ಲೂಧಿಯಾನ ಕೋರ್ಟ್ ಆವರಣದಲ್ಲಿ ಸ್ಫೋಟ: ಕನಿಷ್ಠ ಇಬ್ಬರು ಸಾವು
Team Udayavani, Dec 23, 2021, 2:19 PM IST
Image ANI
ಲೂಧಿಯಾನ: ಪಂಜಾಬ್‌ನ ಲೂಧಿಯಾನ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸಂಭವಿಸಿದ ಶಂಕಿತ ಐಇಡಿ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.
ಜಿಲ್ಲಾ ನ್ಯಾಯಾಲಯದ ಶೌಚಾಲಯದಲ್ಲಿ ಸ್ಫೋಟ ಸಂಭವಿಸಿದ್ದು,ಕೋರ್ಟ್ ಸಂಕೀರ್ಣದ ಎರಡನೇ ಮಹಡಿಯಲ್ಲಿರುವ ರೆಕಾರ್ಡ್ ರೂಮ್ ಬಳಿ ಸ್ಫೋಟದ ಸದ್ದು ಕೇಳಿಬಂದಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ವಿಧಿವಿಜ್ಞಾನ ತಂಡವನ್ನು ಚಂಡೀಗಢದಿಂದ ಕರೆಸಲಾಗಿದೆ.
ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ನಾನು ಲೂಧಿಯಾನಕ್ಕೆ ಹೋಗುತ್ತಿದ್ದೇನೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೆಲವು ದೇಶವಿರೋಧಿಗಳು ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸರ್ಕಾರ ಅಲರ್ಟ್ ಆಗಿದೆ. ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದಿದ್ದಾರೆ.
ಸದ್ಯ ಪೊಲೀಸರು ಸ್ಥಳವನ್ನು ಸುತ್ತುವರಿದಿದ್ದು, ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.