‘ವಿಶ್ರಾಂತಿ ಪಡೆಯಿರಿ’ ಎಂಬ ಸ್ವಪಕ್ಷದ ಶಾಸಕರ ಸಲಹೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ
Team Udayavani, Dec 28, 2021, 3:04 PM IST
ಹುಬ್ಬಳ್ಳಿ: ಪಕ್ಷದ ರಾಜ್ಯ ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷದ ಸಂಘಟನೆ, ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತದೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಪ್ರೀತಿಯಿಂದ ಸಲಹೆ: ಶಾಸಕ ಎಂ.ಪಿ.ಕುಮಾರಸ್ವಾಮಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಅದಕ್ಕೆ ನನ್ನ ವಿಶ್ರಾಂತಿ ಬಗ್ಗೆ ಮಾತನಾಡಿದ್ದಾರೆ. ವರ್ಷಪೂರ್ತಿ ದಿನಾ 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ. 2023ಕ್ಕೆ ಬಿಜೆಪಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಈಗನಿಂದಲೇ ಅದನ್ನ ಆರಂಭಿಸಿದ್ದೇನೆ ಎಂದರು.
ಇದನ್ನೂ ಓದಿ:ಸಿಎಂ ವಿಶ್ರಾಂತಿ ತೆಗೆದುಕೊಂಡರೆ ಒಳ್ಳೆಯದು: ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಸಲಹೆ
ಪಕ್ಷ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಸೇರಿದಂತೆ ಕೇಂದ್ರದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳುತ್ತೇನೆ. ನಾವು ನಮ್ಮದೇ ಆದ ತಂಡವಿದೆ. ನಾವೆಲ್ಲಾ ಸೇರಿ ಸಾಮೂಹಿಕವಾಗಿ ಚುನಾವಣೆ ಎದುರಿಸುತ್ತೇವೆ ಎಂದರು.
ಬಿಡಿಎ ಭ್ರಷ್ಟಾಚಾರ ಎಸಿಬಿ ಕೇಸ್ ವಿಚಾರದ ಬಗ್ಗೆ ಮಾತನಾಡಿದ ಅವರು, ಕೆಲವೊಂದು ಅಂತರಿಕ ಪ್ರಸ್ತಾವನೆ ಕೇಳಿದ್ದಾರೆ. ಅನುಮತಿ ಸಿಕ್ಕ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.