ಆಳುವ ಸರ್ಕಾರಗಳಿಂದ ಉದ್ದಿಮೆಗಳಿಗೆ ಆದ್ಯತೆ
Team Udayavani, Dec 24, 2021, 4:17 PM IST
ಯಾದಗಿರಿ: ಭಾರತದ ಪ್ರಕೃತಿ ಕೃಷಿಗೆ ಪೂರಕವಾಗಿದ್ದು, ಅದರಂತೆ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆದರೆ ಸರಕಾರಗಳು ಉದ್ದಿಮೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದು ಖ್ಯಾತ ಚಿಂತಕ ಹಾಗೂ ಭಾರತ ವಿಕಾಸ ಸಂಗಮದ ಸಂಸ್ಥಾಪಕ ಕೆ.ಎನ್. ಗೋವಿಂದಾಚಾರ್ಯ ಹೇಳಿದರು.
ಇಲ್ಲಿನ ಲಕ್ಷ್ಮೀ ನಗರದ ಲಕ್ಷ್ಮೀ ಮಾರುತಿ ದೇವಸ್ಥಾನದಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ವಿಕಾಸ ಅಕಾಡೆಮಿ ವತಿಯಿಂದ ಹಮ್ಮಿಕೊಂಡ ಪ್ರಕೃತಿ ಕೇಂದ್ರಿತ ವಿಕಾಸ ಚಿಂತನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಭಾರತ ಸಂಪನ್ಮೂಲ ಭರಿತ ದೇಶವಾಗಿದ್ದು, ಅದನ್ನು ಸದ್ಬಳಕೆ ಮಾಡಬೇಕಾಗಿದೆ ಎಂದರು.
ಬ್ರಿಟಿಷರು ಹಾಕಿಕೊಟ್ಟ ದಾರಿಯಲ್ಲಿ ಕಳೆದ 60 ವರ್ಷದಿಂದ ಸರಕಾರಗಳು ಆಡಳಿತ ನಡೆಸುತ್ತಿವೆ. ಇದರಿಂದ ದೇಶದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಭಾರತದ ಸಂಪನ್ಮೂಲ ಭರಿತ ದೇಶವಾಗಿದೆ ಎಂದರು.
ಚಿಂತನಾ ಕಾರ್ಯಕ್ರಮವನ್ನು ಗುರುಮಠಕಲ್ ಖಾಸಾ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು. ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಎಂಎಲ್ಸಿ ಚನ್ನಾರೆಡ್ಡಿ ಪಾಟೀಲ ತುನ್ನೂರ, ಹಿರಿಯ ನ್ಯಾಯವಾದಿ ಎಸ್.ಬಿ. ಪಾಟೀಲ್, ಅಖೀಲ ಭಾರತೀಯ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್. ಎನ್ ಮಣ್ಣೂರ, ನಗರಸಭೆ ಮಾಜಿ ಅಧ್ಯಕ್ಷೆ ಲಲಿತಾ ಅನಪೂರ ಇದ್ದರು. ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ನೀಲಕಂಠರಾಯ ಯಲ್ಕೇರಿ ನಿರೂಪಿಸಿ, ವಂದಿಸಿದರು. ಪುಟ್ಟರಾಜ ಸಂಗೀತ ಶಾಲೆಯ ಮಕ್ಕಳು ಪ್ರಾರ್ಥಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.