ಚಿಂದಿ ಮಾಡ್ತೇನೆ ಅಂದರೆ ಆಗುವುದಿಲ್ಲ, ಕೇಂದ್ರಕ್ಕೆ ನಿಯೋಗ ಹೋಗಲಿ: ಸಿದ್ದರಾಮಯ್ಯ ಕಿಡಿ
Team Udayavani, Dec 26, 2021, 3:24 PM IST
ಬೆಂಗಳೂರು :ಬೆಳಗಾವಿ ವಿಚಾರದಲ್ಲಿ ತಿಳಿಗೇಡಿಗಳ ಪುಂಡಾಟಿಕೆ ಕುರಿತು ಸರಕಾರ ಮಾತಾಡುತ್ತೇವೆ ಅಂದರೆ ಸಾಕಾಗುವುದಿಲ್ಲ ಕೇಂದ್ರ ಸರಕಾರದ ಬಳಿ ನಿಯೋಗ ಕರೆದು ಕೊಂಡು ಹೋಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ಕೊಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇರುವವರು. ಯಾರೋ ತಿಳಿಗೇಡಿಗಳು ಪುಂಡಾಟಿಕೆ ಮಾಡಿದ್ದು, ಕಠಿಣ ಶಿಕ್ಷೆ ಕೊಡಬೇಕು. ನಮ್ಮ ರಾಜ್ಯದಲ್ಲಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆದರೆ ಮಹಾರಾಷ್ಟ್ರಕ್ಕೆ ಎಚ್ಚರಿಕೆ ಕೊಡಿಸಿ, ಅಲ್ಲಿ ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಬೇಕು ಎಂದರು.
ಮಹಾರಾಷ್ಟ್ರದಲ್ಲಿ ನಮ್ಮ ಧ್ವಜ ಸುಟ್ಟಿದ್ದಾರೆ. ಚಿಂದಿ ಮಾಡ್ತೇನೆ ಅಂದರೆ ಆಗುವುದಿಲ್ಲ.ವಿಧಾನ ಸಭೆಯಲ್ಲಿ ಖಂಡನಾ ನಿರ್ಣಯ ಮಾಡಿದ್ದು, ಮುಖ್ಯಮಂತ್ರಿಗಳು ಕೇಂದ್ರ ಸರಕಾರದ ಬಳಿ ನಿಯೋಗ ಕರೆದುಕೊಂಡು ಹೋಗಿ, ಪ್ರಧಾನಿಗಳ ಜೊತೆ ಕುಳಿತು ಮಾತನಾಡಬೇಕು. ಮಹಾರಾಷ್ಟ್ರ ಮುಖ್ಯಮಂತ್ರಿ ಬಳಿ ಮಾತನಾಡಬೇಕು, ಅಲ್ಲಿಯ ಪುಂಡರಿಗೆ ಎಚ್ಚರಿಕೆ ಕೊಡಿಸಬೇಕು. ಸಂವಿಧಾನದ ಪ್ರಕಾರ ಕೆಲಸ ಮಾಡಬೇಕು ಎಂದರು.
ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್ ಗೆ ನನ್ನ ನೈತಿಕ ಬೆಂಬಲವಿದೆ ಎಂದರು.
ಸರಕಾರ ಹೇರಿದ ನೈಟ್ ಕರ್ಫ್ಯೂ ಬಗ್ಗೆ ಪ್ರತಿಕ್ರಿಯಿಸಿ,ಒಮಿ ಕ್ರಾನ್ ಆತಂಕ ಇದೆ. ಕಾನೂನು ಸುವ್ಯವಸ್ಥೆಗೆ ಯಾವ ಕ್ರಮ ಕೈಗೊಳ್ಳಬೇಕು ಅದನ್ನು ಸರಕಾರ ಕೈಗೊಂಡಿದೆ, ಅದಕ್ಕೆ ನಮ್ಮ ಬೆಂಬಲವಿದೆ ಎಂದರು.
ಕಾಂಗ್ರೆಸ್ ನಲ್ಲಿ ಸಾಮೂಹಿಕ ನಾಯಕತ್ವ
‘ನನ್ನ ನೇತೃತ್ವದಲ್ಲಿ ಚುನಾವಣೆ’ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತಾಗಿನ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ, ನಾನು ವಿಪಕ್ಷ ನಾಯಕ ನಿದ್ದೇನೆ, ಇನ್ನೂ ಹಿರಿಯ ನಾಯಕರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.