ವಾರಣಾಸಿಯ ಅಟಮೋಸ್ ಪವರ್ ಗೋಬರ್ ಗ್ಯಾಸ್ ಘಟಕಕ್ಕೆ ಸಚಿವ ಪ್ರಭು ಚವ್ಹಾಣ್ ಭೇಟಿ


Team Udayavani, Dec 28, 2021, 6:59 PM IST

ವಾರಣಾಸಿಯ ಅಟಮೋಸ್ ಪವರ್ ಗೋಬರ್ ಗ್ಯಾಸ್ ಘಟಕಕ್ಕೆ ಸಚಿವ ಪ್ರಭು ಚವ್ಹಾಣ್ ಭೇಟಿ

ಉತ್ತರಪ್ರದೇಶ : ಉತ್ತರಪ್ರದೇಶದ ವಾರಣಾಸಿಯ ಶೇಹನ್ ಶಾಪುರ್ ಪ್ರದೇಶದಲ್ಲಿರುವ ಕಾನ್ಹಾ ಉಪವನ ಗೋಶಾಲೆಗೆ ಮತ್ತು ಅಟಮೋಸ್ ಪವರ್ ಸಂಸ್ಥೆ ಸ್ಥಾಪಿಸಿರುವ ಗೋಬರ್ ಗ್ಯಾಸ್ ಘಟಕಕ್ಕೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಗೋವುಗಳ ಹಾಗೂ ಆಧಾರಿತ ಕೃಷಿಯ ಬಗ್ಗೆ ಹೆಚ್ಚು ಕಳಕಳಿ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರದಲ್ಲಿ ಉದ್ಘಾಟನೆಗೊಂಡ ಅಟಮೋಸ್ ಗೋಬರ್ ಘಟಕ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ್ದು ರೈತರ ಪರ ಅವರ ಕಾಳಜಿಯನ್ನು ತೋರುತ್ತದೆ ಎಂದರು.

ಉತ್ತರ ಪ್ರದೇಶ ಮಹಾರಾಷ್ಟ್ರ ಮತ್ತು ಗುಜರಾತ್ ಪ್ರವಾಸದಲ್ಲಿರುವ ಸಚಿವರು ಉತ್ತರ ಪ್ರದೇಶದ ಶಾಲೆಗಳಿಗೆ ಭೇಟಿ ಗೋಶಾಲೆಗಳ ನಿರ್ವಹಣ ಮಾದರಿಗಳ ಕುರಿತು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಅಟಮೊಸ್ ಪವರ್ ಸಂಸ್ಥೆಯಿಂದ ನಿರ್ಮಿಸಲಾಗಿರುವ ಗೋಬರ್ ಗ್ಯಾಸ್ ಘಟಕದಲ್ಲಿ ನಿತ್ಯ 90 ಟನ್ ಗೊಬ್ಬರನ್ನು ಸಂಗ್ರಹಿಸಿ ಗ್ಯಾಸ್ ಉತ್ಪಾದನೆ ಮಾಡಿ ಅದನ್ನು ಸಿಲಿಂಡರ್ ನಲ್ಲಿ ತುಂಬಿಸಿ ಮಾರಾಟಮಾಡಲಾಗುತ್ತಿದೆ. ಘಟಕದಲ್ಲಿನ ಗ್ಯಾಸ್ ಉತ್ಪಾದನೆ ಆದನಂತರ ಉಳಿದಿರುವ ಸ್ಲರಿ ಮತ್ತು ಬಗಾಸೆಯಿಂದ ರಸಗೊಬ್ಬರವನ್ನು ತಯಾರು ಮಾಡಿ ಗೋಆಧಾರಿತ ಕೃಷಿಗೆ ಉತ್ತೇಜನ ನೀಡುತ್ತಿದ್ದಾರೆ ಎಂದರು.

ಉತ್ತರಪ್ರದೇಶದ ವಾರಣಾಸಿಯ ಶಹನಶಾಹಪುರ ಘಟಕದಲ್ಲಿ ಉತ್ಪಾದನೆಯಾಗುತ್ತಿರುವ ಗೊಬ್ಬರವನ್ನು ಸ್ಥಳೀಯರು ಹೆಚ್ಚು ಬಳಕೆ ಮಾಡಿಕೊಳ್ಳುತ್ತಾರೆ. ಈ ಭಾಗದ ರೈತರು ಗೋವು ಆಧಾರಿತ ಅಥವಾ ಪಾರಂಪರಿಕ ಕೃಷಿಯನ್ನು ಹೆಚ್ಚು ಅವಲಂಬಿಸಿದ್ದಾರೆ ಎಂದು ಸಚಿವರು ತಮ್ಮ ಅನುಭವವನ್ನು ತಿಳಿಸಿದ್ದಾರೆ.

ಸುಮಾರು ಇಪ್ಪತ್ತಕ್ಕೂ ಹೆಚ್ಚು ಹತ್ತಿರದ ಹಳ್ಳಿಗಳಿಂದ ಗೊಬ್ಬರವನ್ನು ಸಂಗ್ರಹಿಸಿ 90 ಮೆಟ್ರಿಕ್ ಟನ್ ವರೆಗೆ ಗ್ಯಾಸ್ ಉತ್ಪಾದನೆ ಮಾಡಲಾಗುತ್ತದೆ. ಹಾಗೂ ಪ್ರತಿ ಕೆಜಿಗೆ ರೂ.1 ರಂತೆ ಗೊಬ್ಬರವನ್ನು ಖರೀದಿ ಮಾಡುತ್ತಾರೆ. ಸುಮಾರು 5 ರಿಂದ 225 ಟನ್ ಗೊಬ್ಬರ ದಿಂದ ಗ್ಯಾಸ್ ಉತ್ಪಾದನೆ ಮಾಡುವ ಸಾಮರ್ಥ್ಯವನ್ನು ಅಟಮೋಸ್ ಘಟಕ ಹೊಂದಿದೆ. ಕಸಾಯಿಖಾನೆಗೆ ಸಾಗಿಸುತ್ತಿದ್ದ ಸುಮಾರು 300ಕ್ಕೂ ಹೆಚ್ಚು ಗೋವುಗಳನ್ನು ಇಲ್ಲಿ ಸಾಕಲಾಗಿದ್ದು ನಿತ್ಯ ಆರೋಗ್ಯ ಮತ್ತು ಆಹಾರಕ್ಕೆ ಹೆಚ್ಚಿನ ಒತ್ತು ನೀಡಿ ಆರೈಕೆ ಮಾಡಲಾಗುತ್ತಿದೆ. ಅಲ್ಲದೆ ಸುತ್ತಮುತ್ತಲ ಪ್ರದೇಶದ ರೈತರಿಗೆ ಹಾಗೂ ಜಾನುವಾರು ಸಾಕಣೆದಾರರಿಗೆ ಗೋವುಗಳನ್ನು ಸಾಕಲು ಆಗದೇ ಇದ್ದ ಸಂದರ್ಭದಲ್ಲಿ ಅವುಗಳನ್ನು ಗೋಶಾಲೆಗೆ ಬಿಡಲು ಮನವಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಬಹುತೇಕ ಹಸುಗಳು ಕಟುಕರ ಕೈಸೇರುವುದರಿಂದ ಉಳಿದಿದೆ.

ಇದನ್ನೂ ಓದಿ : ತೀರ್ಥಹಳ್ಳಿ: ಕುಡಿದ ಮತ್ತಿನಲ್ಲಿ ಶಾಲೆಯ ವಿಗ್ರಹ ಧ್ವಂಸ ಮಾಡಿದ ಕುಡುಕ

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.