ಕಳಪೆ ಟಾರ್ಪಲಿನ್ ನೀಡುವ ಸಂಸ್ಥೆಗಳು ಕಪ್ಪುಪಟ್ಟಿಗೆ:ಬಿಸಿಪಿ ಖಡಕ್ ವಾರ್ನಿಂಗ್

Team Udayavani, Dec 26, 2021, 6:29 PM IST

bc-patil

ಬೆಂಗಳೂರು:ಕೃಷಿ ಇಲಾಖೆಯಲ್ಲಿ ಗುಣಮಟ್ಟದ ಟಾರ್ಪಾಲಿನ್ ವಿತರಣೆಗೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು,ಭಾರತೀಯ ಮಾಪನ ಸಂಸ್ಥೆಯ ಪರವಾನಿಗೆಯ ಗುಣಮಟ್ಟಕ್ಕಿಂತ ಕಳಪೆ ಎಂದು ಕಂಡು ಬಂದಲ್ಲಿ ಅಂತಹ ಸಂಸ್ಥೆಗಳನ್ನು ಮುಂದಿನ ಮೂರು ವರ್ಷಗಳ ಕಾಲ ಇಲಾಖೆಯಲ್ಲಿ ಭಾಗವಹಿಸುವಿಕೆಯಿಂದ ಅನರ್ಹಗೊಳಿಸಿ ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ಕಾಗಿ ಎಚ್ಚರಿಸಿದ್ದಾರೆ.

ಪರವಾನಿಗೆಯನ್ನು ಹೊಂದಿರುವ ಟಾರ್ಪಲಿನ್‌ಗಳನ್ನೇ ಸ್ವೀಕರಿಸಲು ಹಾಗೂ ವಿತರಿಸಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿರುವ ಬಿ.ಸಿ.ಪಾಟೀಲ್, ಕೃಷಿ ಇಲಾಖೆಯಿಂದ ಒದಗಿಸಲಾಗಿದೆ ಎಂಬುದರ ಖಾತ್ರಿಯ ಜೊತೆಗೆ ತಯಾರಿಕ ಸಂಸ್ಥೆಯ ಹೆಸರು , ಬ್ಯಾಚ್ ಸಂಖ್ಯೆ ಮತ್ತು ಭಾರತೀಯ ಮಾಪನ ಸಂಸ್ಥೆಯ ಪರವಾನಿಗೆಯ CML ಸಂಖ್ಯೆಯನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಟಾರ್ಪಾಲಿನ್ ಮೇಲೆ ಲೇಜರ್ ಪ್ರಿಂಟ್ ಅಥವಾ ಅಳಿಸಲಾರದ ಷಾಹಿಯಲ್ಲಿ ಮುದ್ರಿಸಿರುವುದನ್ನು ಖಾತರಿ ಪಡಿಸಿಕೊಂಡ ನಂತರವೇ ದಾಸ್ತಾನನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸ್ವೀಕರಿಸಲಾಗುತ್ತಿದೆ.ಸರಬರಾಜು ಆದೇಶ ಪಡೆದ ಸಂಸ್ಥೆಗಳು , ಸರಬರಾಜು ಮಾಡಿದ ಟಾರ್ಪಾಲಿನ್ ಗಳಲ್ಲಿ ಜಿಲ್ಲೆಗೆ ಒಂದರಂತೆ ಮಾದರಿಯನ್ನು ತೆಗೆದು ಗುಣಮಟ್ಟದ ಪರೀಕ್ಷೆಗಾಗಿ CIPET ಸಂಸ್ಥೆಗೆ ಗುಣಮಟ್ಟ ಪರೀಕ್ಷೆಗಾಗಿ ಪರೀಕ್ಷಾ ಶುಲ್ಕವನ್ನು ಸರಬರಾಜುದಾರ ಸಂಸ್ಥೆಯೇ ಪಾವತಿಸುವ ಷರತ್ತಿನೊಂದಿಗೆ ಕಳುಹಿಸಲು ಸೂಚಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಕಟಾವಿನ ನಂತರ ಕೃಷಿ ಉತ್ಪನ್ನಗಳನ್ನು ಮಳೆ , ಗಾಳಿ ಹಾಗೂ ಇನ್ನಿತರ ಹವಾಮಾನ ವೈಪರೀತ್ಯಗಳಿಂದ ಸಂರಕ್ಷಿಸಿ ಕೃಷಿ ಉತ್ಪನ್ನಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು 6 ಮೀ X 6 ಮೀ ಅಳತೆಯ ಟಾರ್ಪಾಲಿನ್ ಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ .50 ಮತ್ತು ಪರಿಶಿಷ್ಟ ಜಾತಿ / ಪಂಗಡದ ರೈತರಿಗೆ ಶೇ .90 ರಷ್ಟು ಸಹಾಯ ಧನ ಒದಗಿಸಿ ರೈತ ಸಂಪರ್ಕ ಕೇಂದ್ರಗಳ ಮುಖಾಂತರ ವಿತರಿಸಲಾಗುತ್ತಿದೆ . ಐದು ಪದರುಗಳುಳ್ಳ , 250 ಜಿ.ಎಸ್ . ಎಂ ( GSM ) ತೂಕದ , ಕಪ್ಪು ಬಣ್ಣದ ಮಾನದಂಡಗಳಿಗೆ ಅನುಗುಣವಾಗಿರುವ 8 ಮೀ X 6 ಮೀ ಅಳತೆಯ HDPE ಟಾರ್ಪಾಲಿನ್‌ಗಳನ್ನು ಸಹಾಯಧನದಡಿ ಒದಗಿಸಲಾಗುತ್ತಿದೆ.2021-22 ನೇ ಸಾಲಿನಲ್ಲಿ 239606 ಟಾರ್ಪಾಲಿನ್ ಗಳನ್ನು ವಿತರಿಸಲು ಜಿಲ್ಲಾವಾರು ಕ್ರಿಯಾ ಯೋಜನೆ ರೂಪಿಸಿ ನೀಡಲಾಗಿರುತ್ತದೆ ಎಂದು ಸಚಿವರು ಹೇಳಿದ್ದಾರೆ.

