ಸ್ಥಳೀಯ ಚುನಾವಣೆ ಸೋಲು: ಬಿಜೆಪಿ ವಿರುದ್ಧವೇ ಅರುಣ್ ಸಿಂಗ್ ಗೆ ಕವಟಗಿಮಠ್ ದೂರು
ಜಾರಕಿಹೊಳಿ ಸೋದರರು ಹಾಗೂ ರಾಜ್ಯ ನಾಯಕತ್ವದ ಉದಾಸೀನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Team Udayavani, Dec 29, 2021, 11:56 AM IST
ಹುಬ್ಬಳ್ಳಿ : ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪರಾಜಿತ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ್ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.
ಮಂಗಳವಾರ ಸಂಜೆ ಅರುಣ್ ಸಿಂಗ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಅವರು, ಜಾರಕಿಹೊಳಿ ಸೋದರರು ಹಾಗೂ ರಾಜ್ಯ ನಾಯಕತ್ವದ ಉದಾಸೀನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜಾರಕಿಹೊಳಿ ಸೋದರರು ಲಕನ್ ಜಾರಕಿಹೊಳಿ ಅವರನ್ನು ಪಕ್ಷೇತರವಾಗಿ ಕಣಕ್ಕೆ ಇಳಿಸಿದರು. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಯ್ತು. ನಾಮಪತ್ರ ವಾಪಾಸ್ ಪಡೆಯುವಂತೆ ರಾಜ್ಯದ ಯಾವುದೇ ಹಿರಿಯ ನಾಯಕರು ಒತ್ತಡ ಹೇರದೇ ಮೌನಕ್ಕೆ ಶರಣಾದರು. ಹೀಗಾಗಿ ಅಧಿಕೃತ ಅಭ್ಯರ್ಥಿಯಾದ ನಾನೇ ಸೋಲುವಂತಾಯ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋದರ ಪ್ರದೀಪ್ ಶೆಟ್ಟರ್ ಕೂಡಾ ಅರುಣ್ ಸಿಂಗ್ ಬಳಿ ಬೇಸರ ತೋಡಿಕೊಂಡಿದ್ದಾರೆ. ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದ್ದರಿಂದ ನಾನು ಎರಡನೇ ಪ್ರಾಶಸ್ತ್ಯದ ಮತದಲ್ಲಿ ತಿಣುಕಾಡಿ ಗೆಲ್ಲುವಂತಾಯ್ತು ಎಂದು ಬೇಸರ ತೋಡಿಕೊಂಡಿದ್ದಾರೆ. ಬಿಜೆಪಿ ಕಾರ್ಯಕಾರಿಣಿಗೆ ಜಾರಕಿಹೊಳಿ ಸೋದರರು ಹಾಗೂ ಬಿ.ಎಸ್.ಯಡಿಯೂರಪ್ಪ ಗೈರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.