ಮಂಡ್ಯ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ಸಿಸಿಟಿವಿಯಲ್ಲಿ ಕಳ್ಳತನ ದೃಶ್ಯ ಸೆರೆ
Team Udayavani, Dec 30, 2021, 12:30 PM IST
ಮಂಡ್ಯ: ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ರಾತ್ರಿ ಕಳ್ಳನೊಬ್ಬ ಹುಂಡಿಯ ಹಣ ದೋಚುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೇವಾಲಯದ ಹಿಂಭಾಗದ ಬಾಗಿಲ ಹೊಡೆದು ಒಳನುಗ್ಗುವ ಕಳ್ಳ ಹುಂಡಿಯ ಬೀಗ ಒಡೆದು ಇರುವ ಸ್ವಲ್ಪ ಹಣವನ್ನು ದೋಚಿದ್ದಾನೆ.
ಕಳೆದ ನಾಲ್ಕು ದಿನಗಳ ಹಿಂದೆ ಹನುಮ ಜಯಂತಿ ಮಾರನೇ ದಿನ ಹುಂಡಿ ಎಣಿಕೆ ಮಾಡಲಾಗಿತ್ತು. ಅಂದಿನಿಂದ ಹುಂಡಿಯಲ್ಲಿ ಸ್ವಲ್ಪ ಹಣ ಸಂಗ್ರಹವಾಗಿತ್ತು. ಅದನ್ನು ಕೊಂಡೊಯ್ದಿದ್ದಾನೆ ಎಂದು ಅರ್ಚಕ ಗೋಪಿ ಅವರು ತಿಳಿಸಿದರು.
ಬುಧವಾರ ಬೆಳಿಗ್ಗೆ ದೇವಾಲಯಕ್ಕೆ ಪೂಜೆ ಮಾಡಲು ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ನಂತರ ಸಿಸಿ ಟಿವಿ ಪರಿಶೀಲಿಸಿದಾಗ ಕಳ್ಳನ ಕೈಚಳಕ ಸೆರೆಯಾಗಿದೆ.
ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು : ಮಹಿಳೆ ಸಾವು
ಹುಂಡಿ ಹಣ ತೆಗೆದಿದ್ದರಿಂದ ಹೆಚ್ಚಿನ ಹಣ ಸಿಕ್ಕಿಲ್ಲ. ಆದ್ದರಿಂದ ಯಾವುದೇ ದೂರು ದಾಖಲಿಸಿಲ್ಲ ಎಂದು ಅರ್ಚಕ ಉದಯವಾಣಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.