ಭಾರತೀಯ ಮಾಪನ ಸಂಸ್ಥೆಯಿಂದ ಪರವಾನಿಗೆ ಹೊಂದಿರುವ ಸಂಸ್ಥೆಗಳು ಅಥವಾ ಅವರಿಂದ ಒಡಂಬಡಿಕೆ ಪಡೆದ ಸಂಸ್ಥೆಗಳನ್ನು RFP ಮುಖಾಂತರ ಅರ್ಜಿ ಕರೆದು , ಸಂಸ್ಥೆಗಳು ಹೊಂದಿರುವ ಪರವಾನಿಗೆಯನ್ನು ತಾಂತ್ರಿಕವಾಗಿ ಮೌಲ್ಯಮಾಪನಗೊಳಿಸಿ ಅರ್ಹಗೊಂಡ ಸಂಸ್ಥೆಗಳನ್ನು ಎಂಪಾನೆಲ್ ಮಾಡಲಾಗುವುದು.ಪ್ರಸಕ್ತ ಸಾಲಿನಲ್ಲಿ ಪರವಾನಿಗೆಯನ್ನು ಹೊಂದಿರುವ 24 ಸಂಸ್ಥೆಗಳನ್ನು ಎಂಪಾನೆಲ್ ಗೊಳಿಸಲಾಗಿರುತ್ತದೆ .ಜಿಲ್ಲೆಗಳಿಗೆ ನೀಡಿದ ಕ್ರಿಯಾ ಯೋಜನೆ ಪ್ರಕಾರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಎಂದಾನೆಲ್ ಮಾಡಿದ ಯಾವುದಾದರೂ ಸಂಸ್ಥೆಗಳಿಗೆ ಟಾರ್ಪಾಲಿನ್ ಸರಬರಾಜು ಆದೇಶ ನೀಡುವ ಮುನ್ನ ಮತ್ತೊಮ್ಮೆ ಪರವಾನಿಗೆಯನ್ನು ಹೊಂದಿರುವ ಬಗ್ಗೆ ಮತ್ತು ಪರವಾನಿಗೆಯ ಸಿಂದುತ್ವವನ್ನು ಪರಿಶೀಲನೆ ಮಾಡಲು ಸೂಚಿಸಿರುವುದಾಗಿ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.