ಗ್ರಾಮಲೆಕ್ಕಾಧಿಕಾರಿ ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ


Team Udayavani, Dec 29, 2021, 3:31 PM IST

ಗ್ರಾಮಲೆಕ್ಕಾಧಿಕಾರಿ ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ

ಚಿಕ್ಕನಾಯಕನಹಳ್ಳಿ: ಕಂದಾಯ ಇಲಾಖೆಯಲ್ಲಿ ಮಧ್ಯವರ್ತಿಗಳ ಕೈ ಬಹುತೇಕವಾಗಿ ಮೇಲುಗೈ ಯಾಗಿರುತ್ತದೆ. ಪ್ರತಿ ಕೆಲಸಕ್ಕೂ ಮಧ್ಯವರ್ತಿಗಳು ಅವಶ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. ಕೆಲ ಅಧಿಕಾರಿಗಳು ಇದಕ್ಕೆ ಸಹಕಾರ ಕೊಡುತ್ತಿದ್ದಾರೆ.

ಆದರೆ, ಇಲ್ಲಿ ಒಬ್ಬ ಗ್ರಾಮಲೆಕ್ಕಾಧಿಕಾರಿ ತಮ್ಮಕಚೇರಿ ಮುಂಭಾಗ “ಮಧ್ಯವರ್ತಿಗಳಿಗೆ ಪ್ರವೇಶವಿಲ್ಲ’ ಎಂದು ನಾಮಫ‌ಲಕ ಹಾಕುವ ಮೂಲಕ ಮಧ್ಯವರ್ತಿಗಳಿಗೆ ಶಾಕ್‌ ನೀಡಿದ್ದಾರೆ.

ಗ್ರಾಮಲೆಕ್ಕಾಧಿಕಾರಿ, ಕಂದಾಯ, ಸರ್ವೆ ಅಧಿಕಾರಿಗಳ ಬಳಿ ಹೋಗಲು, ಫ‌ಹಣಿ, ಆಧಾರ್‌ತಿದ್ದುಪಡಿ, ಮರಣ ಪ್ರಮಾಣ ಪತ್ರ, ರೇಷನ್‌ಕಾರ್ಡ್‌ ಮಾಡಿಸಲು ಬಹುತೇಕರು ಮಧ್ಯವರ್ತಿ ಗಳ ಸಹಕಾರ ಪಡೆಯುತ್ತಾರೆ. ವೇಗವಾಗಿ ಕೆಲಸ ವಾಗಲು ಹಾಗೂ ದಾಖಲಾತಿಗಳಲ್ಲಿ ಹೆಚ್ಚುಕಡಿಮೆ ಯಾಗಿದ್ದರೂ ಕೆಲಸವಾಗುತ್ತದೆ ಎಂಬ ಕಾರಣದಿಂದ ಬಹುತೇಕ ಜನರು, ತಮ್ಮ ಕೈಯಲ್ಲಿದ್ದ ಹಣ ಕಳೆದುಕೊಂಡು ಮಧ್ಯವರ್ತಿಗಳನ್ನು ಆಶ್ರಹಿಸುತ್ತಾರೆ. ಇದಕ್ಕೆ ಕಡಿವಾಣ ಹಾಕುವ ಕಸಬಾ ಹೋಬಳಿ ಮಾಳಿಗೇಹಳ್ಳಿ ವೃತ್ತದ ಗ್ರಾಮಲೆಕ್ಕಾಧಿಕಾರಿ ಮರುಳಸಿದ್ದಗೌಡ ಅವರು ಮುಂದಾಗಿದ್ದಾರೆ.

ಮಧ್ಯವರ್ತಿಗಳು ಕಚೇರಿಗೆ ಬರುವ ಅವಶ್ಯವಿಲ್ಲ, ರೈತರು ನೇರವಾಗಿ ತಮ್ಮ ಕೆಲಸಕ್ಕೆ ಬನ್ನಿ ಎಂಬ ರೀತಿಯಲ್ಲಿ ನಾಮಫ‌ಲಕ ಹಾಕಿರುವುದು ನಿಜಕ್ಕೂ ಆರೋಗ್ಯಕರ ಬೆಳವಣಿಗೆ.

