ಪಿಜಿ ಕೇಂದ್ರ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವ
Team Udayavani, Dec 29, 2021, 10:32 PM IST
ಲಿಂಗಸುಗೂರು: ಪಟ್ಟಣದ ಮಿನಿ ವಿಧಾನಸೌಧದ ಪಕ್ಕದಲ್ಲಿ 6 ಎಕರೆ ಜಾಗದಲ್ಲಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಡಿ.ಎಸ್. ಹೂಲಗೇರಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ಕಾರ, ರೋಟರಿ ಕ್ಲಬ್ ಹಾಗೂ ಕಾಂಗಿನಿಜೆಂಟ್ ಕಂಪನಿ ಸಹಯೋಗದಲ್ಲಿ ಕಾಲೇಜಿಗೆ 50 ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಿನಿ ವಿಧಾನಸೌಧದ ಪಕ್ಕದಲ್ಲಿ 6 ಎಕರೆ ಜಾಗದಲ್ಲಿ ಕೋರ್ಟ್ ನಿರ್ಮಾಣಕ್ಕೆ ಈ ಹಿಂದೆ ಚಿಂತಿಸಲಾಗಿದೆ. ಆದರೆ ಕೋರ್ಟ್ಗೆ ಬೇರೆಡೆ ನಿವೇಶನ ಒದಗಿಸಲಾಗಿದೆ. ಈಗಿರುವ 6 ಎಕರೆ ಜಾಗದಲ್ಲಿ ಪಿಜಿ ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2 ಸಾವಿರ ಮಕ್ಕಳು ಓದುತ್ತಿದ್ದು ಕೊರತೆ ಇರುವ ಸೌಲಭ್ಯ ಒದಗಿಸಲಾಗಿದೆ. ಜಿಲ್ಲೆಯಲ್ಲೇ ಮಾದರಿ ಸರ್ಕಾರಿ ಪದವಿ ಕಾಲೇಜು ಮಾಡುವ ಆಸೆಯಿಂದಾಗಿ ಇದರ ಅಭಿವೃದ್ಧಿಗೆ ಪ್ರಯತ್ನಿಸುತ್ತಿದ್ದೇನೆ ಎಂದರು.
ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಸಮಾರಂಭ ಉದ್ಘಾಟಿಸಿ, ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಸರ್ಕಾರ ಶಿಕ್ಷಣಕ್ಕಾಗಿ ಅನೇಕ ಯೋಜನೆ ಜಾರಿಗೊಳಿಸಿದ್ದು, ಅವುಗಳನ್ನು ಪಡೆದು ಶಿಕ್ಷಣವಂತರಾಗಬೇಕು ಎಂದರು. ಈ ವೇಳೆ ರೋಟರಿ ಕ್ಲಬ್ನ ನಿಜಾನಂದರೆಡ್ಡಿ, ಎಸ್ .ಬಿ. ಪಾಟೀಲ್, ಮಂಜುನಾಥ ಗಣೇಕಲ್, ಲಕೀÒ$¾ಕಾಂತರೆಡ್ಡಿ, ಕಾಲೇಜು ಪ್ರಾಚಾರ್ಯ ಡಾ| ಮಹಾಂತಗೌಡ ಪಾಟೀಲ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.