ಭಾರತ: 24ಗಂಟೆಯಲ್ಲಿ 16,764 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 1,270ಕ್ಕೆ ಏರಿಕೆ
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 91,361ಕ್ಕೆ ತಲುಪಿರುವುದಾಗಿ ವರದಿ ವಿವರಿಸಿದೆ.
Team Udayavani, Dec 31, 2021, 10:31 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 16,764 ದಾಖಲೆ ಪ್ರಮಾಣದ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 220 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,81,080ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಡಿಸೆಂಬರ್ 31) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಶ್ರೀನಗರದಲ್ಲಿ ಮತ್ತೊಂದು ಎನ್ ಕೌಂಟರ್: 24 ಗಂಟೆಯಲ್ಲಿ 9 ಮಂದಿ ಉಗ್ರರ ಹತ್ಯೆಗೈದ ಸೇನೆ
ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 8,959 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 91,361ಕ್ಕೆ ತಲುಪಿರುವುದಾಗಿ ವರದಿ ವಿವರಿಸಿದೆ.
ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 7,585 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಒಟ್ಟು 3,42,66,363 ಮಂದಿ ಚೇತರಿಸಿಕೊಂಡಿದ್ದಾರೆ. ಏತನ್ಮಧ್ಯೆ ದೇಶದಲ್ಲಿ ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 450 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ದೆಹಲಿಯಲ್ಲಿ 320, ಕೇರಳದಲ್ಲಿ 109, ಗುಜರಾತ್ ನಲ್ಲಿ 97, ರಾಜಸ್ಥಾನದಲ್ಲಿ 69, ತೆಲಂಗಾಣದಲ್ಲಿ 62, ತಮಿಳುನಾಡಿನಲ್ಲಿ 46, ಕರ್ನಾಟಕದಲ್ಲಿ 34 ಪ್ರಕರಣಗಳು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.