ಅನಧಿಕೃತ ನೀರಿನ ಘಟಕದ ವಿರುದ್ಧ ಧರಣಿ
Team Udayavani, Dec 25, 2021, 5:42 PM IST
ಶಹಾಬಾದ: ಅನಧಿಕೃತ ನೀರಿನ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಜೆಸ್ಕಾಂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಅಫರೋಜ ನೀರು ಶುದ್ಧಿಕರಣ ಘಟಕದ ವತಿಯಿಂದ ಜೆಸ್ಕಾಂ ಕಚೇರಿ ಎದುರು ಧರಣಿ ನಡೆಸಲಾಯಿತು.
ಅಫರೋಜ ಶುದ್ಧಿಕರಣ ಘಟಕದ ಮಾಲೀಕ ಶೇಖ ಬಾಬು ಉಸ್ಮಾನ್ (ಗೋವಾ ಬಾಬು) ಮಾತನಾಡಿ, ನಗರದಲ್ಲಿ ಅನಧಿಕೃತ ನೀರಿನ ಘಟಕಗಳು ತಲೆ ಎತ್ತಿವೆ. ಅಲ್ಲದೇ ಸರ್ಕಾರದಿಂದ ಮಾನ್ಯತೆಯಿಲ್ಲದೇ ಕಾರ್ಯ ನಿರ್ವಹಿಸುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮೌನವಹಿಸಿದ್ದಾರೆ. ಅನೇಕ ಬಾರಿ ದೂರು ಸಲ್ಲಿಸಿದರೂ ನಗರಸಭೆ ಹಾಗೂ ಜೆಸ್ಕಾಂ ಅಧಿಕಾರಿಗಳು ಒಬ್ಬರ ಮೇಲೆ ಇನ್ನೊಬ್ಬರು ಹಾಕಿ ಕೈತೊಳೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.
ಐಎಸ್‌ಐ ಮಾನ್ಯತೆ ಪಡೆದುಕೊಳ್ಳಲು ನಾವು ಸಾಕಷ್ಟು ಹಣ ವ್ಯಯಿಸಿದ್ದೇವೆ. ತಿಂಗಳಾದರೆ ತೆರಿಗೆ ಕಟ್ಟಬೇಕು. ಆದರೆ ಯಾವುದೇ ಮಾನ್ಯತೆ ಪಡೆಯದೇ, ತೆರಿಗೆ ನೀಡದೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಅನ ಧಿಕೃತ ಘಟಕಗಳು ಕಾರ್ಯನಿರ್ವಹಿಸುತ್ತಿದ್ದರೂ ಅಧಿಕಾರಿಗಳು ಯಾಕೆ ಮೌನವಹಿಸಿದ್ದಾರೆ ತಿಳಿಯುತ್ತಿಲ್ಲ. ಇದು ಹೀಗೆ ಮುಂದುವರಿದರೆ ಉಗ್ರ ಹೋರಾಟ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
ನಂತರ ತಹಶೀಲ್ದಾರ್ ಸುರೇಶ ವರ್ಮಾ ಹಾಗೂ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಶಿವಶಾಲ ಪಟ್ಟಣಕರ,ಆಂಜನೆಯ ಕುಸಾಳೆ,ಪುನೀತ ಹಳ್ಳಿ,ಕಿರಣ ಜಿಡಗಿಕರ, ಮರಲಿಂಗ ಗಡೆಸೂಗೂರ, ಶಿವನಾಗ, ಶರಣು ತಲವಾರ, ಶೆಕ ಸುಫಿ ಯಾನ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.