ಪಾಲಿಕೆ ಆಯುಕ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Team Udayavani, Dec 23, 2021, 5:52 PM IST

31protest

ವಿಜಯಪುರ: ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮೇಲಿನ ಹಲ್ಲೆ ಖಂಡಿಸಿ ನಗರದಲ್ಲಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ಕನಕದಾಸ ವೃತ್ತದಿಂದ ಪ್ರತಿಭಟನಾ ರ್ಯಾಲಿ ನಡೆಸಿ ಗಾಂಧೀಜಿ ವೃತ್ತದಲ್ಲಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆ ಆಯುಕ್ತರ ಮೇಲೆ ವಿನಾಕಾರಣ ಮೇಲೆ ಹಲ್ಲೆ ಮಾಡಿ, ರಕ್ಷಣೆಗೆ ಬಂದ ಪೊಲೀಸರು, ನ್ಯಾಯವಾದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಸರಕಾರಿ ನೌಕರರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಖಂಡನೀಯ ಎಂದು ಹರಿಹಾಯ್ದರು.

ಕರ್ತವ್ಯ ನಿರತ ಅಧಿಕಾರಿಗಳ ಮೇಲಿನ ಇಂಥ ಹಲ್ಲೆ ಘಟನೆ ಇಡಿ ಸಮಾಜಕ್ಕೆ ಕಪ್ಪು ಚುಕ್ಕೆಯಾಗಿದೆ. ಸರ್ಕಾರಿ ಅಧಿಕಾರಿಗಳ ಮೇಲೆಯೆ ಹಲ್ಲೆಗಳು ನಡೆದರೆ ಸಾರ್ವಜನಿಕರ ಪಾಡೇನು ಎಂಬುದು ಪ್ರಶ್ನೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸದರಿ ಪ್ರಕರಣದಲ್ಲಿ ಎಲ್ಲ ಹಲ್ಲೆಕೋರರನ್ನು ಗಡಿಪಾರು ಮಾಡಬೇಕು. ಎಲ್ಲರನ್ನೂ ಬಂಧಿಸಿ 20 ವರ್ಷ ಕಠಿಣ ಶಿಕ್ಷೆ ವಿಧಿಸಬೇಕು. ಸದರಿ ಪ್ರಕರಣದ ಹಿಂದಿರುವ ಪ್ರಭಾವಿಗಳನ್ನೂ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತದ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕಾಮನಕೇರಿ ಪರಮಾನಂದ ಮಹಾರಾಜರು, ಮಖಣಾ ಪುರದ ಸೋಮೇಶ್ವರ ಶ್ರೀಗಳು, ಹುಲಜಂತಿ ಮಾಳಿಂಗರಾಯ ಪೂಜಾರಿಗಳು, ಸರೂರುಪೀಠದ ಶರಣಬಸಯ್ಯ ಶ್ರೀಗಳು, ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಕುರುಬ ಸಮಾಜದ ಜಿಲ್ಲಾಧ್ಯಕ್ಷ ರಾಜು ಕಂಬಾಗಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರವಿ ಕಿತ್ತೂರ, ಮೋಹನ ಮೇಟಿ, ಸದಾಶಿವ ಪೂಜಾರಿ, ಅಡಿವೆಪ್ಪ ಸಾಲಗಲ್‌, ಉಮೇಶ ವಂದಾಲ, ಎಂ.ಸಿ. ಮುಲ್ಲಾ, ಫಯಾಜ್‌ ಕಲಾದಗಿ, ದುಂಡಪ್ಪ ಕುಮಟಗಿ, ಸಂಗಮ್ಮ ದೇವರಳ್ಳಿ, ಜಗದೇವಿ ಗುಂಡಳ್ಳಿ, ಶಕುಂತಲಾ ಕಿರಸೂರ, ಶಾರದಾ ವಾಲೀಕಾರ, ಲಕ್ಷ್ಮೀ ಅಗಸಬಾಳ, ಪ್ರಭಾವತಿ ನಾಟೀಕಾರ, ಕಾಡಸಿದ್ದ ವಕೀಲರು, ಮಲ್ಲಣ್ಣ ಕಾಮನಕೇರಿ, ಸಿದ್ದು ಬಾವಿಕಟ್ಟಿ, ಮಲ್ಲು ಪರಸಣ್ಣವರ, ಪರಮೇಶ್ವರ ಭೋಸಗಿ, ರಾಜು ಸಗಾಯಿ, ಸಿದ್ದು ಭಾವಿಕಟ್ಟಿ, ಬಸವರಾಜ ಕಾತ್ನಾಳ, ಕಾಂತು ಇಂಚಗೇರಿ ಇತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.