ಜನವರಿಯಿಂದಲೇ ಹೆಲ್ಮೆಟ್ ಕಡ್ಡಾಯ
Team Udayavani, Dec 25, 2021, 6:03 PM IST
ಸಿಂಧನೂರು: ಪ್ರತಿಯೊಬ್ಬರೂ ಕಾನೂನು ಗೌರವಿಸಬೇಕು. ಅಪಘಾತ ತಡೆಗೆ ಮುಂಜಾಗ್ರತೆ ಅಗತ್ಯ. ಜನವರಿಯಿಂದಲೇ ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖೀಲ್ ಹೇಳಿದರು.
ನಗರದ ಸುಕಾಲಪೇಟೆ ರಸ್ತೆಯಲ್ಲಿರುವ ಡಿವೈಎಸ್ಪಿ ಕಚೇರಿಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಮಕ್ಕಳ ಓದಿಗಾಗಿ ಹೊಸ ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು.
ಸಿಂಧನೂರಿನಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ಆರಂಭಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ತಾಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಜನರಲ್ಲಿ ಜಾಗೃತಿ ಅಗತ್ಯವಿದೆ ಎಂದರು.
ಮರಳು ಅಕ್ರಮಕ್ಕೆ ತಡೆ
ಅಕ್ರಮ ಮರಳು ಸಾಗಾಣಿಕೆ ಕಡಿವಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ದೇವದುರ್ಗದಲ್ಲಿ ಸಭೆ ನಡೆದಿದೆ. ಇನ್ನು ಮುಂದೆ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಬೀಳಲಿದೆ. ಗಣಿ ಮತ್ತು ಭೂ ವಿಧಿ ವಿಜ್ಞಾನ ಇಲಾಖೆಗೆ 25 ಹೋಂ ಗಾರ್ಡ್ ಒದಗಿಸಲಾಗಿದೆ. ಮರಳು ತಡೆ ಸಮಿತಿಯಲ್ಲಿ ಇರುವ ಇತರೆ ಇಲಾಖೆಗಳು ಸಹ ಸಹಕರಿಸಬೇಕು ಎಂದರು.
ಡಿವೈಎಸ್ಪಿ ವೆಂಕಟಪ್ಪ ನಾಯಕ್ ಮಾತನಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಹಕಾರದೊಂದಿಗೆ ನಮ್ಮ ಪೊಲೀಸ್ ಸಿಬ್ಬಂದಿಗಾಗಿ ಗ್ರಂಥಾಲಯ ಆರಂಭಿಸಿದ್ದೇವೆ. ನಾನು ಸೇರಿದಂತೆ ನಮ್ಮ ಅಧಿಕಾರಿಗಳೂ ಕೈಜೋಡಿಸಿದ್ದಾರೆ. 100ಕ್ಕೂ ಅಧಿಕ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳು ಇಲ್ಲಿವೆ ಎಂದರು.
ಈ ವೇಳೆ ಪ್ರೊಬೆಷನರಿ ಡಿವೈಎಸ್ಪಿ ಲಕ್ಷ್ಮೀಕಾಂತ, ಸಿಪಿಐಗಳಾದ ಉಮೇಶ ಕಾಂಬಳೆ, ಗುರುರಾಜ, ಪಿಎಸ್‌ಐಗಳಾದ ಎರಿಯಪ್ಪ, ಸೌಮ್ಯ ಹಿರೇಮಠ, ಚಂದ್ರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.