ಯಾದಗಿರಿಯಲ್ಲೂ ಕರವೇ ಪ್ರತಿಭಟನೆ
Team Udayavani, Dec 29, 2021, 9:59 PM IST
ಯಾದಗಿರಿ: ಎಂಇಎಸ್ ಮತ್ತು ಶಿವಸೇನೆ ನಿಷೇಧಿ ಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾ ಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ವೇದಿಕೆ ತಾಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ ಮಾತನಾಡಿ, ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಮೌನ ವಹಿಸಿರುವುದು ಖಂಡನೀಯ ಎಂದರು.
ತಾಯ್ನೆಲಕ್ಕಾಗಿ ಹೋರಾಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಲಾಗಿದೆ. ಮಹಾ ಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿಯಲಾಗಿದೆ. ಬೆಳಗಾವಿ-ಮಹಾರಾಷ್ಟ್ರದಲ್ಲಿ ಕನ್ನಡ ಧcಜಕ್ಕೆ ಬೆಂಕಿ ಹಾಗೂ ಬೆಳಗಾವಿಯಲ್ಲಿ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ. ಇದಕ್ಕೆಲ್ಲ ಕಾರಣೀಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು.
ಆದ್ದರಿಂದ ಈ ಎರಡೂ ಸಂಘಟನೆ ನಿಷೇ ಧಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಈ ವೇಳೆ ಶಹಾಪುರ ತಾಲೂಕು ಅಧ್ಯಕ್ಷ ಭೀಮಣ್ಣ ಶಖಾಪುರ, ವಡಿಗೇರಿ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗನೋರ್, ಯುವ ಘಟಕ ಅಧ್ಯಕ್ಷ ವಿಶ್ವರಾಧ್ಯ ದಿಮ್ಮೆ, ನಗರಾಧ್ಯಕ್ಷರಾದ ಅಂಬ್ರೇಶ್ ಹತ್ತಿಮನಿ ಸಾಹೇಬ್‌ಗೌಡ ನಾಯಕ, ಸಿದ್ದಪ್ಪ ಕ್ಯಾಸಪ್ಪನಳ್ಳಿ, ಸಿದ್ದು ಕೋಯಿಲೂರು, ಹಣಮಂತ ತೇಕರಾಳ, ತಬ್ರೇಜ್ ಅಹ್ಮದ್, ಸಾಬು ಹೋರುಂಚಿ, ವಿಜಯ ರಾಠೊಡ, ದೀಪಕ ಒಡೆಯರ, ಸಿದ್ದು ಪಟ್ಟೆದಾರ್, ಮಲ್ಲಿಕಾರ್ಜುನ ಕನ್ನಡಿ,ಲಿಂಗಪ್ಪ ಗುಡುಗುಡಿ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.