ಸಮ್ಮೇಳನಕ್ಕೆ ಸರ್ವ ಸಹಕಾರ: ತೇಲ್ಕೂರ
Team Udayavani, Dec 28, 2021, 8:21 PM IST
ಕಲಬುರಗಿ: ಬರುವ ಜನವರಿ 3 ಹಾಗೂ 4ರಂದು ನಡೆಯಲಿರುವ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನಕ್ಕೆ ಸರ್ವ ನಿಟ್ಟಿನಲ್ಲಿ ಸಹಕಾರ ನೀಡುವುದಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿರುವ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದರು.
ಸಮ್ಮೇಳನದ ಆಮಂತ್ರಣ ಸ್ವೀಕರಿಸಿದ ಅವರು, ಪತ್ರಕರ್ತರ ಸಮ್ಮೇಳನ ನಮ್ಮೆಲ್ಲರ ಹಬ್ಬವಾಗಿದೆ. ಉದ್ಘಾಟನೆಗೆ ಮುಖ್ಯಮಂತ್ರಿ ಆಗಮಿಸುತ್ತಿದ್ದು, ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವರು ಎಂದರು. ಸಮ್ಮೇಳನಕ್ಕೆ ಬರುವ ಪ್ರತಿನಿ ಧಿಗಳಿಗೆ ಹಾಗೂ ಸಮ್ಮೇಳನಕ್ಕೆ ಬರುವವರಿಗೆ ಅನುಕೂಲವಾಗಲು ನಿಗಮದಿಂದ ಬಸ್ ಸೌಕರ್ಯ ಕಲ್ಪಿಸಲಾಗುವುದು. ಸಮ್ಮೇಳನದ ಸಿದ್ದತೆಗಳ ಕುರಿತು ಸಂಘದ ಪದಾಧಿ ಕಾರಿಗಳೊಂದಿಗೆ ಚರ್ಚಿಸಿದ ಶಾಸಕ ತೇಲ್ಕೂರ, ಸಮ್ಮೇಳನದ ಸಿದ್ಧತೆಯಲ್ಲಿ ಯಾವುದೇ ಕೊರತೆ ಆಗಬಾರದು ಎಂದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಪ್ರಧಾನ ಕಾಯದರ್ಶಿ ದೇವಿಂದ್ರಪ್ಪ ಆವಂಟಿ, ರಾಜ್ಯ ಸಮಿತಿ ಸದಸ್ಯ ಹಣಮಂತರಾವ ಭೈರಾಮಡಗಿ, ಖಜಾಂಚಿ ರಾಜು ದೇಶಮುಖ ಸೇರಿದಂತೆ ಮುಂತಾದವರಿದ್ದರು. ಸಮ್ಮೇಳನ ಯಶಸ್ಸಿಗಾಗಿ ಉಪ ಸಮಿತಿ ರಚಿಸಲಾಗಿದ್ದು, ಎಲ್ಲ ಉಪ ಸಮಿತಿಗಳು ಕಾರ್ಯೋನ್ಮುಖಗೊಂಡಿದ್ದು, ಸಮಿತಿಯ ಸದಸ್ಯರು ಸಮ್ಮೇಳನದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.