ಕ್ಯಾಪ್ಟನ್-ಬಿಜೆಪಿ ಮೈತ್ರಿ ಅಂತಿಮ : ಜಂಟಿ ಪ್ರಣಾಳಿಕೆ ಮಾಡಲು ಸಿದ್ಧತೆ
Team Udayavani, Dec 28, 2021, 8:20 AM IST
ಹೊಸದಿಲ್ಲಿ: ಪಂಜಾಬ್ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್, ಮಾಜಿ ಸಚಿವ ಸುಖ್‌ದೇವ್ ಧಿಂಡ್ಸಾ ಅವರ ಶಿರೋಮಣಿ ಅಕಾಲಿ ದಳ (ಸಂಯುಕ್ತ) ಪಕ್ಷದ ಜತೆಗೆ ಬಿಜೆಪಿ ಸ್ಥಾನ ಹೊಂದಾಣಿಕೆ ಮಾಡಿಕೊಡಿದೆ.
ಈ ಬಗ್ಗೆ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಮತ್ತು ಕ್ಯಾ| ಅಮರಿಂದರ್ ಸೋಮವಾರ ಮಾತುಕತೆ ನಡೆಸಿ, ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವುದಲ್ಲದೆ, ಮೂರು ಪಕ್ಷಗಳು ಸೇರಿಕೊಂಡು ಚುನಾವಣ ಪ್ರಣಾಳಿಕೆ ಸಿದ್ಧಗೊಳಿಸಿ, ಬಿಡುಗಡೆ ಮಾಡಲು ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದ್ದಾರೆ.
ಇಂದು 3 ರ್ಯಾಲಿ: ಉತ್ತರಪ್ರದೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ 3 ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹರ್ದೋಯಿ, ಸುಲ್ತಾನ್‌ಪುರ ಮತ್ತು ಭದೋಹಿ ಜಿಲ್ಲೆಗಳಲ್ಲಿ ರ್ಯಾಲಿ ಆಯೋಜಿಸಲಾಗಿದೆ.
ಬಿಜೆಪಿ ಸೇರಿದ ನಟಿ ತಂದೆ ಮೇಲೆ ಗುಂಡಿನ ದಾಳಿ: ಹಿಂದಿಯ ಬಿಗ್‌ಬಾಸ್ 13 ಸ್ಪರ್ಧಿ ಶೆಹನಾಜ್ ಗಿಲ್ ತಂದೆ ಸಂತೋಕ್ ಸಿಂಗ್ ಸುಖ್ ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಪಕ್ಷ ಸೇರಿದ ಬೆನ್ನಲ್ಲೇ ಕಿಡಿಗೇಡಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ್ದಾರೆ. ಶನಿವಾರ ಸಂಜೆ ಸಂತೋಕ್ ಅವರು ಅಮೃತಸರದಲ್ಲಿ ಕಾರಿನಲ್ಲಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್, ಸಂತೋಕ್ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.
ಆಪ್‌ಗೆ ಭರ್ಜರಿ ಜಯ
ಪಂಜಾಬ್ ವಿಧಾನಸಭೆ ಚುನಾವಣೆಗೆ ಮುನ್ನವೇ ಚಂಡೀಗಢ ಮಹಾನಗರ ಪಾಲಿಕೆಗೆ ನಡೆದಿದ್ದ ಚುನಾವಣೆಯಲ್ಲಿ ಅಚ್ಚರಿಯೆಂಬಂತೆ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. 35 ವಾರ್ಡ್‌ಗಳ ಪೈಕಿ ಆಪ್ 14 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 12, ಕಾಂಗ್ರೆಸ್ 8, ಶಿರೋಮಣಿ ಅಕಾಲಿ ದಳ 1 ಕ್ಷೇತ್ರಗಳಲ್ಲಿ ಗೆದ್ದಿವೆ. ಈ ಹಿಂದಿನ ಚುನಾವಣೆ ವೇಳೆ, 26 ವಾರ್ಡ್‌ಗಳ ಪೈಕಿ 20 ಬಿಜೆಪಿ ಪಾಲಾಗಿತ್ತು. ಈ ಗೆಲುವಿಗೆ ಹರ್ಷ ವ್ಯಕ್ತಪಡಿಸಿರುವ ದಿಲ್ಲಿ ಸಿಎಂ ಕೇಜ್ರಿವಾಲ್, “ಚಂಡೀಗಢವು ಪ್ರಾಮಾಣಿಕ ರಾಜಕೀಯವನ್ನು ಆಯ್ಕೆ ಮಾಡಿದೆ. ಪಂಜಾಬ್‌ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ’ ಎಂದಿದ್ದಾರೆ.
ಹಗಲಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ರ್ಯಾಲಿ ಮಾಡುವುದು. ರಾತ್ರಿ ಹೊತ್ತು ಕರ್ಫ್ಯೂ ಹೇರುವುದು! ಉತ್ತರಪ್ರದೇಶದ ಸೀಮಿತ ಆರೋಗ್ಯ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಆದ್ಯತೆಯಿರುವುದು ಕೊರೊನಾ ನಿಯಂತ್ರಣವೇ ಅಥವಾ ಚುನಾವಣಾ ರ್ಯಾಲಿಗಳೇ ಎಂಬುದನ್ನು ಮೊದಲು ನಾವು ನಿರ್ಧರಿಸಬೇಕು.
ವರುಣ್ ಗಾಂಧಿ, ಬಿಜೆಪಿ ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.