ನನ್ನನ್ನೂ ಸೇರಿ 83 ತಾಲೂಕಿನ ಜನಕ್ಕೆ ಮಕ್ಮಲ್ ಟೋಪಿ:ಡಿಕೆಶಿ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯ
ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿಯಾದ ಮೇಲೆ ಗೌಡರನ್ನು ತಡೆಯುವುದಕ್ಕೆ ಧೈರ್ಯ ಸಾಲಲಿಲ್ಲ.
Team Udayavani, Dec 29, 2021, 10:52 AM IST
ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿರುವ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ತಮಗೂ ಆಹ್ವಾನ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ “ನನ್ನನ್ನೂ ಸೇರಿ 83 ತಾಲೂಕು ಜನರಿಗೆ ಮಕ್ಮಲ್ ಟೋಪಿ ಹಾಕಲು ಹೊರಟಿದ್ದಾರೆ ʼʼ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮೇಕೆದಾಟು ಯೋಜನೆಯ ಮೂಲ ರೂವಾರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ಸತ್ಯದ ಸಮಾಧಿ ಮಾಡಲು ಹೊರಟಿದ್ದಾರೆ. ಸತ್ಯ ಹೇಳಲು ಅವರಿಗೆ ನಾಲಿಗೆ ಹೊರಳುತ್ತದೆ. ಮಣ್ಣಿನ ಮಕ್ಕಳ ನಂಬಿಕೆಯನ್ನು ಬುಲ್ಡೋಜ್ ಮಾಡುವಂಥ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ನ್ಯಾಯಯುತ ಪಾಲು ಕಾವೇರಿ 4 ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ಕಾಂಗ್ರೆಸ್ ತಡೆದಿತ್ತು. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿಯಾಗಿದ್ದರು. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ.
ಆಗ ಮುಖ್ಯಮಂತ್ರಿಯಾಗಿದ್ದ ದೇವೇಗೌಡರನ್ನು ತಡೆದ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿಯಾದ ಮೇಲೆ ಗೌಡರನ್ನು ತಡೆಯುವುದಕ್ಕೆ ಧೈರ್ಯ ಸಾಲಲಿಲ್ಲ. ಕಾಂಗ್ರೆಸ್ ನ ಕುತ್ಸಿತತನದಿಂದ ತಡೆಯಲ್ಪಟ್ಟ 9 ಟಿಎಂಸಿ ನೀರಿನ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರು ನಿಶಾನೆ ತೋರಿದರು. ಜಪಾನ್ ನಿಂದ ಇದಕ್ಕಾಗಿ ಹಣವನ್ನೂ ತಂದರು.
ರಾಜ್ಯದಲ್ಲಿ ಈ ಹಿಂದೆ ಐದು ವರ್ಷ ಕಾಂಗ್ರೆಸ್ ಸರಕಾರವೇ ಇತ್ತು. ಸಿದ್ದಹಸ್ತರೇ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರಿ ಮಾತಿನ ಪೌರುಷ. ಆಗ ಗಾಂಧಿ ಪ್ರತಿಮೆ ಮುಂದೆ ಉಪವಾಸ ಕುಳಿತ ಮಣ್ಣಿನ ಮಗನ ಖದರಿಗೆ ಕೇಂದ್ರವೇ ನಡುಗಿತ್ತು. ಕಾಂಗ್ರೆಸ್ ಪವಿತ್ರ ಗಂಗೆಯನ್ನೂ ರಾಜಕೀಯಕ್ಕೆ ಬಳಸುತ್ತದೆ. ಆಗ ಏನೂ ಮಾಡದ ಉತ್ತರಕುಮಾರ ಸಿದ್ದಸೂತ್ರಧಾರ ಈಗೇನು ಮಾಡಲು ಸಾಧ್ಯ ? ಕಪಟ ನಾಟಕ ಮಾಡುವ ಸಿದ್ದಹಸ್ತ ಡಿಸೈನ್ ಶೂರರಿಗೆ ಮುಂದೆ ಶಾಸ್ತಿ ಕಾದಿದೆ. ಭೂತಾಯಿ ಒಡಲಿನ ಮಣ್ಣು ಬಗೆದ ಕಲ್ಲುಬಂಡೆಗಳನ್ನೇ ನುಂಗಿದ ರಕ್ಕಸ ರಾಜಕಾರಣದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.