ವಿಶೇಷಾಧಿಕಾರ ಕಾಯ್ದೆ ರದ್ದು: ಸಮಿತಿ ರಚನೆಗೆ ಕೇಂದ್ರ ಒಪ್ಪಿಗೆ
Team Udayavani, Dec 27, 2021, 6:54 AM IST
ಹೊಸದಿಲ್ಲಿ: ಮಾಸಾಂತ್ಯಕ್ಕೆ ನಾಗಾಲ್ಯಾಂಡ್‌ನಲ್ಲಿ ಸಶಸ್ತ್ರ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರ ಕಾಯ್ದೆಯ ಹಾಲಿ ವಿಸ್ತರಣೆ ಅವಧಿ ಮುಕ್ತಾಯವಾಗಲಿದೆ. ಅದಕ್ಕೆ ಪೂರಕವಾಗಿ ಕಾಯ್ದೆಯನ್ನು ವಾಪಸ್ ಪಡೆಯುವ ಬಗ್ಗೆ ವಿಶೇಷ ಸಮಿತಿ ರಚನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮತಿ ಸೂಚಿಸಿದ್ದಾರೆ.
ಈ ಬಗ್ಗೆ ರವಿವಾರ ಹೊಸದಿಲ್ಲಿಯಲ್ಲಿ ಹೇಳಿಕೆ ಬಿಡುಗಡೆ ಮಾಡಲಾಗಿದೆ. ನಾಗಾಲ್ಯಾಂಡ್ ಮುಖ್ಯ ಮಂತ್ರಿ ನೆಪ್ಯೂ ರಿಯೋ, ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮ, ಮಾಜಿ ಮುಖ್ಯಮಂತ್ರಿ ಟಿ.ಆರ್. ಝೇಲಿಂಗ್ ಮತ್ತು ಇತರರ ಜತೆಗೆ ಗುರುವಾರ ನಡೆಸಲಾಗಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಕೇಂದ್ರ ಗೃಹ ಖಾತೆಯಲ್ಲಿ ಈಶಾನ್ಯ ರಾಜ್ಯಗಳಿಗಾಗಿ ಇರುವ ಹೆಚ್ಚುವರಿ ಕಾರ್ಯದರ್ಶಿ ಸಮಿತಿಯ ನೇತೃತ್ವ ವಹಿಸಲಿದ್ದಾರೆ.
ಇದರ ಜತೆಗೆ ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ 14 ಮಂದಿ ನಾಗರಿಕರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಲು ವಿಶೇಷ ಸಮಿತಿ ರಚನೆ ಮಾಡಲೂ ನಿರ್ಧರಿಸಲಾಗಿದೆ. ನ. 20ರಂದು ಸಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆ ವಿರುದ್ಧ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ವಿಶೇಷ ನಿರ್ಣಯವನ್ನೂ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.