಯ ಸೌರಭ ಸೇರಿದಂತೆ ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾಹಿತ್ಯ ಸೌಗಂಧ ಪಸರಿಸಲಾಗುವುದು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ| ಅಂಬಾರಾಯ ಹಾಗರಗಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಗೌರವ ಕೋಶಾಧ್ಯಕ್ಷ ಡಾ| ಶರಣರಾಜ ಛಪ್ಪರಬಂದಿ ಮಾತನಾಡಿದರು.
ಪ್ರಮುಖರಾದ ಜಗದೀಶ ಮರಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ, ಬಿ.ಎಂ.ಪಾಟೀಲ ಕಲ್ಲೂರ, ವಿಶ್ವನಾಥ ತೊಟ್ನಳ್ಳಿ, ಶ್ರೀಕಾಂತ ಪಾಟೀಲ ತಿಳಗೂಳ, ಪ್ರಬುಲಿಂಗ ಮೂಲಗೆ, ವಿದ್ಯಾಸಾಗರ ದೇಶಮುಖ, ಶರಣಪ್ಪ ದೇಸಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.