ಉಡುಪಿ: ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ
Team Udayavani, Dec 25, 2021, 5:30 AM IST
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ ಗಾಯನ ಕಾರ್ಯಕ್ರಮಗಳು ಜರಗಿದವು.
ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಅಧಿಕೃತ ಚರ್ಚ್ ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಬಲಿಪೂಜೆ ಅರ್ಪಿಸಿ ಹಬ್ಬದ ಸಂದೇಶ ನೀಡಿದರು. ಈ ವೇಳೆ ಚರ್ಚಿನ ವಂ| ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ| ಜೋಯ್ ಅಂದ್ರಾದೆ ಉಪಸ್ಥಿತರಿದ್ದರು.
ಕೊರೊನಾ ಸೋಂಕಿನಿಂದ ಬಸವಳಿದ ಈ ಲೋಕಕ್ಕೆ ಹೊಸ ಜೀವವನ್ನು ನೀಡುವ ಅಗತ್ಯವಿದೆ. ಕ್ರಿಸ್ಮಸ್ ಹಬ್ಬದ ಆಚರಣೆಯು ನಮ್ಮಲ್ಲಿ ಮಾನವೀಯತೆಯನ್ನು ಜೀವಂತಗೊಳಿಸಿ, ಮನುಷ್ಯನಿಗೆ ಮಾನವೀಯತೆ ಮರೀಚಿಕೆ ಯಾಗದೆ ಸ್ವಾತಂತ್ರ್ಯ, ಶಾಂತಿ, ಭಾವೈಕ್ಯತೆ, ಕ್ಷಮೆ, ಪ್ರೀತಿ, ಸಹನೆ, ಸಂಯಮ ಮತ್ತು ನೈತಿಕತೆಯನ್ನು ತನ್ನ ಉಸಿರಾಗಿಸಲಿ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದರು.
ಬಲಿಪೂಜೆಯ ಮುನ್ನ ಯೇಸುವಿನ ಜನನ ವೃತ್ತಾಂತವನ್ನು ನಟನೆಯ ಮೂಲಕ ಚರ್ಚಿನ ಕಲಾವಿದರು ಪ್ರಸ್ತುತ ಪಡಿಸಿದರು.
ಹಬ್ಬದ ಪ್ರಯುಕ್ತ ಜಿಲ್ಲೆ ಯ ಚರ್ಚ್‌ಗಳು ವರ್ಣಮಯ ವಿದ್ಯುತ್ ದೀಪಾಲಂಕಾರ ಹಾಗೂ ಬಗೆ ಬಗೆಯ ಚಿತ್ತಾಕರ್ಷಕ ನಕ್ಷತ್ರಗಳಿಂದ ಕಂಗೊಳಿಸುತ್ತಿದ್ದವು.
ಶುಕ್ರವಾರ ರಾತ್ರಿ ಪೂಜೆಯ ವೇಳೆ ಸಿಂಗರಿಸಿಟ್ಟ ಗೋದಲಿಯಲ್ಲಿ ಬಾಲಯೇಸು ಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗುಳದ ಮೂಲಕ ಭಕ್ತರು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು, ಸುಗಂಧಗಳನ್ನು ಅರ್ಪಿಸುವುದರ ಮೂಲಕ ಯೇಸು ಸ್ವಾಮಿಯ ಜನನವನ್ನು ಸ್ವಾಗತಿಸಲಾಯಿತು.
ಜಿÇÉೆಯ ಪ್ರಮುಖ ಚರ್ಚ್‌ಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ಧರ್ಮಗುರು ರೆ| ಡೆನಿಸ್ ಡೇಸಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ರೆ| ಚಾಲ್ಸ್ ಮಿನೇಜಸ್, ಕುಂದಾಪುರ ಹೊಲಿ ರೋಸರಿ ಚರ್ಚ್‌ನಲ್ಲಿ ರೆ| ಸ್ಟ್ಯಾನಿ ತಾವ್ರೋ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ರೆ| ಆಲ್ಬನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆಯ ಬಲಿಪೂಜೆ ನೆರವೇರಿಸಲಾಯಿತು.
ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆ ಯ ಎಲ್ಲ ಚರ್ಚ್‌ಗಳಲ್ಲಿ ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸರಕಾರ ಅವಕಾಶ ನೀಡಿರುವುದರಿಂದ ಧರ್ಮಪ್ರಾಂತದ ಚರ್ಚುಗಳಲ್ಲಿ ಬಲಿಪೂಜೆಯ ಬಳಿಕ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು. ಪೂಜೆಯ ಸಂದರ್ಭ ಎಲ್ಲ ಚರ್ಚ್‌ಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಲಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.