ಅಪರಾಧ ತಡೆಗೆ ಸಹಕಾರ ಅಗತ್ಯ
Team Udayavani, Dec 27, 2021, 2:46 PM IST
ಔರಾದ: ಅಪರಾಧ ಕೃತ್ಯ ತಡೆಯಲು ಪೊಲೀಸ್ ಇಲಾಖೆ ಕೈಗೊಳ್ಳುವ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಪಿಎಸ್‌ಐ ಮಂಜುಗೌಡ ಹೇಳಿದರು.
ಪಟ್ಟಣದ ನವಚೇತನ ಹಾಗೂ ಇಂದಿರಾ ಗಾಂಧಿ ಶಾಲೆಯಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆ ಹಾಗೂ 112 ಜನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರ ಅತಿ ವೇಗದ ಬೈಕ್ ಚಲಾವಣೆ ಸೇರಿದಂತೆ ವಿವಿಧ ಕಾರಣಗಳಿಂದ ಅಪರಾಧ ಚಟುವಟಿಕೆ ನಡೆಯುತ್ತಿವೆ. ಅವುಗಳ ನಿಯಂತ್ರಣ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ತಿಳಿದು ಅಥವಾ ತಿಳಿಯದೇ ಆಗುವ ತಪ್ಪುಗಳಿಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಹಾಗೆಯೇ ದೈನಂದಿನ ಕಾನೂನಿನ ಅರಿವು ಮತ್ತು ಉತ್ತಮ ಜೀವನ ಕ್ರಮ ಅಳವಡಿಸಿಕೊಂಡರೆ ಅಪರಾಧ ಕೃತ್ಯಗಳಿಂದ ದೂರ ಉಳಿಯಬಹುದು ಎಂದರು.
ಈ ವೇಳೆ ಮುಖ್ಯ ಶಿಕ್ಷಕಿ ಜಗದೇವಿ ಜ್ಯಾತೀಕರ್, ವಿಲಾಸ ಪೊಲೀಸ್, ಸಂಜುಕುಮಾರ ಶಟಕಾರ, ಅಶೋಕ ಶೆಂಬೆಳ್ಳೆ ಸೇರಿದಂತೆ ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.