ಜನವರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ
Team Udayavani, Dec 28, 2021, 5:38 PM IST
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕಸ್ಪರ್ಧೆಗಳನ್ನು 2022 ರ ಜನವರಿಯಲ್ಲಿಆಯೋಜಿಸಲು ಉದ್ದೇಶಿಸಲಾಗಿದೆ ಎಂದುಜಿಲ್ಲಾಧಿ ಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು.ಎರಡು ದಿನಗಳ ಕಾಲ ನಡೆಯಲಿರುವ ಈಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರುಸೇರಿದಂತೆ ವಿವಿಧ ಗಣ್ಯರನ್ನು ಉದ್ಘಾಟನೆಗೆಆಹ್ವಾನಿಸಲಾಗುವುದು.
ಕ್ರೀಡೆಗಳ ನಿರ್ಣಯಕ್ಕೆದೈಹಿಕ ಶಿಕ್ಷಕರನ್ನು ಹಾಗೂ ಸಾಂಸ್ಕೃತಿಕಸ್ಪರ್ಧೆಗಳಿಗೆ ತಜ್ಞ ತೀರ್ಪುಗಾರರನ್ನುನಿಯೋಜಿಸಲಾಗುವುದು ಎಂದರು.ನಗರದ ಕುವೆಂಪು ರಂಗಮಂದಿರ, ನೌಕರರಭವನ, ಡಾ|ಅಂಬೇಡ್ಕರ್ ಭವನ ಹಾಗೂನೆಹರೂ ಒಳಾಂಗಣ ಹಾಗೂ ಹೊರಾಂಗಣಕ್ರೀಡಾಂಗಣದಲ್ಲಿ ಕ್ರೀಡಾ ಕೂಟ ಹಾಗೂಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಗುವುದು.
ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆರಾಜ್ಯ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿಭಾಗವಹಿಸಲು ಶಿಫಾರಸ್ಸು ಮಾಡಲಾಗುವುದು.ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಆಕರ್ಷಕಬಹುಮಾನ ಹಾಗೂ ಸ್ಮರಣಿಕೆಗಳನ್ನು ನೀಡಿಗೌರವಿಸಲಾಗುವುದು ಎಂದರು.
ಈ ಕ್ರೀಡಾಕೂಟಕ್ಕೆ ಜಿಲ್ಲೆಯಿಂದ ಸುಮಾರು4,000ಕ್ಕೂ ಹೆಚ್ಚಿನ ನೌಕರರು ಭಾಗವಹಿಸುವನಿರೀಕ್ಷೆ ಇದ್ದು, ಕ್ರೀಡಾಪಟುಗಳಿಗೆ 2ದಿನಗಳಕಾಲ ಮಧ್ಯಾಹ್ನದ ಊಟೋಪಚಾರ ವ್ಯವಸ್ಥೆಕಲ್ಪಿಸಲಾಗುವುದು. ಅಲ್ಲದೇ ಕ್ರೀಡಾಕೂಟದಲ್ಲಿಭಾಗವಹಿಸುವ ನೌಕರರಿಗೆ ವಿಶೇಷಸಾಂದರ್ಭಿಕ ರಜೆ ಸೌಲಭ್ಯ ಕಲ್ಪಿಸಲಾಗುವುದುಎಂದು ಜಿಲ್ಲಾ ಧಿಕಾರಿಗಳು ತಿಳಿಸಿದರು.ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಿ,ಸ್ಪರ್ಧೆಗಳನ್ನು ಆಯೋಜಿಸಲಾಗುವುದು.ಆದ್ದರಿಂದ ಪ್ರತಿ ವರ್ಷದಂತೆ ಕ್ರೀಡಾಕೂಟದಅಂಗವಾಗಿ ಏರ್ಪಡಿಸಲಾಗುತ್ತಿದ್ದ ರಸಸಂಜೆಕಾರ್ಯಕ್ರಮವನ್ನು ಮೊಟಕುಗೊಳಿಸಲುಉದ್ದೇಶಿಸಲಾಗಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Cricket: ಐಪಿಎಲ್ ಹರಾಜಿನಲ್ಲಿ 574 ಕ್ರಿಕೆಟಿಗರು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.