ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 23 ಕೂಲಿ ಕಾರ್ಮಿಕರಲ್ಲಿ ಕೋವಿಡ್ ಸೋಂಕು
Team Udayavani, Dec 30, 2021, 3:10 PM IST
ಸಕಲೇಶಪುರ: ಪಶ್ಚಿಮ ಬಂಗಾಳದಿಂದ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಆಗಮಿಸಿದ್ದ 23 ಮಂದಿಗೆ ಕೋವಿಡ್-19 ಸೋಂಕು ತಗಲಿರುವ ಪ್ರಕರಣ ತಾಲೂಕಿನಲ್ಲಿ ಪತ್ತೆಯಾಗಿದೆ. ತಾಲೂಕಿನ ದೇವಿಹಳ್ಳಿ ಎಸ್ಟೇಟ್ ಹಾಗೂ ಆನೆಮಹಲ್ ಎಸ್ಟೇಟ್ ಗಳಲ್ಲಿ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಶ್ಚಿಮ ಬಂಗಾಳ ಮೂಲದ 35 ಕೂಲಿ ಕಾರ್ಮಿಕರಲ್ಲಿ 23 ಮಂದಿ ಗೆ
ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.
ಸದರಿ ಕಾರ್ಮಿಕರಲ್ಲಿ ಕಳೆದ ವಾರ ಇಬ್ಬರು ಕಾರ್ಮಿಕರು ಪಶ್ಚಿಮ ಬಂಗಾಳಕ್ಕೆ ತೆರಳಿ ಸಕಲೇಶಪುರಕ್ಕೆ ವಾಪಸಾಗಿದ್ದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಇಬ್ಬರಿಗೆ ಮೊದಲು ಕೋವಿಡ್ ಕಾಣಿಸಿಕೊಂಡಿದ್ದು ನಂತರ ಪರೀಕ್ಷೆ ಮಾಡಿದಾಗ 23 ಮಂದಿಗೆ ಕೋವಿಡ್ ತಗಲಿರುವುದು ಧೃಡವಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು ಹಾಗೂ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಇತರೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.