ಎಂಇಎಸ್-ಶಿವಸೇನೆ ನಿಷೇಧಿಸಲು ಆಗ್ರಹ
ಎಂಇಎಸ್ ಹಾಗೂ ಮಹಾರಾಷ್ಟ್ರ ಸರಕಾರ ವಿರುದ್ಧ ಧಿಕ್ಕಾರ ಕೂಗಿದರು.
Team Udayavani, Dec 24, 2021, 6:21 PM IST
ತೇರದಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ವಿಶ್ವಗುರು ಬಸವೇಶ್ವರ ಮೂರ್ತಿಗಳಿಗೆ ಅವಮಾನ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಎಂಇಎಸ್ ಹಾಗೂ ಶಿವಸೇನೆಗಳನ್ನು ಸರಕಾರ ನಿಷೇಧಗೊಳಿಸಿ, ತಕ್ಕ ಪಾಠ ಕಲಿಸಬೇಕೆಂದು ಪಟ್ಟಣದ ಕನ್ನಡ ಪರ ಸಂಘಟನೆಗಳು, ರಾಜಕೀಯ ಮುಖಂಡರು ಆಗ್ರಹಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳು, ಪಕ್ಷಾತೀತವಾಗಿ ರಾಜಕೀಯ ಪಕ್ಷಗಳು ಹಾಗೂ ಇನ್ನಿತರ ಸಂಘಟನೆಗಳು ಬಸ್ ನಿಲ್ದಾಣ ಬಳಿ ಜಮಖಂಡಿ-ಕಾಗವಾಡ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುವುದರ ಜತೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಪ್ರತಿಕೃತಿ ದಹನಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಾನವ ಸರಪಳಿ ನಿರ್ಮಿಸಿ ಅರ್ಧ ಗಂಟೆಗೂ ಅಧಿಕ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಎಂಇಎಸ್ ಹಾಗೂ ಮಹಾರಾಷ್ಟ್ರ ಸರಕಾರ ವಿರುದ್ಧ ಧಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ರಾದ ಪ್ರವೀಣ ನಾಡಗೌಡ, ಮಂಜುನಾಥ ಜಮಖಂಡಿ ಹಿರೇಮಠ, ರಾಮಣ್ಣ ಹಿಡಕಲ್, ರವಿ ಸಲಬನ್ನವರ, ಕನ್ನಡಿಗರ ಮೇಲೆ ಹಾಗೂ ಕನ್ನಡ ನೆಲದ ಬಗ್ಗೆ ಪದೇ ಪದೇ ಕಿರಿಕಿರಿ ಮಾಡುತ್ತಿರುವ ಎಂಇಎಸ್ ಸಂಘಟನೆ ಹಾಗೂ ಮಹಾರಾಷ್ಟ್ರ ಕನ್ನಡಿಗರ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿವೆ.
ಧ್ವಜ ಸುಡುವುದು, ಮೂರ್ತಿಗಳನ್ನು ಭಗ್ನಗೊಳಿಸಿ ಹೇಡಿತನ ಮಾಡುವುದನ್ನು ಬಿಟ್ಟು ನೇರವಾಗಿ ಬನ್ನಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರಕಾರ ಕೂಡಲೇ ಎಂಇಎಸ್ ನಿಷೇಧಗೊಳಿಸಬೇಕು. ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಬಳಿಕ ಉಪತಹಶೀಲ್ದಾರ್ ಶ್ರೀಕಾಂತ ಮಾಯನ್ನವರ ಅವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.