ಯಾಕೆ ನನ್ನ ಖಾತೆ ಮೇಲೆ ಕಣ್ಣಿಟ್ಟಿದ್ದೀರಿ : ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನೆ
Team Udayavani, Dec 25, 2021, 8:24 PM IST
ಮೈಸೂರು: ಸಚಿವ ಸಂಪುಟ ವಿಸ್ತರಣೆ ಅಥವಾ ಖಾತೆ ಬದಲಾವಣೆಯೂ ಇಲ್ಲ, ಒಂದು ವೇಳೆ ಖಾತೆ ಬದಲಾವಣೆ ಮಾಡಬೇಕು ಅನ್ನುವುದಿದ್ದರೆ ಅದು ಸಿಎಂ ಅವರ ಪರಮಾಧಿಕಾರವಾಗಿದೆ. ಯಾಕೆ ನನ್ನ ಖಾತೆ ಮೇಲೆ ಕಣ್ಣಿಟ್ಟಿದ್ದೀರಿ ಎಂದು ಸಚಿವ ಎಸ್.ಟಿ. ಸೋಮಶೇಖರ್ ಶನಿವಾರ ಪತ್ರಕರ್ತರ ಕಾಲೆಳೆಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಬೊಮ್ಮಾಯಿ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕೇಂದ್ರ ಗೃಹ ಸಚಿವ ಅಮಿಶ್ ಶಾ ಅವರೇ ಮುಂದಿನ ಚುನಾವಣೆ ಅನ್ನು ಬೊಮ್ಮಾಯಿ ಅವರ ನೇತೃತ್ವದಲ್ಲಿ ಎದುರಿದುವ ಕುರಿತು ಹೇಳಿದ್ದಾರೆ. ಇದೇ ಮಾತನ್ನು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈಗಾಗಿ ಸಿಎಂ ಬದಲಾವಣೆ ಮಾತು ಊಹಾಪೋಹ. ಸಿಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಮುಂದಿನ 2023 ರ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂದರು.
ಗಿಮಿಕ್ ರಾಜಕಾರಣ
ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಗಿಮಿಕ್ ರಾಜಕಾರಣ ಮಾಡುತ್ತಿದೆ. ಬುಎಸ್ ವೈ ಸಿಎಂ ಆಗಿದ್ದಾಗ ಹಾಗೂ ಈಗಿನ ಸಿಎಂ ಬೊಮ್ಮಾಯಿ ಅವರು ಕೇಂದ್ರ ಜಲಸಂಪನ್ಮೂಲ ಸಚಿವರ ಜತೆ ಮಾತುಕತೆ ನಡೆಸಿ ಎಲ್ಲಾ ಹಂತದ ಪ್ರಕ್ರಿಯೆ ಮುಗಿಸಿದ್ದಾರೆ. ಶೀಘ್ರದಲ್ಲಿಯೇ ಯೋಜನೆಗೆ ಒಪ್ಪಿಗೆ ಸಿಗುವ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗಿಮಿಕ್ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.
ಮುಖ್ಯಮಂತ್ರಿ ಆಗುವ ಕನಸು ಕಾಣುವುದನ್ನು ಬಿಡಬೇಕು. ಶಾಶ್ವತ ಮುಖ್ಯಮಂತ್ರಿ ಚಂದ್ರು ರೀತಿ ಅವರು ಕನಸು ಕಾಣಬೇಕು ಎಂದು ವ್ಯಂಗ್ಯವಾಡಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಉಂಟಾಗಿರುವ ಸೋಲನ್ನು ಒಪ್ಪಿಕೊಂಡಿದ್ದೇವೆ. ಬಿಜೆಪಿ ಅಭ್ಯರ್ಥಿ ಆರ್. ರಘು ಗೆಲ್ಲುವ ವಿಶ್ವಾಸ ಇತ್ತು. ಆದರೆ ಕೂದಲು, ಉಪ್ಪು ಇಟ್ಟು ಗ್ರಾಪಂ ಸದಸ್ಯರಿಂದ ಆಣೆ ಪ್ರಮಾಣ ಮಾಡಿಸಿಕೊಳ್ಳುವ ಪ್ರಯತ್ನವನ್ನು ಬಿಜೆಪಿ ಮಾಡಲಿಲ್ಲ. ಮಾಟ ಮಂತ್ರ ಕೆಲಸಕ್ಕೆ ಬಿಜೆಪಿ ಎಂದಿಗೂ ಹೋಗಲ್ಲ ಎಂದರು.
ಬಿಜೆಪಿ ಅಭ್ಯರ್ಥಿ ಸೋಲಿಗೆ ಯಾವುದೇ ಒಳ ಏಟಿಲ್ಲ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಮುಖಂಡರು ಕೆಲಸ ಮಾಡಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಬಂದ್ ಕೈಬಿಡಲು ಮನವಿ
ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕೈಬಿಡುವಂತೆ ಸಚಿವರು ಮನವಿ ಮಾಡಿದರು.
ಬೆಳಗಾವಿ ಅಧಿವೇಶನದಲ್ಲಿ ಎಂಇಎಸ್ ಪುಂಡಾಟಿಕೆ ವಿರುದ್ಧ ಪಕ್ಷಾತೀತವಾಗಿ ಖಂಡಿಸಲಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಣಯ ಮಾಡಿರುವುದರಿಂದ ಬಂದ್ ಆಚರಿಸುವುದು ಅಗತ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.