ಎರಡು ಬೈಕ್ ಗಳ ನಡುವೆ ಢಿಕ್ಕಿ: ಸ್ಥಳದಲ್ಲೇ ಮೂವರು ಸಾವು!
Team Udayavani, Dec 24, 2021, 11:00 AM IST
ದಾವಣಗೆರೆ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಬಸವಾಪಟ್ಟಣದ ಕೋಟೆಹಾಳ್ ಗ್ರಾಮದ ತಂದೆ ಮಹೇಶಪ್ಪ ಹಾಗೂ ಸಂಜು ಹಾಗೂ ಮತ್ತೊಂದು ಬೈಕ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಸವಾರ ದಿಡಗೂರಿನ ಪ್ರಶಾಂತ್ ಮೃತಪಟ್ಟ ದುರ್ದೈವಿಗಳು. ಆನಂದ್ ಎಂಬಾತನಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 6,650 ಕೋವಿಡ್ ಪ್ರಕರಣ ಪತ್ತೆ, 374 ಮಂದಿ ಸಾವು
ದೇವರಹೊನ್ನಾಳಿ-ತಕ್ಕನಹಳ್ಳಿ ಗ್ರಾಮಗಳ ನಡುವಿನ ಸವಳಂಗ-ಬಸವಾಪಟ್ಟಣ ಮುಖ್ಯರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಹೊನ್ನಾಳಿ ತಾಲೂಕಿನ ದಿಡಗೂರು ಹಾಗೂ ಹರಳಹಳ್ಳಿ ಅವರಾದ ಪ್ರಶಾಂತ್, ಆನಂದ್ ತಮ್ಮೂರಿನತ್ತ ಹೊರಟಿದ್ದರು. ನ್ಯಾಮತಿ ತಾಲೂಕಿನ ಕೋಟೆಹಾಳ್-ಮರಿಗೊಂಡನಹಳ್ಳಿ ಗ್ರಾಮದವರಾದ ಮಹೇಶಪ್ಪ ಮತ್ತು ಸಂಜು ಸಹ ಬೈಕ್ ನಲ್ಲಿ ಬರುತ್ತಿದ್ದರು. ಈ ವೇಳೆ ಎರಡು ಬೈಕ್ ಗಳ ನಡುವೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲಿ ಅಸುನೀಗಿದ್ದಾರೆ.
ಅಪಘಾತದ ಸುದ್ದಿ ತಿಳಿದ ಕೂಡಲೇ ಸಬ್ ಇನ್ ಸ್ಪೆಕ್ಟರ್ ಬಸನಗೌಡ ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.