ರೈತರಿಂದ ಹಣ ವಸೂಲಿ ಮಾಡಬೇಡಿ: ಬೆಳೆ ಪರಿಹಾರ, ಸಂಧ್ಯಾಸುರಕ್ಷ ಯೋಜನೆ ಖಾತೆಬದಲಾವಣೆ, ವಿಧವ ವೇತನ ಸೇರಿದಂತೆ ಇನ್ನಿತರಕೆಲಸಗಳಿಗೆ ಮಧ್ಯವರ್ತಿಗಳು ಹಣ ಪಡೆದುಕೊಳ್ಳುತ್ತಾರೆ ಎಂಬ ದೂರು ರೈತರು ಹಾಗೂ ಸಾರ್ವಜನಿಕರಿಂದ ಕೇಳಿ ಬಂದಿದೆ. ಯಾರದೋವಂಶವೃಕ್ಷ ತಂದು ಖಾತೆ ಬದಲಾವಣೆಗೆ ಒತ್ತಡ ಹಾಕುತ್ತಿದ್ದರು. ಇದರಿಂದ ಕಿರಿಕಿರಿ ಉಂಟಾಗುತಿತ್ತು. ಹೀಗಾಗಿ ರೈತರು ಹಾಗೂ ಸಾರ್ವಜನಿಕರ ಕೆಲಸಗಳಿಗೆ ಅವರು ಅಥವಾ ಅವರ ಸಂಬಂಧಿಗಳು ಬಿಟ್ಟು ಬೇರೆಯವರು ಬಂದರೆ ನಾನು ಅವಕಾಶ ನೀಡುವುದಿಲ್ಲ. ಫ‌ಲಾನುಭವಿಗಳೇಮುಕ್ತವಾಗಿ ಕಚೇರಿಗೆ ಬಂದು ತಮ್ಮ ಕೆಲಸಗಳನ್ನುಸರ್ಕಾರದ ಮಾರ್ಗಸೂಚನೆಯಂತೆ ಮಾಡಿಸಿಕೊಳ್ಳಲು ಅವಕಾಶ ನೀಡಿದ್ದೇನೆ. ರೈತರಿಂದಹಣ ವಸೂಲಿಗೆ ಕಡಿವಾಣ ಹಾಕಲಾಗಿದೆ ಎಂದುಗ್ರಾಮ ಲೆಕ್ಕಾಧಿಕಾರಿ ಮರುಳಸಿದ್ದನಗೌಡತಿಳಿಸಿದ್ದಾರೆ.

ರಾಜಕೀಯ ಮುಖಂಡರ ಮೇಲೆ ಒತ್ತಡ ತರಬೇಡಿ: ಗ್ರಾಮಲೆಕ್ಕಾಧಿಕಾರಿ ರೈತರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮಧ್ಯವರ್ತಿ ಗಳನ್ನು ತಡೆಗಟ್ಟಿರುವುದರ ಬಗ್ಗೆ ಜಿದ್ದುಇಟ್ಟುಕೊಂಡು ಗ್ರಾಮಲೆಕ್ಕಾಧಿಕಾರಿ ಮೇಲೆ ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಚಿವರು ಅಥವಾ ರಾಜಕೀಯ ಮುಖಂಡರ ಮೂಲಕ ವರ್ಗಾವಣೆ ಮಾಡಿಸುವ ಸಣ್ಣ ಬುದ್ಧಿಯನ್ನು ಪ್ರದರ್ಶಿಸಬಾರದು ಎಂದುಸಾರ್ವಜನಿಕರು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ಗ್ರಾಮಲೆಕ್ಕಾಧಿಕಾರಿಗಳು ತಮ್ಮ ವ್ಯವಸ್ಥೆಯಲ್ಲಿನ ಕೆಲಸಗಳನ್ನು ನೇರವಾಗಿಫ‌ಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಸಹಾಯವಿಲ್ಲದೆ, ಮಾಡಿಕೊಡುವ ಸಾಹಸಮಾಡಿರುವುದು ಉತ್ತಮವಾಗಿದ್ದು, ಪ್ರಾಮಾಣಿಕಅಧಿಕಾರಿಗಳನ್ನು ಉಳಿಸಿ ಬಳಸಿಕೊಳ್ಳುವುದು ಎಲ್ಲಾರ ಜವಾಬ್ದಾರಿಯಾಗಿದೆ.

– ಚೇತನ್‌

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.